Apr 7, 2023, 1:46 PM IST
ಕೈ ಟಿಕೆಟ್ ಭರವಸೆ ಸಿಕ್ಕ ಮೇಲೆ ಜೆಡಿಎಸ್ ಬಿಟ್ಟು ಕಾಂಗ್ರೆಸ್ ಸೇರ್ಪಡೆಯಾಗಿದ್ದ ಮಾಜಿ ಶಾಸಕ ವೈಎಸ್ವಿದತ್ತಾಗೆ ಕಾಂಗ್ರೆಸ್ ಟಿಕೆಟ್ ತಪ್ಪಿದೆ. ದತ್ತಾಗೆ ಟಿಕೆಟ್ ಕೊಡಿಸಲು ಸಿದ್ದರಾಮಯ್ಯ ಸಾಕಷ್ಟು ಪ್ರಯತ್ನ ಪಟ್ಟಿದ್ದು,ಸಿದ್ದರಾಮಯ್ಯ ಸಲಹೆಯಂತೆ ಜೆಡಿಎಸ್ ತೊರೆದು ಕಾಂಗ್ರೆಸ್ ಬಂದಿದ್ದರು. ಇನ್ನು ಕಡೂರು ಕ್ಷೇತ್ರಕ್ಕೆ ಸಹಜವಾಗಿ ಟಿಕೆಟ್ ಆಕಾಂಕ್ಷಿಯಾಗಿದ್ದರು ದತ್ತಾ . ಆದರೆ ಕೊನೆಯ ಗಳಿಗೆಯಲ್ಲಿ ಆನಂದ್ ಕೆ.ಎಸ್ ಗೆ ಟಿಕೆಟ್ ನೀಡಲಾಗಿದೆ. ಹೀಗಾಗಿ ಕಾಂಗ್ರೆಸ್ ನಾಯಕರ ವಿರುದ್ಧ ಸಿಡಿದೆದ್ದಿದ್ದು, ಮುಂದಿನ ರಾಜಕೀಯ ನಡೆ ಬಗ್ಗೆ ತೀರ್ಮಾನಿಸಲು ಅಭಿಮಾನಿಗಳ ಸಭೆ ಕರೆದಿದ್ದಾರೆ.ಏಪ್ರಿಲ್ 09 ಬೆಳಗ್ಗೆ 11ಕ್ಕೆ ಅಭಿಮಾನಿಗಳ ಸಭೆ ಕರೆದಿದ್ದಾರೆ.