Puneeth Rajkumar ಅಗಲಿ ಇಂದಿಗೆ ಮೂರು ತಿಂಗಳು: ಕುಟುಂಬದಿಂದ ಸಮಾಧಿಗೆ ಪೂಜೆ

Puneeth Rajkumar ಅಗಲಿ ಇಂದಿಗೆ ಮೂರು ತಿಂಗಳು: ಕುಟುಂಬದಿಂದ ಸಮಾಧಿಗೆ ಪೂಜೆ

Published : Jan 29, 2022, 03:58 PM ISTUpdated : Jan 29, 2022, 04:06 PM IST

ಸ್ಯಾಂಡಲ್‌ವುಡ್‌ನ ಪವರ್​ ಸ್ಟಾರ್​ ಪುನೀತ್​ ರಾಜ್​ಕುಮಾರ್ ನಿಧನರಾಗಿ ಇಂದಿಗೆ ಮೂರು ತಿಂಗಳುಗಳೇ ಕಳೆದು ಹೋಗಿದೆ. ಈ ಹಿನ್ನೆಲೆಯಲ್ಲಿ ಕುಟುಂಬಸ್ಥರು ಕಂಠೀರವ ಸ್ಟುಡಿಯೋ ಆವರಣದಲ್ಲಿ ಇರುವ ಪುನೀತ್ ಸಮಾಧಿಗೆ ಪೂಜೆ ಸಲ್ಲಿಸಿದ್ದಾರೆ. 

ಸ್ಯಾಂಡಲ್‌ವುಡ್‌ನ ಪವರ್​ ಸ್ಟಾರ್​ ಪುನೀತ್​ ರಾಜ್​ಕುಮಾರ್ (Puneeth Rajkumar)​ ನಿಧನರಾಗಿ ಇಂದಿಗೆ ಮೂರು ತಿಂಗಳುಗಳೇ ಕಳೆದು ಹೋಗಿದೆ. ಈ ಹಿನ್ನೆಲೆಯಲ್ಲಿ ಕುಟುಂಬಸ್ಥರು ಕಂಠೀರವ ಸ್ಟುಡಿಯೋ (Kanteerava Studio) ಆವರಣದಲ್ಲಿ ಇರುವ ಪುನೀತ್ ಸಮಾಧಿಗೆ ಪೂಜೆ ಸಲ್ಲಿಸಿದ್ದಾರೆ. ಸಮಾಧಿ ಬಳಿ ಅಶ್ವಿನಿ ಪುನೀತ್​ ರಾಜ್​ಕುಮಾರ್,​ ಪುತ್ರಿ ಧೃತಿ, ರಾಘವೇಂದ್ರ ರಾಜ್ ಕುಮಾರ್ ಮತ್ತು ಅವರ ಪತ್ನಿ ಹಾಗೂ ವಿಜಯ್ ರಾಘವೇಂದ್ರ, ಧೀರೇನ್​ ರಾಮ್ ಕುಮಾರ್, ಪುನೀತ್ ಸಹೋದರಿ ಲಕ್ಷ್ಮೀ ಹಾಗೂ ಎಸ್.ಎ.ಗೋವಿಂದ್​ ರಾಜು ಸಮಾಧಿಗೆ ಪೂಜೆ ಪೂಜೆ ಮಾಡಿ ಅಪ್ಪುಗೆ ಎಡೆ ಇಟ್ಟಿದ್ದಾರೆ. 

James ಚಿತ್ರದಲ್ಲಿ ಪುನೀತ್ ರಾಜ್‌ಕುಮಾರ್‌ ಪಾತ್ರಕ್ಕೆ ಯಾರೂ ಧ್ವನಿ ನೀಡುತ್ತಿಲ್ಲ!

ಬಳಿಕ ಅಪ್ಪು ನೆನಪಿಗಾಗಿ ಅಶ್ವಿನಿ ಪುನೀತ್ ರಾಜ್ ಕುಮಾರ್ ಬಾದಾಮಿ, ಸೀಬೆ, ಮಾವು, ತೇಗ, ಹಲಸಿನ ಗಿಡ ಸೇರಿದಂತೆ 500 ಗಿಡಗಳನ್ನು ಅಭಿಮಾನಿಗಳಿಗೆ ದಾನವಾಗಿ ನೀಡಿದ್ದಾರೆ. ಈ ಸಂದರ್ಭದಲ್ಲಿ ಮಾತನಾಡಿದ ರಾಘವೇಂದ್ರ ರಾಜ್‌ಕುಮಾರ್, ಅಪ್ಪು ಅಭಿಮಾನಿಗಳು ಭಕ್ತರಾಗುತ್ತಿದ್ದಾರೆ. ದಿನದಿಂದ ದಿನಕ್ಕೆ ಪುಣ್ಯಭೂಮಿಗೆ ಬರುತ್ತಿರುವ ಅಭಿಮಾನಿಗಳ ಸಂಖ್ಯೆ ಜಾಸ್ತಿ ಆಗುತ್ತಿದೆ. ಅಭಿಮಾನಿಗಳಿಗೆ ಗಿಡ ಕೊಟ್ಟು ಅವರಿಂದಲೇ ಆ ಸಸಿಗಳನ್ನು ನೆಡಲು ಯೋಚಿಸಿದ್ದೇವೆ. ಅಪ್ಪು ನಿಧನರಾಗುವ ಮುನ್ನ ಕಾಡಿನಲ್ಲಿ ಕೆಲಸ ಮಾಡಿದ್ದರು. ಕಾಡು, ಹಸಿರು ಅಂದರೆ ಅಪ್ಪುಗೆ ಬಹಳ ಇಷ್ಟ. ಹಾಗಾಗಿ ಗಿಡ ನೀಡುವ ಕೆಲಸ ಶುರು ಮಾಡಿದ್ದಿವಿ ಎಂದು ಹೇಳಿದರು. 

ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಕ್ಲಿಕಿಸಿ: Asianet Suvarna Entertainment

02:59ಜಯಪ್ರಕಾಶ್ ಶೆಟ್ಟಿ ನಟನೆ, ಕನ್ನಡ-ತುಳು ಭಾಷೆಯ 'ಬನ' ರಿಲೀಸ್ ಡೇಟ್ ಅನೌನ್ಸ್!
02:24ನೆಪೋಟಿಸಂ ಬಗ್ಗೆ ಪ್ರಿಯಾಂಕಾ ಉಪೇಂದ್ರ ಹೇಳಿದ್ದೇನು..?!
04:57ಅಪ್ಪನ ಆಸೆ.. ಮಗಳ ಕನಸು.. ಅಪ್ಪ ಇಟ್ಟ ಹೆಸರಲ್ಲೇ ಬಿಜಿನೆಸ್​ಶುರು ಮಾಡಿದ ಅಪ್ಪು ಪುತ್ರಿ ವಂದಿತಾ..!
02:36Yash: ನಟ ಯಶ್​ ಹೃದಯವಂತ, ಜೊತೆ ಕೆಲಸ ಮಾಡಿದ್ದು ಅದ್ಭುತ ಅನುಭವ: ತಾರಾ ಸುತಾರಿಯಾ
08:02Toxic Movie: ಲಸ್ಟ್ ಸ್ಟೋರೀಸ್, ಕಬೀರ್ ಸಿಂಗ್ ಆಯ್ತು; ಮದುವೆಯಾಗಿ ಮಗು ಆದ್ರೂ ಕಮ್ಮಿಯಾಗಿಲ್ಲ Kiara Advani ಬ್ಯೂಟಿ
09:56Yash Toxic Movie Tabaahi Song: ಯಶ್‌, ಕಿಯಾರಾ ಅಡ್ವಾಣಿ ಕೆಮಿಸ್ಟ್ರಿಗೆ ದಂಗಾದ ಇಂಟರ್‌ನೆಟ್‌ ಜಗತ್ತು!
04:04ಶಿವಣ್ಣ-ಧನಂಜಯ್ ಮತ್ತೊಮ್ಮೆ ಜೊತೆಯಾಟ.. ಹೇಮಂತ್ ರಾವ್ ನಿರ್ದೇಶನದಲ್ಲಿ '...ಡ್ರೀಮ್ ಥಿಯೇಟರ್..!
09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
05:49Toxic: Ladies & Ladies Teaser: 3 ಟೀಸರ್.. 100 ಮ್ಯಾಟರ್: ಇದ್ರಲ್ಲಿ ಲೇಡೀಸ್ ಗ್ಯಾಂಗ್ ಆರ್ಭಟ!
07:55Toxic: ಟಾಕ್ಸಿಕ್ ಸೌಂದರ್ಯ & ಸಮರ; ಲೇಡೀಸ್ ಸ್ಪೆಷಲ್ ಟೀಸರ್ ಸೆನ್ಸೇಷನ್‌ ಏನ್ ಹೇಳ್ತಿದೆ?
Read more