68th National Film Awards: ಕನ್ನಡ ಚಿತ್ರರಂಗಕ್ಕೆ ನಾಲ್ಕು ರಾಷ್ಟ್ರ ಪ್ರಶಸ್ತಿಯ ಗರಿ

Oct 2, 2022, 11:25 AM IST

68ನೇ ಸಾಲಿನ ರಾಷ್ಟ್ರ ಪ್ರಶಸ್ತಿ ಪ್ರದಾನ ಕಾರ್ಯಕ್ರಮ ದೆಹಲಿಯ ವಿಗ್ಯಾನ್​ ಭವನದಲ್ಲಿ ನಡೆದಿದೆ. ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ವಿಜೇತರಿಗೆ ಪ್ರಶಸ್ತಿ ಪ್ರದಾನ ಮಾಡಿದ್ದಾರೆ. ಪವನ್ ಒಡೆಯರ್ ನಿರ್ಮಾಣದ ಡೊಳ್ಳು ಚಿತ್ರಕ್ಕೆ ಎರಡು ಪ್ರಶಸ್ತಿಗಳು ಲಭಿಸಿವೆ. ಅದರಲ್ಲಿ ಒಂದು ಅತ್ಯುತ್ತಮ ಕನ್ನಡ ಸಿನಿಮಾ ಪ್ರಶಸ್ತಿ ಆದ್ರೆ ಮತ್ತೊಂದು ಅತ್ಯುತ್ತಮ ಆಡಿಯೋಗ್ರಫಿ ಪ್ರಶಸ್ತಿಯನ್ನ ಡೊಳ್ಳು ಚಿತ್ರ ಬಾಚಿಕೊಂಡಿದೆ. ಇದರ ಜೊತೆಗೆ ಅತ್ಯುತ್ತಮ ಪರಿಸರ ಕಾಳಜಿಯಳ್ಳ ಸಿನಿಮಾ ಎಂದು ಸಂಚಾರಿ ವಿಜಯ್ ನಟನೆಯ ‘ತಲೆದಂಡ’ ಚಿತ್ರಕ್ಕೆ ಪ್ರಶಸ್ತಿ ನೀಡಲಾಗಿದೆ. ಅಷ್ಟೆ ಅಲ್ಲ ‘ಅತ್ಯುತ್ತಮ ಕಲೆ ಹಾಗೂ ಸಾಂಸ್ಕೃತಿಕ ಸಿನಿಮಾ’ ವಿಭಾಗದಲ್ಲಿ ಗಿರೀಶ್​ ಕಾಸರವಳ್ಳಿ ನಿರ್ದೇಶನದ ‘ನಾದದ ನವನೀತ ಡಾ. ಪಿಟಿ ವೆಂಕಟೇಶ್​ ಕುಮಾರ್​’ ಚಿತ್ರಕ್ಕೆ ಈ ಬಾರಿ ರಾಷ್ಟ್ರ ಪ್ರಶಸ್ತಿ ಸಿಕ್ಕಿದೆ. ಅಜಯ್​ ದೇವಗನ್​ ತಾನಾಜಿ ಚಿತ್ರಕ್ಕಾಗಿ ಹಾಗೂ ಸೂರ್ಯ ಸೂರರೈ ಪೋಟ್ರು ಸಿನಿಮಾಗಾಗಿ‘ಅತ್ಯುತ್ತಮ ನಟ’ ಪ್ರಶಸ್ತಿ ಹಂಚಿಕೊಂಡಿದ್ದಾರೆ. ‘ಸೂರರೈ ಪೋಟ್ರು’ ಚಿತ್ರದ ನಟನೆಗಾಗಿ ಅಪರ್ಣಾ ಬಾಲಮುರಳಿ ‘ಅತ್ಯುತ್ತಮ ನಟಿ’ ಪ್ರಶಸ್ತಿ ಸ್ವೀಕರಿಸಿದ್ದಾರೆ. ಮಲೆಯಾಳಂನ  ‘ಅಯ್ಯಪ್ಪನುಮ್​ ಕೋಶಿಯುಂ’ ಚಿತ್ರದಲ್ಲಿನ ಅಭಿನಯಕ್ಕೆ ಬಿಜು ಮೆನನ್​ ಅವರು ‘ಅತ್ಯುತ್ತಮ ಪೋಷಕ ನಟ’ ಪ್ರಶಸ್ತಿಗೆ ಭಾಜನರಾಗಿದ್ರೆ, ತಮಿಳು ನಟಿ ಲಕ್ಷ್ಮೀ ಪ್ರಿಯಾ ಚಂದ್ರಮೌಳಿ ಅವರಿಗೆ ‘ಅತ್ಯುತ್ತಮ ಪೋಷಕ ನಟಿ’ ಪ್ರಶಸ್ತಿ ಸಿಕ್ಕಿದೆ. 

ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಕ್ಲಿಕ್ಕಿಸಿ: Asianet Suvarna Entertainment