ರಜನಿಕಾಂತ್ ಸಿನಿಮಾದಲ್ಲಿ ಶಿವರಾಜ್ ಕುಮಾರ್ ಪಾತ್ರ ಬಹಿರಂಗ

Aug 19, 2022, 3:27 PM IST

ಹ್ಯಾಟ್ರಿಕ್ ಹೀರೋ ಶಿವರಾಜ ಕುಮಾರ್ ಮೊದಲ ಬಾರಿಗೆ ಸೂಪರ್ ಸ್ಟಾರ್ ರಜನಿಕಾಂತ್ ಜೊತೆ ನಟಿಸುತ್ತಿದ್ದಾರೆ. ಇಬ್ಬರು ಒಟ್ಟಿಗೆ ಸಿನಿಮಾ ಮಾಡುತ್ತಿದ್ದಾರೆ ಎನ್ನುವ ವಿಚಾರ ಬಹಿರಂಗವಾಗುತ್ತಿದ್ದಂತೆ ಅಭಿಮಾನಿಗಳ ಕುತೂಹಲ, ನಿರೀಕ್ಷೆ ಹೆಚ್ಚಾಗಿದೆ. ರಜನಿಕಾಂತ್ ಸಿನಿಮಾದಲ್ಲಿ ಶಿವಣ್ಣ ಹೇಗೆ ಕಾಣಿಸಿಕೊಳ್ಳಲಿದ್ದಾರೆ ಎಂದು ಹ್ಯಾಟ್ರಿಕ್ ಹೀರೋ ಅಭಿಮಾನಿಗಳು ಕಾತರದಿಂದ ಕಾಯುತ್ತಿದ್ದಾರೆ. ಸದ್ಯ ಶಿವಣ್ಣನ ಪಾತ್ರ ರಿವೀಲ್ ಆಗಿದೆ. ಹ್ಯಾಟ್ರಿಕ್ ಹೀರೋ ಸೂಪರ್ ಸ್ಟಾರ್ ರಜನಿಕಾಂತ್ ಅವರಿಗೆ ಶಿವಣ್ಣ ವಿಲನ್ ಆಗಲಿದ್ದಾರೆ ಎನ್ನಲಾಗುತ್ತಿದೆ. ಆದರೆ ಇದು ಎಷ್ಟರ ಮಟ್ಟಿಗೆ ನಿಜ ಎನ್ನುವುದು ಗೊತ್ತಿಲ್ಲ. ಯಾಕೆಂದರೆ ಶಿವಣ್ಣ ಇದುವರೆಗೂ ವಿಲನ್ ಆಗಿ ಕಾಣಿಸಿಕೊಂಡಿಲ್ಲ. ಹಾಗಾಗಿ ರಜನಿಕಾಂತ್ ಜೊತೆ ವಿಲನ್ ಆಗಿ ಕಾಣಿಸಿಕೊಳ್ಳುತ್ತಾರಾ ಎಂದು ಕಾದುನೋಡಬೇಕಿದೆ.