Upendra: ಅಭಿಮಾನಿಗಳ ತಲೆಗೆ ಹುಳ ಬಿಟ್ಟ ಸ್ಯಾಂಡಲ್‌ವುಡ್‌ನ ರಿಯಲ್ ಸ್ಟಾರ್!

Upendra: ಅಭಿಮಾನಿಗಳ ತಲೆಗೆ ಹುಳ ಬಿಟ್ಟ ಸ್ಯಾಂಡಲ್‌ವುಡ್‌ನ ರಿಯಲ್ ಸ್ಟಾರ್!

Suvarna News   | Asianet News
Published : Mar 10, 2022, 05:50 PM IST

ಸ್ಯಾಂಡಲ್‌ವುಡ್‌ನ ರಿಯಲ್ ಸ್ಟಾರ್ ಉಪೇಂದ್ರ 'ಹೋಮ್ ಮಿನಿಸ್ಟರ್' ಚಿತ್ರದ ಕೆಲಸಗಳಲ್ಲಿ ಬ್ಯುಸಿಯಾಗಿದ್ದು, ಈ ಮಧ್ಯೆ ಸದ್ದಿಲ್ಲದೇ ಒಂದು ಬಿಗ್ ಬ್ರೇಕಿಂಗ್ ನ್ಯೂಸ್ ನೀಡುವುದಕ್ಕೆ ಸಜ್ಜಾಗಿದ್ದಾರೆ.

ಸ್ಯಾಂಡಲ್‌ವುಡ್‌ನ ರಿಯಲ್ ಸ್ಟಾರ್ ಉಪೇಂದ್ರ (Upendra) 'ಹೋಮ್ ಮಿನಿಸ್ಟರ್' (Home Minister) ಚಿತ್ರದ ಕೆಲಸಗಳಲ್ಲಿ ಬ್ಯುಸಿಯಾಗಿದ್ದು, ಈ ಮಧ್ಯೆ ಸದ್ದಿಲ್ಲದೇ ಒಂದು ಬಿಗ್ ಬ್ರೇಕಿಂಗ್ ನ್ಯೂಸ್ ನೀಡುವುದಕ್ಕೆ ಸಜ್ಜಾಗಿದ್ದಾರೆ. ಹೌದು! ಮಾರ್ಚ್ 9ರಂದು ಸಾಮಾಜಿಕ ಜಾಲತಾಣದಲ್ಲಿ (Social Media) ಪೋಸ್ಟ್‌ವೊಂದನ್ನು ಹಂಚಿಕೊಂಡಿದ್ದಾರೆ. ಅದರಲ್ಲಿ 'ಸೇವ್ ದಿಸ್‌ ಡೇಟ್' ಅಂತ ಇದೆ. ಮಾರ್ಚ್ 11ರ ಮಧ್ಯಾಹ್ನ 12.46ಕ್ಕೆ ಅವರೊಂದು ಮಹತ್ವದ ಘೋಷಣೆ ಮಾಡಲಿದ್ದಾರೆ. ಆ ಕಾರಣಕ್ಕೆ 'ಸೇವ್ ದಿಸ್‌ ಡೇಟ್' ಅಂತ ಪೋಸ್ಟ್ ಹಾಕಿದ್ದಾರೆ. ಈ ಪೋಸ್ಟ್ ನೋಡಿದ್ದೇ ತಡ ಅವರ ಅಭಿಮಾನಿಗಳು (Fans) ತಲೆಗೆ ಹುಳ  ಬಿಟ್ಟುಕೊಂಡಿದ್ದಾರೆ. 

Kabza Movie: ಉಪ್ಪಿ ಅಡ್ಡಾಕ್ಕೆ ಎಂಟ್ರಿ ಕೊಟ್ಟ ನಟಿ ಶ್ರೀಯಾ ಶರಣ್‌

ಹಾಗಾಗಿ ಅಂದು ಉಪೇಂದ್ರ ಏನು ಮಾಹಿತಿ ನೀಡಬಹುದು ಎಂಬ ನಿರೀಕ್ಷೆ ಹೆಚ್ಚಾಗಿದೆ. ವಿಶೇಷವಾಗಿ ಮಾರ್ಚ್ 11ರಂದು ಉಪೇಂದ್ರ ನಿರ್ದೇಶನದ 11ನೇ ಸಿನಿಮಾ ಘೋಷಣೆ ಆಗುವ ಸಾಧ್ಯತೆ ಇದೆ. ಮಾತ್ರವಲ್ಲದೇ ಪ್ರಜಾಕೀಯ ಪಕ್ಷದ ಬಗ್ಗೆ ಯಾವುದಾದರೂ ಮಾಹಿತಿಯನ್ನು ಉಪೇಂದ್ರ ಹಂಚಿಕೊಳ್ಳುವ ಸಾಧ್ಯತೆಯನ್ನು ತಳ್ಳಿಹಾಕುವಂತಿಲ್ಲ. ಇತ್ತೀಚೆಗಷ್ಟೇ ಉಪೇಂದ್ರ ಆಕ್ಷನ್ ಕಟ್ ಮಾಡಲಿದ್ದಾರೆ ಎನ್ನಲಾಗಿದ್ದ ಸಿನಿಮಾದ ಫಸ್ಟ್ ಲುಕ್‌ವೊಂದು (Firstlook) ಲೀಕ್ ಆಗಿತ್ತು. ಫಸ್ಟ್ ಲುಕ್‌ನಲ್ಲಿ ಸಿನಿಮಾದ ಟೈಟಲ್‌ ಮೂರು ನಾಮದ ಸಿಂಬಲ್ ಹೊಂದಿತ್ತು.ಈ ಹಿಂದೆ 'ಸೂಪರ್' (Super) ಸಿನಿಮಾಗೂ ಅವರು ಚಿಹ್ನೆಯನ್ನೇ ಬಳಸಿದ್ದರು.

ಸಿನಿಮಾ ಹಂಗಾಮಾ ವೀಡಿಯೋಗಳನ್ನು ವೀಕ್ಷಿಸಲು ಇಲ್ಲಿ ಕ್ಲಿಕ್ಕಿಸಿ: https://kannada.asianetnews.com/movies

04:51ಎಲ್ಲೆಲ್ಲೂ 'ಗಿಲ್ಲಿ ನಟ'ನದೇ ದರ್ಬಾರ್.. ಬಿಗ್ ಬಾಸ್‌ನಲ್ಲೂ ಬಿಗ್ ಸ್ಕ್ರೀನ್‌ನಲ್ಲೂ ಸಖತ್ ಸದ್ದು..!
05:21ರಾಜ್ಯಾದ್ಯಂತ Devil ಜಾತ್ರೆ.. ಮ್ಯಾಸಿವ್ ಓಪನಿಂಗ್: ದರ್ಶನ್ ನೋಡಿದ ಅಭಿಮಾನಿಗಳು ಹೇಳಿದ್ದೇನು?
04:44ನಾ ಬಂದೆ ಚಿನ್ನ: 'ದಿ ಡೆವಿಲ್' ಗ್ರ್ಯಾಂಡ್ ಎಂಟ್ರಿ.. ರಾಜ್ಯಾದ್ಯಂತ 400+ ಸ್ಕ್ರೀನ್‌ಗಳಲ್ಲಿ ದರ್ಶನ್ ಆಟ ಶುರು
05:38ದರ್ಶನ್ ಜೈಲಿನಲ್ಲಿ.. 'ದಿ ಡೆವಿಲ್‌' ಗೆಲ್ಲಿಸ್ತಾರಾ ಪ್ಯಾನ್ಸ್‌..? ಮತ್ತೊಂದು 'ಸಾರಥಿ' ಆಗುತ್ತಾ ಈ ಸಿನಿಮಾ?
24:18ರಿಷಬ್​​ ಶೆಟ್ಟಿ ಮಡಿಲಲ್ಲಿ ಮಲಗಿದ ದೈವ ನರ್ತಕ: ದೈವಾರಾಧಕರ ಆಕ್ರೋಶ, ಏನಿದು ಪಂಜುರ್ಲಿ?
03:42ಜೀ ಕನ್ನಡದಲ್ಲಿ ಆದಿ ಲಕ್ಷ್ಮೀ ಪುರಾಣ ಆರಂಭ.. ಡೆವಿಲ್​ ಜೊತೆ ಪಿವೋಟ್ ಚಿತ್ರ ರಿಲೀಸ್!
04:13ಡೆವಿಲ್ Vs ಮಾರ್ಕ್.. ಯಾರಿಗೆಷ್ಟು ಮಾರ್ಕ್ಸ್? ಬಾಕ್ಸಾಫೀಸ್​ ಗಳಿಕೆಯಲ್ಲಿ ಯಾರು ಗೆಲ್ತಾರೆ?
02:16ಬೇರೆಯದೇ ಸಂದೇಶ ಕೊಡುತ್ತಿರೋ 'ದಿ ಡೆವಿಲ್’ ಟ್ರೈಲರ್; ದರ್ಶನ್ ಫ್ಯಾನ್ಸ್‌ ಮುಖದಲ್ಲಿ ಮೂಡ್ತಿದೆ ಮಂದಹಾಸ!
05:19ದರ್ಶನ್ ಕಷ್ಟಕ್ಕೆ ಕಾರಣ ಅದೇನಾ..? 'ಡೆವಿಲ್' ನೆಗೆಟಿವ್ ಟೈಟಲ್ ಸುದ್ದಿಗೆ ಬಿಗ್ ಟ್ವಿಸ್ಟ್; ಸೀಕ್ರೆಟ್ ಹೊರಬಂತು!
02:55ನಿಜವಾಗಿಯೂ ಬಿಗ್ ಬಾಸ್ ಒಳಗೆ ಏನ್ ನಡಿತಾ ಇದೆ? ಜಾಹ್ನವಿ ಹೇಳಿದ ದೊಡ್ಮನೆ ಸತ್ಯ ಕಥೆ ನೋಡಿ..!
Read more