Oct 21, 2022, 12:25 PM IST
ಬೆಂಗಳೂರಿನ ಪ್ಯಾಲೇಸ್ ಗ್ರೌಂಡ್‌ನಲ್ಲಿ ನಡೆಯುತ್ತಿರುವ ಅದ್ದೂರಿ ಪುನೀತ ಪರ್ವ ಕಾರ್ಯಕ್ರಮಕ್ಕೆ ಭರ್ಜರಿ ಸಿದ್ಧತೆ ನಡೆಯುತ್ತಿದೆ. ಈಗಾಗಲೇ ವೇದಿಕೆ ಸಿದ್ಧವಾಗಿದೆ. ಲಕ್ಷಾಂತರ ಅಭಿಮಾನಿಗಳು ಪುನೀತ ಪರ್ವ ಕಾರ್ಯಕ್ರಮ ಕಣ್ತುಂಬಿಕೊಳ್ಳಲಿದ್ದಾರೆ. ಅಶ್ವಿನಿ ಪುನೀತ್ ರಾಜ್ ಕುಮಾರ್ ಅವರೇ ಮುಂದೆ ನಿಂತು ಎಲ್ಲಾ ತಯಾರಿ ಮಾಡಿಸುತ್ತಿದ್ದಾರೆ. ಕಳೆದ ಎರಡು ಮೂರು ದಿನಗಳಿಂದ ಅಶ್ವಿನಿ ಗ್ರೌಂಡ್‌ನಲ್ಲೇ ಇದ್ದು ತಯಾರಿ ನೋಡಿಕೊಳ್ಳುತ್ತಿದ್ದಾರೆ. ಇಂದು ಬೆಳಗ್ಗೆಯೇ ಪ್ಯಾಲೇಸ್ ಗ್ರೌಂಡ್‌ಗೆ ಆಗಮಿಸಿದ್ದ ಅಶ್ವಿನಿ ಎಲ್ಲಾ ತಯಾರಿ ಪರಿಶೀಲಿಸಿದರು. ಬಳಿಕ ಅಪ್ಪು ಸಮಾಧಿಗೆ ಭೇಟಿ ನೀಡಿ ಪೂಜೆ ಸಲ್ಲಿಸಿದರು.