Darshan: ನಟ ದರ್ಶನ್‌ಗೆ ಡಬಲ್ ಶಾಕ್..! ಇನ್ನೂ 14 ದಿನ ನ್ಯಾಯಾಂಗ ಬಂಧನದಲ್ಲಿ, ಮತ್ತೆ ಮುಂದುವರೆದ ಜೈಲೂಟ!

Darshan: ನಟ ದರ್ಶನ್‌ಗೆ ಡಬಲ್ ಶಾಕ್..! ಇನ್ನೂ 14 ದಿನ ನ್ಯಾಯಾಂಗ ಬಂಧನದಲ್ಲಿ, ಮತ್ತೆ ಮುಂದುವರೆದ ಜೈಲೂಟ!

Published : Jul 19, 2024, 09:38 AM ISTUpdated : Jul 19, 2024, 10:03 AM IST

ಕನ್ನಡ ನಟ ದರ್ಶನ್ ಬಹುಷಃ ತಮ್ಮ ಜಿವನದಲ್ಲಿ ಮತ್ತೆ ಜೈಲು ಮೆಟ್ಟಿಲು ಹತ್ತೊ ಕನಸನ್ನೂ ಕಂಡಿರಲಿಲ್ಲ ಅನ್ನಿಸುತ್ತೆ. ಆದ್ರೆ ಪರಪ್ಪನ ಅಗ್ರಹಾರ ಜೈಲಿನಲ್ಲಿ ಇರುವ ನಟ ದರ್ಶನ್‌ಗೆ ಸದ್ಯಕ್ಕಂತೂ ಜಾಮೀನು ಸಿಗುವ ಲಕ್ಷಣ ಕಾಣಿಸುತ್ತಿಲ್ಲ.

ಜುಲೈ 18 ಅವರ ನ್ಯಾಯಾಂಗ ಬಂಧನವನ್ನು ಮತ್ತೆ 14 ದಿನಗಳ ಕಾಲ ವಿಸ್ತರಣೆ ಮಾಡಲಾಗಿದೆ. ರೇಣುಕಾಸ್ವಾಮಿ ಕೊಲೆ ಪ್ರಕರಣದ (Renukaswamy murder case) ಆರೋಪಿಗಳ ನ್ಯಾಯಾಂಗ ಬಂಧನದ(Judicial custody) ಅವಧಿ ಮುಕ್ತಾಯವಾದ ಹಿನ್ನೆಲೆ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿತ್ತು. ವಿಡಿಯೋ ಕಾನ್ಫರೆನ್ಸ್ ಮೂಲಕ ದರ್ಶನ್(Darshn), ಪವಿತ್ರಾ ಗೌಡ (Pavithra Gowda)ಹಾಗೂ ಇನ್ನುಳಿದ ಆರೋಪಿಗಳು ಹಾಜರಾಗಿದ್ದರು. ಎಲ್ಲರಿಗೂ ಆಗಸ್ಟ್ 1ರ ತನಕ ನ್ಯಾಯಾಂಗ ಬಂಧನ ಮುಂದುವರಿಯಲಿದೆ. ಈ ಮೂಲಕ ದರ್ಶನ್ ಮತ್ತೆ ಹಿನ್ನೆಡೆಯಾಗಿದ್ದು ದರ್ಶನ್ಗೆ ದೊಡ್ಡ ನಿರಾಸೆ ಎದುರಾಗಿದೆ. ಚಿತ್ರದುರ್ಗದ ರೇಣುಕಾ ಸ್ವಾಮಿ ಎಂಬಾತನನ್ನು  ಪವಿತ್ರಗೌಡಾಗೆ ಅಶ್ಲೀಲ ಮೆಸೇಜ್ ಕಳುಹಿಡಿದ ಎಂಬ ಕಾರಣಕ್ಕೆ ಬೆಂಗಳೂರಿಗೆ ಕರೆದುಕೊಂಡು ಬಂದು, ಕೊಲೆ ಮಾಡಿದ ಆರೋಪದಲ್ಲಿ ದರ್ಶನ್, ಪವಿತ್ರಾ ಗೌಡ ಸೇರಿ 17 ಜನರು ಜೈಲು ಪಾಲಾಗಿದ್ದಾರೆ. ಆದಷ್ಟು ಬೇಗ ಜಾಮೀನು ಪಡೆಯಬೇಕು ಎಂದು ದರ್ಶನ್ ಪ್ರಯತ್ನಿಸುತ್ತಿದ್ದಾರೆ. ಆದರೆ ಇದು ಕೊಲೆ ಪ್ರಕರಣ ಆದ್ದರಿಂದ ಅವರಿಗೆ ಜಾಮೀನು ಪಡೆಯುವುದು ಕಷ್ಟವಾಗಿದೆ. ಇನ್ನೂ 14 ದಿನಗಳ ಕಾಲ ಅವರು ಜೈಲಿನಲ್ಲಿ ಕಾಲ ಕಳೆಯುವುದು ಅನಿವಾರ್ಯ ಆಗಿದೆ. ದರ್ಶನ್‌ಗೆ ಮತ್ತೆ ಜೈಲೂಟವೇ ಫಿಕ್ಸಾಗಿದೆ. ಇದು ಅವರ ಅಭಿಮಾನಿಗಳಿಗೂ ನುಂಗಲಾರದ ತುತ್ತಾಗಿದೆ. ನ್ಯಾಯಾಂಗ ಬಂಧನ ಅವಧಿ ವಿಸ್ತರಣೆಗೂ ಮುನ್ನವೇ ಹೈಕೋರ್ಟ್‌ನಲ್ಲಿ ದರ್ಶನ್ ಅವರಿಗೆ ನಿರಾಸೆಯಾಗಿದೆ. 

ಇದನ್ನೂ ವೀಕ್ಷಿಸಿ:  ಜೈಲಿಗೆ ಹೋಗುತ್ತಿದ್ದಂತೆ ದರ್ಶನ್‌ಗೆ ಆರೋಗ್ಯ ಕೆಟ್ಟಿದ್ದೇಕೆ..? ನಟನ ಬೇಡಿಕೆ ಒಪ್ಪದಂತೆ ಪೊಲೀಸ್ ಕೊಟ್ಟ ಕಾರಣವೇನು..?

04:44ನಾ ಬಂದೆ ಚಿನ್ನ: 'ದಿ ಡೆವಿಲ್' ಗ್ರ್ಯಾಂಡ್ ಎಂಟ್ರಿ.. ರಾಜ್ಯಾದ್ಯಂತ 400+ ಸ್ಕ್ರೀನ್‌ಗಳಲ್ಲಿ ದರ್ಶನ್ ಆಟ ಶುರು
05:38ದರ್ಶನ್ ಜೈಲಿನಲ್ಲಿ.. 'ದಿ ಡೆವಿಲ್‌' ಗೆಲ್ಲಿಸ್ತಾರಾ ಪ್ಯಾನ್ಸ್‌..? ಮತ್ತೊಂದು 'ಸಾರಥಿ' ಆಗುತ್ತಾ ಈ ಸಿನಿಮಾ?
24:18ರಿಷಬ್​​ ಶೆಟ್ಟಿ ಮಡಿಲಲ್ಲಿ ಮಲಗಿದ ದೈವ ನರ್ತಕ: ದೈವಾರಾಧಕರ ಆಕ್ರೋಶ, ಏನಿದು ಪಂಜುರ್ಲಿ?
03:42ಜೀ ಕನ್ನಡದಲ್ಲಿ ಆದಿ ಲಕ್ಷ್ಮೀ ಪುರಾಣ ಆರಂಭ.. ಡೆವಿಲ್​ ಜೊತೆ ಪಿವೋಟ್ ಚಿತ್ರ ರಿಲೀಸ್!
04:13ಡೆವಿಲ್ Vs ಮಾರ್ಕ್.. ಯಾರಿಗೆಷ್ಟು ಮಾರ್ಕ್ಸ್? ಬಾಕ್ಸಾಫೀಸ್​ ಗಳಿಕೆಯಲ್ಲಿ ಯಾರು ಗೆಲ್ತಾರೆ?
02:16ಬೇರೆಯದೇ ಸಂದೇಶ ಕೊಡುತ್ತಿರೋ 'ದಿ ಡೆವಿಲ್’ ಟ್ರೈಲರ್; ದರ್ಶನ್ ಫ್ಯಾನ್ಸ್‌ ಮುಖದಲ್ಲಿ ಮೂಡ್ತಿದೆ ಮಂದಹಾಸ!
05:19ದರ್ಶನ್ ಕಷ್ಟಕ್ಕೆ ಕಾರಣ ಅದೇನಾ..? 'ಡೆವಿಲ್' ನೆಗೆಟಿವ್ ಟೈಟಲ್ ಸುದ್ದಿಗೆ ಬಿಗ್ ಟ್ವಿಸ್ಟ್; ಸೀಕ್ರೆಟ್ ಹೊರಬಂತು!
02:55ನಿಜವಾಗಿಯೂ ಬಿಗ್ ಬಾಸ್ ಒಳಗೆ ಏನ್ ನಡಿತಾ ಇದೆ? ಜಾಹ್ನವಿ ಹೇಳಿದ ದೊಡ್ಮನೆ ಸತ್ಯ ಕಥೆ ನೋಡಿ..!
04:11'ನಾನ್ ಬರ್ತಿದ್ದೀನಿ ಚಿನ್ನಾ'.. ದರ್ಶನ್ ವಾಯ್ಸ್ ಕೇಳಿ ಕುಣಿದು ಕುಪ್ಪಳಿಸುತ್ತಿರೋ ಫ್ಯಾನ್ಸ್; ಏನಾಗ್ತಿದೆ ಈಗ?
02:58ವೈರಲ್ ಆಯ್ತು ಜೂನಿಯರ್ ದರ್ಶನ್ ಡ್ಯಾನ್ಸ್ ಧಮಾಕಾ! ಅಪ್ಪನ ಹಾಡಿಗೆ ನರ್ತಿಸಿದ ವಿನೀಶ್ ದರ್ಶನ್
Read more