ಶಿವಮೊಗ್ಗದಲ್ಲಿ ಕಾಂತಾರ ಸಿನಿಮಾಗೆ ಅವಮಾನ: ಕಿಡಿಗೇಡಿಗಳು ಮಾಡಿದ್ದೇನು?

Oct 9, 2022, 2:32 PM IST

ರಿಷಬ್ ಶೆಟ್ಟಿ ನಿರ್ದೇಶಿಸಿ, ನಟಿಸಿರುವ 'ಕಾಂತಾರ' ಸಿನಿಮಾ ಭರ್ಜರಿ ಯಶಸ್ಸು ಕಂಡಿದ್ದು, ಇದೀಗ ಹಿಂದಿ ಭಾಷೆಯಲ್ಲಿ ಕೂಡ ಬಿಡುಗಡೆಗೆ ಸಿದ್ಧವಾಗಿದೆ. ಸಿನಿಮಾ ಬಗ್ಗೆ ಅನೇಕರು ಮೆಚ್ಚುಗೆ ವ್ಯಕ್ತಪಡಿಸಿದ್ದು, ಚಿತ್ರದ ಬಗ್ಗೆ ಪರ-ವಿರೋಧ ಚರ್ಚೆಗಳು ಶುರುವಾಗಿವೆ. ಈ ನಡುವೆ ಶಿವಮೊಗ್ಗದ ಮಹಾವೀರ ವೃತ್ತದಲ್ಲಿ ಹಾಕಲಾದ ‘ಕಾಂತಾರ’ ಚಿತ್ರದ ಪೋಸ್ಟರ್‌ ಮೇಲೆ ಕಿಡಿಗೇಡಿಗಳು ಅವಹೇಳನಕಾರಿಯಾಗಿ ಬರೆದಿದ್ದು, ಇದು ವಿವಾದಕ್ಕೆ ಎಡೆ ಮಾಡಿಕೊಟ್ಟಿದೆ. ಹಿಂದೂ ಪರ ಸಂಘಟನೆಗಳು ಸೂಕ್ತ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದ್ದಾರೆ.