ಡಾಲಿ ಧನಂಜಯ್ ನಿರ್ಮಾಣದ 'ವಿದ್ಯಾಪತಿ' ಶೂಟಿಂಗ್​ ಕಂಪ್ಲೀಟ್​: ನಾಗಭೂಷಣ್‌ಗೆ ಮಲೈಕಾ ಸಾಥ್‌

Sep 23, 2024, 5:02 PM IST

ನಟ ಧನಂಜಯ್ ಒಡೆತನದ ಡಾಲಿ ಪಿಕ್ಚರ್ಸ್‌ನ ನಾಲ್ಕನೇ ಸಿನಿಮಾ ವಿದ್ಯಾಪತಿ. ಟೈಟಲ್ ಹಾಗೂ ಸ್ಯಾಂಪಲ್ಸ್ ನಿಂದಲೇ ಕುತೂಹಲ ದುಪ್ಪಟ್ಟು ಮಾಡಿರುವ ಈ ಚಿತ್ರದ ಶೂಟಿಂಗ್ ಮುಕ್ತಾಯಗೊಂಡಿದೆ. ವಿದ್ಯಾಪತಿಗೆ ಕುಂಬಳಕಾಯಿ ಪ್ರಾಸ್ತಿಯಾಗಿದೆ. ಟಗರು ಪಲ್ಯ ಮೂಲಕ ಮಸ್ತ್ ಮನರಂಜನೆ ನೀಡಿದ್ದ ನಾಗಭೂಷಣ್ ನಾಯಕನಾಗಿ ನಟಿಸಿದ್ದು, ಉಪಾಧ್ಯಕ್ಷನ ಬೆಡಗಿ ಮಲೈಕಾ ವಸೂಪಾಲ್ ಜೋಡಿಯಾಗಿ ಸಾಥ್ ಕೊಟ್ಟಿದ್ದಾರೆ. ಕರಾಟೆ ಕಿಂಗ್ ಗೆಟಪ್ ನಲ್ಲಿ ನಾಗಭೂಷಣ್ ಕಾಣಿಸಿಕೊಂಡಿದ್ದು, ಅವರಿಗೆ ಮಾಸ್ಟರ್ ಆಗಿ ರಂಗಾಯಣ ರಘು ಅಭಿನಯಿಸಿದ್ದಾರೆ. ಇಶಾಂ ಮತ್ತು ಹಸೀಂ ಖಾನ್ ವಿದ್ಯಾಪತಿ ಸಿನಿಮಾಕ್ಕೆ ಆಕ್ಷನ್ ಕಟ್ ಹೇಳಿದ್ದಾರೆ. 

ಸಹೋದರನ ಮದುವೆಯಲ್ಲಿ ಸಮಂತಾ ಮಿಂಚಿಂಗ್: ನಟಿ ಸಮಂತಾ ಋತ್ ಪ್ರಭು ತನ್ನ ಸಹೋದರನ ಮದುವೆಯಲ್ಲಿ ಪಾಲ್ಗೊಂಡಿದ್ದಾರೆ. ಸಹೋದರನ ಮದುವೆಯ ಚಿತ್ರಗಳನ್ನು ಅವರು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. ಸಮಂತಾರ ಅಣ್ಣ ಡೇವಿಡ್ ವಿದೇಶದಲ್ಲಿ ವಿದೇಶಿ ಮಹಿಳೆಯೊಟ್ಟಿಗೆ ಕ್ರಿಶ್ಚಿಯನ್ ಸಂಪ್ರದಾಯದಂತೆ ವಿವಾಹವಾಗಿದ್ದು, ವಿವಾಹ ಕಾರ್ಯಕ್ರಮದಲ್ಲಿ ನಟಿ ಸಮಂತಾ ಭಾಗಿಯಾಗಿದ್ದರು. ಮದುವೆ ಸಮಾರಂಭದಲ್ಲಿ ತಮ್ಮ ಕುಟುಂಬದ ಜೊತೆಗೆ ಸಮಯ ಕಳೆದು ಎಂಜಾಯ್ ಮಾಡಿದ್ದಾರೆ ಸಮಂತಾ.

ಗಣೇಶ್ ಮನೆಯಲ್ಲಿ ಹರ್ಷಿಕಾ ಬೇಬಿ ಶವರ್ ಪಾರ್ಟಿ: ಕಳೆದ ವರ್ಷ ಮದುವೆಯಾದ ನಟಿ ಹರ್ಷಿಕಾ ಪೂಣಚ್ಚ ಮತ್ತು ನಟ ಭುವನ್ ಪೊನ್ನಣ್ಣ ಮುದ್ದು ಮಗುವಿನ ಪೋಷಕರಾಗಲಿದ್ದಾರೆ. ತುಂಬು ಗರ್ಭಿಣಿ ಆಗಿರುವ ಹರ್ಷಿಕಾ ಅಕ್ಟೋಬರ್‌ನಲ್ಲಿ ಮಗುವಿಗೆ ಜನ್ಮ ನೀಡಲಿದ್ದಾರೆ. ಇದೀಗ ಹರ್ಷಿಕಾಗೆ 'ಗೋಲ್ಡನ್ ಸ್ಟಾರ್' ಗಣೇಶ್ ಮತ್ತು ಶಿಲ್ಪಾ ಗಣೇಶ್ ದಂಪತಿ ಒಂದು ಬ್ಯೂಟಿಫುಲ್ ಉಡುಗೊರೆ ನೀಡಿದ್ದಾರೆ. ತಮ್ಮ ನಿವಾಸದಲ್ಲಿ ಹರ್ಷಿಕಾ ಪೂಣಚ್ಚಗೆ ಬೇಬಿ ಶವರ್ ಪಾರ್ಟಿ ಮಾಡಿದ್ದಾರೆ ಗಣೇಶ್ ದಂಪತಿ. ಈ ಸಮಾರಂಭಕ್ಕೆ ಸ್ಯಾಂಡಲ್‌ವುಡ್‌ನ ಹಲವು ತಾರೆಯರು ಆಗಮಿಸಿದ್ದರು ವಿಶೇಷ.