Apr 25, 2024, 9:56 AM IST
ಕನ್ನಡ ಚಿತ್ರರಂಗದ ಇತಿಹಾಸದ ಪುಟಗಳಲ್ಲಿ ಡಾ.ರಾಜ್‌ಕುಮಾರ್ (Dr. Rajkumar) ಅವರ ಹೆಸರು ಯಾವಾಗಲೂ ಅಜರಾಮರ. ಕನ್ನಡ ಚಿತ್ರರಂಗದ ಇತಿಹಾಸದ ಪ್ರತಿ ಪುಟಪುಟವನ್ನೂ ಆವರಿಸಿಕೊಂಡಿರುವ ರಾಜ್‌ಕುಮಾರ್ ಪೂರ್ಣ ಹೆಸರು ಸಿಂಗಾನಲ್ಲೂರು ಪುಟ್ಟಸ್ವಾಮಯ್ಯ ಮುತ್ತುರಾಜ ಕನ್ನಡ ಚಿತ್ರರಂಗ ಕಂಡ ವರ್ಣರಂಜಿತ ನಾಯಕ ನಟ. ಡಾ.ರಾಜ್‌ಕುಮಾರ್ ಬಣ್ಣಾ ಹಚ್ಚಿದ್ದು12 ವರ್ಷದ ಬಾಲ ನಟನಾಗಿರುವಾಗಲೇ. ಹನ್ನೆರಡು ವರ್ಷದ ಬಾಲಕನಾಗಿರುವಾಗ ಭಕ್ತ ಪ್ರಹ್ಲಾದ (1942) ಚಿತ್ರದಲ್ಲಿ ಬಾಲನಟನಾಗಿ ಎಸ್. ಪಿ. ಮುತ್ತುರಾಜ ಕಾಣಿಸಿಕೊಂಡರು. ನನ್ನ ಜೀವನದ ಪ್ರಥಮ ಚಿತ್ರ ಪ್ರಹ್ಲಾದ ಎಂದು ಡಾ. ರಾಜ್‌ಕುಮಾರ್, ದೀಪಾವಳಿ ಸಂಚಿಕೆಯೊಂದಕ್ಕೆ ನೀಡಿದ ಬರಹದಲ್ಲಿ ತಿಳಿಸಿದ್ದಾರೆ.ಆಗಲೇ ಚಲನಚಿತ್ರರಂಗ ಪ್ರವೇಶಿಸಿದ ರಾಜ್‌ಕುಮಾರ್ 63 ವರ್ಷ ತುಂಬಿರುವ ಕನ್ನಡ ಚಿತ್ರರಂಗದಲ್ಲಿ(Kannada Film Industry) 43 ವರ್ಷಗಳಿಂದ ಹಾಸುಹೊಕ್ಕಾಗಿದ್ದಾರೆ. ಅವರು ಅಭಿನಯಿಸದ ಪಾತ್ರವೇ ಇಲ್ಲ. ಅವರು ನಡೆದು ಬಂದ ಹಾದಿಯೇ ಒಂದು ಚರಿತ್ರೆ. ಹೀಗಾಗಿ ಭಾರತ ಸರ್ಕಾರ, ಚಲನಚಿತ್ರ ಪಿತಾಮಹ ದಾದಾಸಾಹೇಬ ಫಾಲ್ಕೆ ಅವರ ಹೆಸರಿನಲ್ಲಿ ನೀಡುವ, ರಾಷ್ಟ್ರದ ಪ್ರತಿಷ್ಠಿತ ಪ್ರಶಸ್ತಿ “ಫಾಲ್ಕೆ ಪ್ರಶಸ್ತಿ” ಯನ್ನು ಅವರಿಗೆ ನೀಡಿ ಗೌರವಿಸಿದೆ.
ಇದನ್ನೂ ವೀಕ್ಷಿಸಿ: Today Horoscope: ಈ ರಾಶಿಯವರಿಗೆ ಇಂದು ಆರೋಗ್ಯದಲ್ಲಿ ವ್ಯತ್ಯಾಸವಾಗಲಿದ್ದು, ಭಯದ ವಾತಾವರಣ ಇದೆ..