Abhishek Ambareesh Wedding: ಅಭಿಷೇಕ್‌-ಅವಿವಾ ಮದ್ವೆಲಿ ಮಾಜಿ ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು

Jun 5, 2023, 12:44 PM IST

ರೆಬಲ್ ಸ್ಟಾರ್ ಅಂಬರೀಷ್ ಪುತ್ರ ಅಭಿಷೇಕ್ ಅಂಬರೀಷ್ ಇಂದು (ಜೂನ್ 5) ಅದ್ದೂರಿಯಾಗಿ ದಾಂಪತ್ಯಕ್ಕೆ ಕಾಲಿಟ್ಟರು. ಫ್ಯಾಷನ್ ಡಿಸೈನರ್ ಅವಿವಾ ಬಿಡಪ ಜೊತೆ ಅಭಿಷೇಕ್ ವೈವಾಹಿಕ ಜೀವನಕ್ಕೆ ಕಾಲಿಟ್ಟರು. ಇಂದು ಬೆಳಗ್ಗೆ 9:30 ರಿಂದ 10:30 ವರೆಗೆ ನಡೆದ ಮಹೂರ್ತದಲ್ಲಿ ಅಭಿಷೇಕ್ ಮತ್ತು ಅವಿವಾ ಪತಿ-ಪತ್ನಿಯರಾದರು. ಅಭಿಷೇಕ್ ಮದುವೆ ಗೌಡರ ಸಾಂಪ್ರದಾಯದ ಪ್ರಕಾರ ನೆರವೇರಿದೆ. ಬೆಂಗಳೂರಿನ ಅರಮನೆ ಮೈದಾನದ ಚಾಮರವಜ್ರದಲ್ಲಿ ಅಭಿಷೇಕ್ ಅಂಬರೀಷ್ ಬಹುಕಾಲದ ಗೆಳತಿ ಅವಿವಾಗೆ ಮಾಂಗಲ್ಯಧಾರಾಣೆ ಮಾಡಿದರು. ಅಭಿ ಮದುವೆಗೆ ಅನೇಕ ಗಣ್ಯರು ಹಾಜರಾಗಿ ಶುಭಹಾರೈಸಿದ್ದಾರೆ. ಮಾಜಿ ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು ಆಗಮಿಸಿ ಅಭಿಷೇಕ್ ಮತ್ತು ಅವಿವಾಗೆ ಶುಭಹಾರೈಸಿದ್ದಾರೆ.