Simple Suni: ಸಿನಿಪ್ರಿಯರ ಕುತೂಹಲ ಹೆಚ್ಚಿಸಿದ 'ಗತವೈಭವ' ಇಂಟ್ರೊಡಕ್ಷನ್ ಟೀಸರ್!

Simple Suni: ಸಿನಿಪ್ರಿಯರ ಕುತೂಹಲ ಹೆಚ್ಚಿಸಿದ 'ಗತವೈಭವ' ಇಂಟ್ರೊಡಕ್ಷನ್ ಟೀಸರ್!

Published : Mar 04, 2022, 05:54 PM IST

ಬೆಳ್ಳಿಪರದೆಗೆ ಮತ್ತೊಬ್ಬ ಯುವ ನಾಯಕನ ಎಂಟ್ರಿಯಾಗುತ್ತಿದ್ದು, ಈಗಾಗಲೇ ಕನ್ನಡ ಚಿತ್ರರಂಗದಲ್ಲಿ ಸಿಂಪಲ್ ಸುನಿ ಎಂದೇ ಖ್ಯಾತರಾಗಿರುವ ಸುನಿ ಕನ್ನಡ ಚಿತ್ರರಂಗಕ್ಕೆ ಸಾಕಷ್ಟು ನಟರನ್ನು ಪರಿಚಯಿಸಿದ್ದಾರೆ. ಈಗ ಆ ಸಾಲಿಗೆ ಸೇರ್ಪಡೆಯಾಗಿದ್ದಾರೆ ಯುವ ನಟ ದುಶ್ಯಂತ್.

ಬೆಳ್ಳಿಪರದೆಗೆ ಮತ್ತೊಬ್ಬ ಯುವ ನಾಯಕನ ಎಂಟ್ರಿಯಾಗುತ್ತಿದ್ದು, ಈಗಾಗಲೇ ಕನ್ನಡ ಚಿತ್ರರಂಗದಲ್ಲಿ ಸಿಂಪಲ್ ಸುನಿ (Simple Suni) ಎಂದೇ ಖ್ಯಾತರಾಗಿರುವ ಸುನಿ ಕನ್ನಡ ಚಿತ್ರರಂಗಕ್ಕೆ ಸಾಕಷ್ಟು ನಟರನ್ನು ಪರಿಚಯಿಸಿದ್ದಾರೆ. ಈಗ ಆ ಸಾಲಿಗೆ ಸೇರ್ಪಡೆಯಾಗಿದ್ದಾರೆ ಯುವ ನಟ ದುಶ್ಯಂತ್ (Dushyanth). ಇವರಿಬ್ಬರ ಕಾಂಬಿನೇಶನ್‌ನಲ್ಲಿ 'ಗತವೈಭವ' (Gatavaibhava) ಚಿತ್ರ ಮೂಡಿಬರುತ್ತಿದೆ‌. ದೀಪಕ್ ತಿಮ್ಮಪ್ಪ ಹಾಗೂ ಸುನಿ ಜಂಟಿಯಾಗಿ ಈ ಚಿತ್ರ ನಿರ್ಮಾಣ ಮಾಡುತ್ತಿದ್ದಾರೆ. ನಾಯಕನನ್ನು ಪರಿಚಯಿಸುವ ಟೀಸರ್ (Teaser) ಒಂದನ್ನು ಸುನಿ ಇತ್ತೀಚೆಗಷ್ಟೇ ಬಿಡುಗಡೆ ಮಾಡಿದ್ದು, ಸಾಮಾಜಿಕ ಜಾಲತಾಣಗಳಲ್ಲಿ (Social Media) ಭಾರಿ ಸದ್ದು ಮಾಡುತ್ತಿದೆ.

Vikrant Rona ಸರ್‌ಪ್ರೈಸ್ ರೂಟ್‌ಮ್ಯಾಪ್ ಕೊಟ್ಟ ಕಿಚ್ಚ ಸುದೀಪ್

ಇತ್ತೀಚೆಗಷ್ಟೇ ಚಿತ್ರದ ಪತ್ರಿಕಾಗೋಷ್ಠಿ ಗುಬ್ಬಿ ಶಾಸಕ ಶ್ರೀನಿವಾಸ್, ಲಹರಿ ವೇಲು, ನಿರ್ಮಾಪಕ ಪುಷ್ಕರ್, ನಿರ್ದೇಶಕರಾದ ಪವನ್ ಒಡೆಯರ್, ಮಹೇಶ್ ಕುಮಾರ್ ಹಾಗೂ ವಿತರಕ ಸುಪ್ರೀತ್ ಅವರ ಸಮ್ಮುಖದಲ್ಲಿ ನಡೆಯಿತು. ನೆರೆದಿದ್ದ ಗಣ್ಯರು ತಮ್ಮ ಪ್ರೋತ್ಸಾಹದ ಮಾತುಗಳ ಮೂಲಕ 'ಗತವೈಭವ' ಚಿತ್ರತಂಡಕ್ಕೆ ಶುಭ ಕೋರಿದರು. ಇನ್ನು ಸಿಂಪಲ್‌ ಸುನಿ, 'ಎಲ್ಲಾ ಹುಡುಗ್ರು ಪಕ್ಕದ್ಮನೆ ಹುಡುಗೀನ ಪಟಾಯಿಸಿದ್ರೆ, ನಮ್‌ ಹೀರೋ ಪಕ್ಕದ್ಮನೆ ಪ್ರೊಡ್ಯೂಸರನ್ನೇ ಪಟಾಯಿಸಿದ್ದಾರೆ. ಚಿತ್ರದಲ್ಲಿ ಹೀರೋ ವಿಎಫ್‌ಎಕ್ಸ್‌ ಆರ್ಟಿಸ್ಟ್‌. ಅವನ ಕಲ್ಪನಾ ಲೋಕದ ಮೇಲೆ ಸಿನಿಮಾವಿದೆ. ಇದರಲ್ಲಿ ವಾಸ್ಕೋಡಗಾಮ, ಸಮುದ್ರ ಮಥನ ಇತ್ಯಾದಿ ಕತೆಗಳೆಲ್ಲ ಬರುತ್ತವೆ' ಎಂದರು.

ಸಿನಿಮಾ ಹಂಗಾಮಾ ವೀಡಿಯೋಗಳನ್ನು ವೀಕ್ಷಿಸಲು ಇಲ್ಲಿ ಕ್ಲಿಕ್ಕಿಸಿ: https://kannada.asianetnews.com/movies

02:59ಜಯಪ್ರಕಾಶ್ ಶೆಟ್ಟಿ ನಟನೆ, ಕನ್ನಡ-ತುಳು ಭಾಷೆಯ 'ಬನ' ರಿಲೀಸ್ ಡೇಟ್ ಅನೌನ್ಸ್!
02:24ನೆಪೋಟಿಸಂ ಬಗ್ಗೆ ಪ್ರಿಯಾಂಕಾ ಉಪೇಂದ್ರ ಹೇಳಿದ್ದೇನು..?!
04:57ಅಪ್ಪನ ಆಸೆ.. ಮಗಳ ಕನಸು.. ಅಪ್ಪ ಇಟ್ಟ ಹೆಸರಲ್ಲೇ ಬಿಜಿನೆಸ್​ಶುರು ಮಾಡಿದ ಅಪ್ಪು ಪುತ್ರಿ ವಂದಿತಾ..!
02:36Yash: ನಟ ಯಶ್​ ಹೃದಯವಂತ, ಜೊತೆ ಕೆಲಸ ಮಾಡಿದ್ದು ಅದ್ಭುತ ಅನುಭವ: ತಾರಾ ಸುತಾರಿಯಾ
08:02Toxic Movie: ಲಸ್ಟ್ ಸ್ಟೋರೀಸ್, ಕಬೀರ್ ಸಿಂಗ್ ಆಯ್ತು; ಮದುವೆಯಾಗಿ ಮಗು ಆದ್ರೂ ಕಮ್ಮಿಯಾಗಿಲ್ಲ Kiara Advani ಬ್ಯೂಟಿ
09:56Yash Toxic Movie Tabaahi Song: ಯಶ್‌, ಕಿಯಾರಾ ಅಡ್ವಾಣಿ ಕೆಮಿಸ್ಟ್ರಿಗೆ ದಂಗಾದ ಇಂಟರ್‌ನೆಟ್‌ ಜಗತ್ತು!
04:04ಶಿವಣ್ಣ-ಧನಂಜಯ್ ಮತ್ತೊಮ್ಮೆ ಜೊತೆಯಾಟ.. ಹೇಮಂತ್ ರಾವ್ ನಿರ್ದೇಶನದಲ್ಲಿ '...ಡ್ರೀಮ್ ಥಿಯೇಟರ್..!
09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
05:49Toxic: Ladies & Ladies Teaser: 3 ಟೀಸರ್.. 100 ಮ್ಯಾಟರ್: ಇದ್ರಲ್ಲಿ ಲೇಡೀಸ್ ಗ್ಯಾಂಗ್ ಆರ್ಭಟ!
07:55Toxic: ಟಾಕ್ಸಿಕ್ ಸೌಂದರ್ಯ & ಸಮರ; ಲೇಡೀಸ್ ಸ್ಪೆಷಲ್ ಟೀಸರ್ ಸೆನ್ಸೇಷನ್‌ ಏನ್ ಹೇಳ್ತಿದೆ?
Read more