By Two Love ಚಿತ್ರದ ಪ್ರಿ ರಿಲೀಸ್ ಕಾರ್ಯಕ್ರಮಕ್ಕೆ ಸಾಥ್ ನೀಡಿದ ಸ್ಯಾಂಡಲ್‌ವುಡ್‌ ತಾರೆಯರು!

Feb 17, 2022, 2:17 PM IST

ಸ್ಯಾಂಡಲ್‌ವುಡ್‌ನಲ್ಲಿ ದೊಡ್ಡ ನಿರೀಕ್ಷೆ ಹುಟ್ಟಿಸಿರುವ ಚಿತ್ರ 'ಬೈಟು ಲವ್'( By Two Love). ಧನ್ವೀರ್ ಗೌಡ (Dhanveer Gowda) ಮತ್ತು ಶ್ರೀಲೀಲಾ (Sreeleela) ಕಾಂಬಿನೇಷನ್‌ನಲ್ಲಿ ಬರುತ್ತಿರುವ ಈ ಸಿನಿಮಾ ಫೆಬ್ರವರಿ 18ರಂದು ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ. ವಿಶೇಷವಾಗಿ ಈ ಚಿತ್ರದಲ್ಲಿ ಆರವ್ ಎಂಬ 10 ತಿಂಗಳ ಮಗು ಕೂಡ ನಟಿಸಿದ್ದು, ಇತ್ತೀಚೆಗಷ್ಟೇ ಚಿತ್ರದ ಪ್ರಿ ರಿಲೀಸ್ ಇವೆಂಟ್‌ ನಡೆದಿತ್ತು. 

ಧನ್ವೀರ್,ಶ್ರೀಲೀಲಾ ನಟನೆ Bytwo Love ಚಿತ್ರದ ಟ್ರೈಲರ್ ರಿಲೀಸ್!

ಈ ಕಾರ್ಯಕ್ರಮದಲ್ಲಿ ನಟ ವಿ.ರವಿಚಂದ್ರನ್, ವಿಕ್ರಮ್ ರವಿಚಂದ್ರನ್, 'ನೆನಪಿರಲಿ' ಪ್ರೇಮ್ ದಂಪತಿ, ಶರಣ್, ಡಾರ್ಲಿಂಗ್ ಕೃಷ್ಣ, ಮಿಲನಾ ನಾಗರಾಜ್, ಶಿವರಾಜ್ ಕೆ ಆರ್ ಪೇಟೆ, ನಿರ್ದೇಶಕರಾದ ಸಿಂಪಲ್ ಸುನಿ, 'ಅಯೋಗ್ಯ' ಮಹೇಶ್, ಜಯತೀರ್ಥ ಮುಂತಾದವರು ಭಾಗವಹಿಸಿ, ಚಿತ್ರತಂಡಕ್ಕೆ ಶುಭ ಹಾರೈಸಿದ್ದಾರೆ. ಬೈಟು ಲವ್' ಚಿತ್ರವನ್ನು ಕೆವಿಎನ್‌ ಬ್ಯಾನರ್‌ನಲ್ಲಿ (KVN Banner) ನಿಶಾ ವೆಂಕಟ್ ಹಾಗೂ ಸುಪ್ರೀತ್ ನಿರ್ಮಿಸುತ್ತಿದ್ದು, ಹರಿ ಸಂತೋಷ್‌ (Hari Santhosh) ಆಕ್ಷನ್ ಕಟ್ ಹೇಳಿದ್ದಾರೆ. ಮಹೇಂದ್ರ ಸಿಂಹ ಛಾಯಾಗ್ರಹಣ, ಅಜನೀಶ್‌ ಲೋಕನಾಥ್‌ (Ajaneesh Loknath) ಸಂಗೀತ ಸಂಯೋಜನೆ ಹಾಗೂ ಯೋಗಾನಂದ್‌ ಸಂಭಾಷಣೆ ಚಿತ್ರಕ್ಕಿದೆ.

ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಕ್ಲಿಕಿಸಿ: Asianet Suvarna Entertainment