ಸೆಂಚುರಿ ಸ್ಟಾರ್ ಶಿವರಾಜ್ ಕುಮಾರ್ ಅಭಿನಯದ 125ನೇ ಸಿನಿಮಾ ‘ವೇದ’ ಚಿತ್ರದ ಆಡಿಯೋ ರಿಲೀಸ್ ಕಾರ್ಯಕ್ರಮ ಚಿತ್ರದುರ್ಗದಲ್ಲಿ ನಡೆದಿದೆ.
ಚಿತ್ರದುರ್ಗದಲ್ಲಿ ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಅಭಿನಯದ ‘ವೇದ’ ಸಿನಿಮಾದ ಆಡಿಯೋ ರಿಲೀಸ್ ಕಾರ್ಯಕ್ರಮ ನಡೆದಿದೆ. ನಗರದ ಹಳೆ ಮಾಧ್ಯಮಿಕ ಶಾಲಾ ಆವರಣದಲ್ಲಿ ಕಾರ್ಯಕ್ರಮ ನಡೆದಿದ್ದು, ನಟ ಕಿಚ್ಚ ಸುದೀಪ್ ಆಡಿಯೋ ಬಿಡುಗಡೆ ಮಾಡಿದ್ದಾರೆ. ಈ ವೇಳೆ ಮೈದಾನದಲ್ಲಿ ಕಿಚ್ಚ ಹಾಗೂ ಶಿವಣ್ಣನ ಅಭಿಮಾನಿಗಳು, ಶಿಳ್ಳೆ-ಕೇಕೆ ಹಾಕಿ ಕಾರ್ಯಕ್ರಮ ಎಂಜಾಯ್ ಮಾಡಿದ್ದಾರೆ.