ನಾನು ಪ್ರಭುದೇವ ಅವರಷ್ಟು ಡಾನ್ಸ್ ಮಾಡೋಕೆ ಆಗಲ್ಲ, ಆದ್ರು ಬಿಟ್ಟು ಕೊಡೋಲ್ಲ: ಶಿವಣ್ಣ

Jun 24, 2022, 11:11 PM IST

ಯೋಗರಾಜ್ ಭಟ್ ನಿರ್ದೇಶನದಲ್ಲಿ ಕರುನಾಡ ಚಕ್ರವರ್ತಿ ಶಿವರಾಜ್‌ಕುಮಾರ್ ಮತ್ತು ಪ್ರಭುದೇವ್ ನಟನೆಯ ಇನ್ನೂ ಹೆಸರಿಡದ ಸಿನಿಮಾದ ಮುಹೂರ್ತ ಬೆಂಗಳೂರಿನಲ್ಲಿ ನಡೆದಿದೆ. ರಾಕ್‌ಲೈನ್ ಸ್ಟುಡಿಯೋದಲ್ಲಿ ಸಿನಿಮಾಗೆ ಚಾಲನೆ ಸಿಕ್ಕಿದೆ. ಪ್ರೊಡಕ್ಷನ್ ನಂಬರ್ 47 ಹೆಸರಿನಲ್ಲಿ ಸದ್ಯಕ್ಕೆ ಚಿತ್ರಕ್ಕೆ ಚಾಲನೆ ನೀಡಲಾಗಿದ್ದು, ಸಿನಿಮಾ ಬಗ್ಗೆ ಶಿವಣ್ಣ ಮಾತನಾಡಿದ್ದಾರೆ. ರಾಕ್‌ಲೈನ್ ವೆಂಕಟೇಶ್ ಅವರ ಸಂಸ್ಥೆ ಅಂದರೆ ನನಗೆ ನಮ್ಮ ಮನೆಯ ಸಂಸ್ಥೆ ಇದ್ದ ಹಾಗೆ. ನನ್ನ ಅವರ ಸ್ನೇಹ 30 ವರ್ಷಕ್ಕೂ ಹಳೆಯದು. ಸ್ನೇಹಿತರಾಗಿ ಬಂದು ನಿರ್ಮಾಪಕರಾದರು.

ಇಂತಹ ನಿರ್ಮಾಣ ಸಂಸ್ಥೆಯಲ್ಲಿ ಕೆಲಸ ಮಾಡುತ್ತಿರುವುದು ಹಾಗೂ ಯೋಗರಾಜ್ ಭಟ್ ನಿರ್ದೇಶನದಲ್ಲಿ ಅಭಿನಯಿಸುತ್ತಿರುವುದು ಸಂತಸವಾಗಿದೆ. ಭಾರತದ ಖ್ಯಾತ ನೃತ್ಯಗಾರ, ನಟ ಪ್ರಭುದೇವ್ ಅವರ ಜೊತೆ ಅಭಿನಯಿಸುತ್ತಿರುವುದು ಖುಷಿ ತಂದಿದೆ ಅಲ್ಲದೇ ನಾನು ಪ್ರಭುದೇವ ಅವರಷ್ಟು ಡಾನ್ಸ್ ಮಾಡೋಕೆ ಆಗಲ್ಲ, ಆದ್ರು ಬಿಟ್ಟು ಕೊಡೋಲ್ಲ. ಜುಲೈನಲ್ಲಿ ಚಿತ್ರೀಕರಣ ಆರಂಭವಾಗಲಿದೆ. ಯೋಗರಾಜ್ ಭಟ್ ಉತ್ತಮ ಕಥೆ ಸಿದ್ದಮಾಡಿಕೊಂಡಿದ್ದಾರೆ.‌ ಫನ್, ಎಮೋಷನ್ ಹಾಗೂ ಆಕ್ಷನ್, ಡ್ರಾಮಾ ಎಲ್ಲಾ ರೀತಿಯ ಅಂಶಗಳಿರುವ ಕಥೆಯಿದು. ಎಲ್ಲರ ಮನಸ್ಸಿಗೂ ಚಿತ್ರ ಹತ್ತಿರವಾಗುತ್ತದೆ ಎಂದು ಶಿವಣ್ಣ ಹೇಳಿದರು.

ಸಿನಿಮಾ ಹಂಗಾಮಾ ವೀಡಿಯೋಗಳನ್ನು ವೀಕ್ಷಿಸಲು ಇಲ್ಲಿ ಕ್ಲಿಕ್ಕಿಸಿ: https://kannada.asianetnews.com/movies