ಬೆಳ್ಳಿತೆರೆಗೆ ಎಂಟ್ರಿ ಕೊಡಲು ಸಜ್ಜಾದ ಜನಾರ್ದನ ರೆಡ್ಡಿ ಪುತ್ರ Kireeti

ಬೆಳ್ಳಿತೆರೆಗೆ ಎಂಟ್ರಿ ಕೊಡಲು ಸಜ್ಜಾದ ಜನಾರ್ದನ ರೆಡ್ಡಿ ಪುತ್ರ Kireeti

Suvarna News   | Asianet News
Published : Mar 03, 2022, 01:28 PM IST

ಮಾಜಿ ಸಚಿವ ಜನಾರ್ದನ ​ರೆಡ್ಡಿ ಮಗ ಕಿರೀಟಿ ರೆಡ್ಡಿ ಚಿತ್ರರಂಗಕ್ಕೆ ಎಂಟ್ರಿ ಕೊಡಲು ಸಜ್ಜಾಗಿದ್ದು, ಮಾರ್ಚ್ 4ರಂದು ಚಿತ್ರದ ಅದ್ದೂರಿ ಮುಹೂರ್ತ ನಡೆಯಲಿದೆ.  'ಬಾಹುಬಲಿ' ಖ್ಯಾತಿಯ ನಿರ್ದೇಶಕ ರಾಜಮೌಳಿ ಚಿತ್ರದ ಮೊದಲ ದೃಶ್ಯಕ್ಕೆ ಕ್ಲಾಪ್‌ ಮಾಡಲಿದ್ದಾರೆ.

ಮಾಜಿ ಸಚಿವ ಜನಾರ್ದನ ​ರೆಡ್ಡಿ (Janardhan Reddy) ಮಗ ಕಿರೀಟಿ ರೆಡ್ಡಿ (Kireeti Reddy) ಚಿತ್ರರಂಗಕ್ಕೆ ಎಂಟ್ರಿ ಕೊಡಲು ಸಜ್ಜಾಗಿದ್ದು, ಮಾರ್ಚ್ 4ರಂದು ಚಿತ್ರದ ಅದ್ದೂರಿ ಮುಹೂರ್ತ ನಡೆಯಲಿದೆ. 'ಬಾಹುಬಲಿ' ಖ್ಯಾತಿಯ ನಿರ್ದೇಶಕ ಎಸ್‌ ಎಸ್‌ ರಾಜಮೌಳಿ (SS Rajamouli) ಚಿತ್ರದ ಮೊದಲ ದೃಶ್ಯಕ್ಕೆ ಕ್ಲಾಪ್‌ ಮಾಡಲಿದ್ದು, ಆ ಮೂಲಕ ರಾಜಮೌಳಿ ಮೊದಲ ಬಾರಿಗೆ ಕನ್ನಡ ಚಿತ್ರಕ್ಕೆ ಕ್ಲಾಪ್‌ ಮಾಡಿದಂತೆ ಆಗಲಿದೆ. ವಾರಾಹಿ ಪ್ರೊಡಕ್ಷನ್‌ ಹೌಸ್‌ ಮೂಲಕ ಸಾಯಿ ಕೊರಪಾಠಿ ನಿರ್ಮಿಸುತ್ತಿರುವ ಈ ಚಿತ್ರವನ್ನು ಮಾಯಾ ಬಜಾರ್‌ ಸಿನಿಮಾ ಖ್ಯಾತಿಯ ರಾಧಾಕೃಷ್ಣ (Radha Krishna) ನಿರ್ದೇಶನ ಮಾಡುತ್ತಿದ್ದಾರೆ. ಚಿತ್ರಕ್ಕೆ ಇನ್ನೂ ಹೆಸರಿಟ್ಟಿಲ್ಲ. 

Duniya Vijay: ಹೊಸ ಚಿತ್ರದ ಟೈಟಲ್ ರಿವೀಲ್ ಮಾಡಿದ ಸಲಗ!

ತೆಲುಗು ಹಾಗೂ ಕನ್ನಡದಲ್ಲಿ ಮೂಡಿ ಬರುತ್ತಿರುವ ಚಿತ್ರವಿದು. ಟಾಲಿವುಡ್‌ನ ದೇವಿಶ್ರೀ ಪ್ರಸಾದ್‌ (Devi Sri Prasad) ಸಂಗೀತ, ಬಾಹುಬಲಿ ಚಿತ್ರಕ್ಕೆ ಕ್ಯಾಮೆರಾ ಹಿಡಿದ್ದ ಕೆ ಸೆಂಥಿಲ್ ಕುಮಾರ್‌ ಛಾಯಾಗ್ರಹಣ ಇರಲಿದೆ. ರವೀಂದರ್‌ ಕಲಾ ನಿರ್ದೇಶನ, ಖ್ಯಾತ ಸ್ಟಂಟ್‌ ಮಾಸ್ಟರ್‌ ಪೀಟರ್‌ ಹೀನ್‌ (Peter Hein) ಸಾಹಸ ಸಂಯೋಜನೆ ಚಿತ್ರಕ್ಕಿದೆ. ಚಿಕ್ಕ ವಯಸ್ಸಿನಲ್ಲೇ ಕಿರೀಟಿ ರೆಡ್ಡಿಗೆ ಸಿನಿಮಾರಂಗದ ಮೇಲೆ ಆಸಕ್ತಿ ಬೆಳೆದಿತ್ತು. ‘ಜಾಕಿ’ ಚಿತ್ರ ತೆರೆಕಂಡಾಗ ಪುನೀತ್ ರಾಜ್‌ಕುಮಾರ್ (Puneeth Rajkumar) ಅವರೊಟ್ಟಿಗೆ ಸಿನಿಮಾ ನೋಡುವ ಅವಕಾಶವೂ ಕಿರೀಟಿಗೆ ಲಭ್ಯವಾಗಿತ್ತು. 

ಸಿನಿಮಾ ಹಂಗಾಮಾ ವೀಡಿಯೋಗಳನ್ನು ವೀಕ್ಷಿಸಲು ಇಲ್ಲಿ ಕ್ಲಿಕ್ಕಿಸಿ: https://kannada.asianetnews.com/movies

04:59ಟಾಕ್ಸಿಕ್ ಹಸಿಬಿಸಿ ದೃಶ್ಯದ ವಿರುದ್ದ ಕಂಪ್ಲೇಂಟ್; ಈ ವಿವಾದದ ಬಗ್ಗೆ ಯಶ್ ಏನಂತಾರೆ..?
03:36Golden Star Ganesh ಬಗ್ಗೆ ಇಂಥ ಚಿಂತಾಜನಕ ಸುದ್ದಿ ಹರಡಿದ್ಯಾಕೆ? ಯಾಕೆ ಹೀಗಾಯ್ತು?
05:51ದರ್ಶನ್ ಪತ್ನಿ ವಿಜಯಲಕ್ಷ್ಮೀ ವಿರುದ್ಧ ಅಶ್ಲೀಲ ಕಾಮೆಂಟ್: ಇಬ್ಬರ ಅರೆಸ್ಟ್, ಫ್ಯಾನ್ಸ್ ವಾರ್‌ಗೆ ಬ್ರೇಕ್
02:06ಬಾಕ್ಸಾಫೀಸ್​​ನಲ್ಲಿ ದಾಖಲೆ ಬರೆದ ಧುರಂಧರ್: ವೆಬ್​ ಸರಣಿ ನಿರ್ದೇಶನಕ್ಕೆ ಕೈ ಹಾಕಿದ ಪಿ.ಸಿ.ಶೇಖರ್
05:38ಒಂದೇ ಒಂದು ಹಾಡಿನಿಂದ ಟ್ರೆಂಡಿಂಗ್ ಟಾಪ್​ಸಿಂಗರ್​ಆಗ್ಬಿಟ್ರಾ ಸಾನ್ವಿ? ಅಪ್ಪನಂತೇ ಮಗಳು, ಸಂಗೀತದ ಬೆರಗು..!
03:37ಇತ್ತ ಡೆವಿಲ್.. ಅತ್ತ ಟ್ರಯಲ್.. ದಾಸನಿಗೆ ಟ್ರಬಲ್: ಪವಿತ್ರಾ ಗೌಡಗೂ ಟಿವಿ ಕೊಡಿ, ವಕೀಲರ ಮನವಿ!
04:23'ತ್ರಿಮೂರ್ತಿ'ಗಳ ಹಾಲಿವುಡ್‌ ರೇಂಜ್ ಮೇಕಿಂಗ್ '45' ಸಿನಿಮಾ ಟ್ರೈಲರ್ ನೋಡಿದವ್ರು ಏನಂತಿದಾರೆ?!
05:37ಡೆವಿಲ್ ಸಿನಿಮಾದಲ್ಲಿ ದರ್ಶನ್ ಸಿಎಂ..! ಕಿಚ್ಚ ಸುದೀಪ್ ಹೇಳಿದ ಪಾಲಿಟಿಕ್ಸ್ ಸೀಕ್ರೆಟ್ ಏನು?
04:38Video: ನಟಿ ರಮ್ಯಾಗೆ ಸಂದರ್ಶನದಲ್ಲೇ ತಿರುಗೇಟು ಕೊಟ್ಟ Actor Darshan Wife Vijayalakshmi
04:51ಎಲ್ಲೆಲ್ಲೂ 'ಗಿಲ್ಲಿ ನಟ'ನದೇ ದರ್ಬಾರ್.. ಬಿಗ್ ಬಾಸ್‌ನಲ್ಲೂ ಬಿಗ್ ಸ್ಕ್ರೀನ್‌ನಲ್ಲೂ ಸಖತ್ ಸದ್ದು..!
Read more