Kireeti Reddy: ಅದ್ಧೂರಿಯಾಗಿ ನೆರವೇರಿದ ಜನಾರ್ಧನ ರೆಡ್ಡಿ ಪತ್ರನ ಸಿನಿಮಾ ಮುಹೂರ್ತ!

Kireeti Reddy: ಅದ್ಧೂರಿಯಾಗಿ ನೆರವೇರಿದ ಜನಾರ್ಧನ ರೆಡ್ಡಿ ಪತ್ರನ ಸಿನಿಮಾ ಮುಹೂರ್ತ!

Published : Mar 05, 2022, 12:22 PM IST

ಮಾಜಿ ಸಚಿವ ಜನಾರ್ದನ ರೆಡ್ಡಿ ಸುಪುತ್ರ ಕಿರೀಟಿ ಅದ್ಧೂರಿಯಾಗಿ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿದ್ದಾರೆ. ಬಾಹುಬಲಿ ನಿರ್ದೇಶಕ ಎಸ್ಎಸ್ ರಾಜಮೌಳಿಯ ಅಭಯ ಹಸ್ತದಿಂದ ಕಿರೀಟಿ ಚೊಚ್ಚಲ ಚಿತ್ರಕ್ಕೆ ಆರಂಭ ಸಿಕ್ಕಿದೆ.

ಮಾಜಿ ಸಚಿವ ಜನಾರ್ದನ ರೆಡ್ಡಿ (Janardhana Reddy) ಸುಪುತ್ರ ಕಿರೀಟಿ (Kireeti Reddy) ಅದ್ಧೂರಿಯಾಗಿ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿದ್ದಾರೆ. ಬಾಹುಬಲಿ ನಿರ್ದೇಶಕ ಎಸ್ಎಸ್ ರಾಜಮೌಳಿಯ (SS Rajamouli) ಅಭಯ ಹಸ್ತದಿಂದ ಕಿರೀಟಿ ಚೊಚ್ಚಲ ಚಿತ್ರಕ್ಕೆ ಆರಂಭ ಸಿಕ್ಕಿದೆ. ರವಿಚಂದ್ರನ್, ಜೆನಿಲಿಯಾ ರಿತೇಶ್ ದೇಶ್ ಮುಖ್, ಶ್ರೀಲೀಲಾ ಸೇರಿದಂತೆ ದೊಡ್ಡ ತಾರಾಬಳಗವೇ ನಟಿಸಲಿರುವ ಈ ಸಿನಿಮಾದ ಮುಹೂರ್ತ ಅದ್ಧೂರಿಯಾಗಿ ನೆರವೇರಿದೆ.  'ವಾರಾಹಿ ಫಿಲ್ಮಂ ಪ್ರೊಡಕ್ಷನ್' ಈ ಸಿನಿಮಾ ನಿರ್ಮಾಣ ಮಾಡುತ್ತಿದ್ದು, ರಾಧಾ ಕೃಷ್ಣ (Radha Krishna) ನಿರ್ದೇಶನದಲ್ಲಿ ತೆಲುಗು-ಕನ್ನಡ ಭಾಷೆಯಲ್ಲಿ ಸಿನಿಮಾ ಸಿದ್ಧವಾಗುತ್ತಿದೆ. 

ಬೆಳ್ಳಿತೆರೆಗೆ ಎಂಟ್ರಿ ಕೊಡಲು ಸಜ್ಜಾದ ಜನಾರ್ದನ ರೆಡ್ಡಿ ಪುತ್ರ Kireeti

ಕಿರೀಟಿ ಚೊಚ್ಚಲ ಸಿನಿಮಾಗೆ ಕ್ಲ್ಯಾಪ್ ಮಾಡಿ ಇಡೀ ಚಿತ್ರತಂಡಕ್ಕೆ ಶುಭ ಹಾರೈಸಿದ ರಾಜಮೌಳಿ ಹೀರೋ ಇಂಟ್ರೂಡಕ್ಷನ್ ಟೀಸರ್ (Teaser) ನೋಡಿ ಕಿರೀಟಿ ಬೆನ್ನುತಟ್ಟಿದರು. ನನಗೆ ಪ್ರಾಮಿಸಿಂಗ್ ಆಗಿರುವ ಯುವ ಪ್ರತಿಭೆಯನ್ನು ಲಾಂಚ್ ಮಾಡುತ್ತಿರುವುದಕ್ಕೆ ಖುಷಿಯಾಗುತ್ತಿದೆ. ಇವರು ನಟನೆ, ಡ್ಯಾನ್ಸ್, ಸ್ಟಂಟ್ಸ್ ಎಲ್ಲವನ್ನು ಮಾಡುತ್ತಾರೆ. ಇದೇ ಸಂದರ್ಭದಲ್ಲಿ ಯುವ ಪ್ರತಿಭೆಗೆ ಒಳ್ಳೆ ಲಾಂಚ್ ಕೂಡಬೇಕು. ಈ ಪ್ರತಿಭೆ ಈಗ ಅದ್ಭುತ ಕೈಗಳ ಜೊತೆ ಸೇರಿಕೊಂಡಿದೆ. ಅದಕ್ಕೆ ಖುಷಿಯಾಗುತ್ತಿದೆ ಎಂದು ರಾಜಮೌಳಿ ಹೇಳಿದರು. ಮಾತ್ರವಲ್ಲದೇ ರವಿಚಂದ್ರನ್, ಜೆನಿಲಿಯಾ ರಿತೇಶ್ ದೇಶ್ ಮುಖ್ ಹಾಗೂ ಶ್ರೀಲೀಲಾ ಚಿತ್ರದ ಬಗ್ಗೆ ಮಾಹಿತಿಯನ್ನು ಹಂಚಿಕೊಂಡರು.

ಸಿನಿಮಾ ಹಂಗಾಮಾ ವೀಡಿಯೋಗಳನ್ನು ವೀಕ್ಷಿಸಲು ಇಲ್ಲಿ ಕ್ಲಿಕ್ಕಿಸಿ: https://kannada.asianetnews.com/movies

02:59ಜಯಪ್ರಕಾಶ್ ಶೆಟ್ಟಿ ನಟನೆ, ಕನ್ನಡ-ತುಳು ಭಾಷೆಯ 'ಬನ' ರಿಲೀಸ್ ಡೇಟ್ ಅನೌನ್ಸ್!
02:24ನೆಪೋಟಿಸಂ ಬಗ್ಗೆ ಪ್ರಿಯಾಂಕಾ ಉಪೇಂದ್ರ ಹೇಳಿದ್ದೇನು..?!
04:57ಅಪ್ಪನ ಆಸೆ.. ಮಗಳ ಕನಸು.. ಅಪ್ಪ ಇಟ್ಟ ಹೆಸರಲ್ಲೇ ಬಿಜಿನೆಸ್​ಶುರು ಮಾಡಿದ ಅಪ್ಪು ಪುತ್ರಿ ವಂದಿತಾ..!
02:36Yash: ನಟ ಯಶ್​ ಹೃದಯವಂತ, ಜೊತೆ ಕೆಲಸ ಮಾಡಿದ್ದು ಅದ್ಭುತ ಅನುಭವ: ತಾರಾ ಸುತಾರಿಯಾ
08:02Toxic Movie: ಲಸ್ಟ್ ಸ್ಟೋರೀಸ್, ಕಬೀರ್ ಸಿಂಗ್ ಆಯ್ತು; ಮದುವೆಯಾಗಿ ಮಗು ಆದ್ರೂ ಕಮ್ಮಿಯಾಗಿಲ್ಲ Kiara Advani ಬ್ಯೂಟಿ
09:56Yash Toxic Movie Tabaahi Song: ಯಶ್‌, ಕಿಯಾರಾ ಅಡ್ವಾಣಿ ಕೆಮಿಸ್ಟ್ರಿಗೆ ದಂಗಾದ ಇಂಟರ್‌ನೆಟ್‌ ಜಗತ್ತು!
04:04ಶಿವಣ್ಣ-ಧನಂಜಯ್ ಮತ್ತೊಮ್ಮೆ ಜೊತೆಯಾಟ.. ಹೇಮಂತ್ ರಾವ್ ನಿರ್ದೇಶನದಲ್ಲಿ '...ಡ್ರೀಮ್ ಥಿಯೇಟರ್..!
09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
05:49Toxic: Ladies & Ladies Teaser: 3 ಟೀಸರ್.. 100 ಮ್ಯಾಟರ್: ಇದ್ರಲ್ಲಿ ಲೇಡೀಸ್ ಗ್ಯಾಂಗ್ ಆರ್ಭಟ!
07:55Toxic: ಟಾಕ್ಸಿಕ್ ಸೌಂದರ್ಯ & ಸಮರ; ಲೇಡೀಸ್ ಸ್ಪೆಷಲ್ ಟೀಸರ್ ಸೆನ್ಸೇಷನ್‌ ಏನ್ ಹೇಳ್ತಿದೆ?
Read more