Sharan: ಬೆಳ್ಳಿ ಪರದೆ ಮೇಲೆ ನಕ್ಕು ನಗಿಸಲು ಸಜ್ಜಾದ 'ಅವತಾರ ಪುರುಷ'

Nov 15, 2021, 2:39 PM IST

ಸಿಂಪಲ್ ಸುನಿ (Simple Suni) ನಿರ್ದೇಶನದ ಕಾಮಿಡಿ ಕಿಂಗ್ ಅಧ್ಯಕ್ಷ ಶರಣ್ (Sharan) ಅಭಿನಯದ 'ಅವತಾರ ಪುರುಷ' (Avatar Purusha) ಚಿತ್ರ ಡಿಸೆಂಬರ್‌ 10ರಂದು ತೆರೆಗೆ ಬರುತ್ತಿದೆ. ಚಿತ್ರದ ನಿರ್ಮಾಪಕ ಪುಷ್ಕರ್‌ ಮಲ್ಲಿಕಾರ್ಜುನಯ್ಯ (Pushkar Mallikarjunaiah) ಚಿತ್ರದ ಬಿಡುಗಡೆಯ ದಿನಾಂಕದ ಜೊತೆಗೆ ಹೊಸ ಪೋಸ್ಟರನ್ನು ಹಂಚಿಕೊಂಡಿದ್ದಾರೆ. ಚಿತ್ರದ ಟೀಸರ್‌ ಹಾಗೂ ಟ್ರೇಲರ್‌ನಿಂದ ಈಗಾಗಲೇ ಸಾಕಷ್ಟು ಗಮನ ಸೆಳೆದಿದೆ. ಸಸ್ಪೆನ್ಸ್ ಥ್ರಿಲ್ಲಿಂಗ್ ಇರುವ ಚಿತ್ರದಲ್ಲಿ ಶರಣ್ ಅವರನ್ನು ಹಿಂದೆಂದೂ ಕಾಣದ ರೀತಿಯಲ್ಲಿ ಮತ್ತು ಹೊಸ ಅವತಾರದಲ್ಲಿ ಕಾಣಬಹುದಾಗಿದ್ದು, ಅವರ ವೃತ್ತಿ ಜೀವನದಲ್ಲೇ ಬಿಗ್ ಬಜೆಟ್ ಚಿತ್ರವಾಗಿದೆ.

ನಮ್ಮ ಜೀವನದ ಪ್ರತಿ ಘಳಿಗೆಯಲ್ಲೂ ಮಕ್ಕಳು ಅತ್ಯಮೂಲ್ಯ: ನಟ ಶರಣ್

ಮುಖ್ಯವಾಗಿ ಸಿಕ್ಕಾಪಟ್ಟೆ ಶಾಕ್‌ನೊಂದಿಗೆ ಭಯಮೂಡಿಸುವಂತಹ ಬ್ಲ್ಯಾಕ್ ಮ್ಯಾಜಿಕ್ (Black Maagic) ಚಿತ್ರಕಥೆ ಈ ಚಿತ್ರದಲ್ಲಿದೆ. ಶರಣ್‌ ನಟನೆಯ 'ಅವತಾರಪುರುಷ' ಚಿತ್ರ ಎರಡು ಭಾಗಗಳಲ್ಲಿ ತೆರೆಗೆ ಬರಲಿದೆ. 'ಅವತಾರ ಪುರುಷ 1' ಮತ್ತು 'ಅವತಾರ ಪುರುಷ 2' ಹೆಸರಿನಲ್ಲಿ ಸಿನಿಮಾ ಬಿಡುಗಡೆಯಾಗುತ್ತಿದೆ. ಆದರೆ, ಚಿತ್ರದ ಟ್ಯಾಗ್‌ಲೈನ್  ಮಾತ್ರ ಬೇರೆ ಬೇರೆ ಇಡಲಾಗುತ್ತಿದೆ. ಮೊದಲ ಭಾಗಕ್ಕೆ ಅಷ್ಟದಿಗ್ಬಂಧನ ಮಂಡಲಕ ಹಾಗೂ ಎರಡನೇ ಪಾರ್ಟ್‌ಗೆ  ತ್ರಿಶಂಕು ಎನ್ನುವ ಟ್ಯಾಗ್‌ಲೈನ್ ಇಡಲಾಗಿದೆ. ಇನ್ನು  ಶರಣ್‌ಗೆ ಜೋಡಿಯಾಗಿ ಆಶಿಕಾ ರಂಗನಾಥ್ (Ashika Ranganath) ನಟಿಸಿದ್ದಾರೆ. 

ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಕ್ಲಿಕಿಸಿ: Asianet Suvarna Entertainment