Nov 13, 2021, 4:26 PM IST
ನಟ ನೆನಪಿರಲಿ ಪ್ರೇಮ್ (Nenapirali Prem) ಅಭಿನಯದ 'ಪ್ರೇಮಂ ಪೂಜ್ಯಂ' (Premam Poojyam) ಸಿನಿಮಾ ರಾಜ್ಯಾದ್ಯಂತ ಬಿಡುಗಡೆಯಾಗಿ ಉತ್ತಮ ಪ್ರದರ್ಶನ ಕಾಣುತ್ತಿದ್ದು, ಪ್ರೇಕ್ಷಕರಿಂದ ಒಳ್ಳೆಯ ಪ್ರತಿಕ್ರಿಯೆಯನ್ನು ಪಡೆದುಕೊಂಡಿದೆ. ಬೃಂದಾ ಆಚಾರ್ಯ (Brinda Acharya), ಐಂದ್ರಿತಾ ರೇ (Aindrita Ray) ಸಾಧುಕೋಕಿಲ ಮುಂತಾದವರು ಈ ಚಿತ್ರದಲ್ಲಿ ನಟಿಸಿದ್ದಾರೆ. ಇನ್ನು ಈ ಚಿತ್ರವನ್ನು ಸ್ಯಾಂಡಲ್ವುಡ್ ಸೆಲೆಬ್ರಿಟಿಗಳು ವೀಕ್ಷಿಸಿ ಪ್ರೇಮ್ ಮತ್ತು ಚಿತ್ರತಂಡದ ಪ್ರಯತ್ನಕ್ಕೆ ಮೆಚ್ಚುಗೆ ಸೂಚಿಸಿದ್ದಾರೆ. ನಟ ಶರಣ್, ದಿಯಾ ಖ್ಯಾತಿಯ ಖುಷಿ ರವಿ, ತರುಣ್ ಸುಧೀರ್, ಕಾರುಣ್ಯ ರಾಮ್, ನಿರ್ದೇಶಕ ಮಹೇಶ್, ಚಂದನ್ ಆಚಾರ್ ಸೇರಿದಂತೆ ಅನೇಕ ಸೆಲೆಬ್ರಿಟಿಗಳು ಚಿತ್ರವನ್ನು ವೀಕ್ಷಿಸಿದ್ದಾರೆ.
ಏಳು ಶೇಡ್ಗಳಲ್ಲಿ ಪ್ರೇಮದ ರೋಮಾಂಚನ: ಪ್ರೇಮ್
ಪ್ರೇಮಂ ಎಂಬ ಹೆಸರಿನ ರೀತಿಯೇ ಈ ಚಿತ್ರತಂಡಕ್ಕೆ ಸಿನಿಮಾ ಮೇಲೆ ಇರುವ ಪ್ರೇಮವು ಪ್ರತಿ ಫ್ರೇಮ್ನಲ್ಲಿ ಕಾಣಿಸುತ್ತದೆ. ನಿರ್ದೇಶಕರ ಕನಸು ತುಂಬ ಕಲರ್ಫುಲ್ ಆಗಿ ಮೂಡಿಬಂದಿದೆ. ದಿನದಿನಕ್ಕೂ ಪ್ರೇಮ್ ಅವರು ಯಂಗ್ ಆಗಿ ಕಾಣಿಸುತ್ತಾರೆ. ಈ ಸಿನಿಮಾ ಒಂದು ದೃಶ್ಯ ವೈಭವದಂತಿದೆ. ನಿಜವಾದ ಪ್ರೀತಿ ಬಗ್ಗೆ ಒಂದೊಳ್ಳೆಯ ಮೆಸೇಜ್ ಈ ಸಿನಿಮಾದಲ್ಲಿದೆ. ಹಾಗೂ ಪ್ರೇಮ್ ಹೀರೋ ಎಂದುಕೊಂಡು ಈ ಸಿನಿಮಾ ನೋಡಲು ಬಂದೆ. ಆದರೆ ಪೂರ್ತಿ ಸಿನಿಮಾ ನೋಡಿದ ಬಳಿಕ ಗೊತ್ತಾಯಿತು ಇದು ಮಲ್ಟಿಸ್ಟಾರರ್ ಚಿತ್ರ ಎಂದು ಸೆಲೆಬ್ರಿಟಿಗಳು ಚಿತ್ರಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಕ್ಲಿಕಿಸಿ: Asianet Suvarna Entertainment