Avatar Purusha: ಶರಣ್ ಜೊತೆಗಿನ ಚಿತ್ರದ ಬಗ್ಗೆ ಆಶಿಕಾ ರಂಗನಾಥ್ ಮಾತು

Avatar Purusha: ಶರಣ್ ಜೊತೆಗಿನ ಚಿತ್ರದ ಬಗ್ಗೆ ಆಶಿಕಾ ರಂಗನಾಥ್ ಮಾತು

Published : Nov 19, 2021, 01:52 PM ISTUpdated : Nov 19, 2021, 02:14 PM IST

ಅವತಾರ ಪುರುಷ ಚಿತ್ರದ ಬಗ್ಗೆ ನಟಿ ಆಶಿಕಾ ರಂಗನಾಥ್ ಸಖತ್ ಎಕ್ಸೈಟ್ ಆಗಿದ್ದು, ತಮ್ಮ ಪಾತ್ರದ ಬಗ್ಗೆ, ನಿರ್ದೇಶಕ ಸಿಂಪಲ್ ಸುನಿ ಅವರ ಜೊತೆಗಿನ ಕೆಲಸ ಹಾಗೂ ಕಚಗುಳಿಯಿಡುವ ಹಾಸ್ಯ ದೃಶ್ಯಗಳು ಸೇರಿದಂತೆ ಚಿತ್ರದ ಮಾಹಿತಿಯನ್ನು ಹಂಚಿಕೊಂಡಿದ್ದಾರೆ. 

ಸಿಂಪಲ್ ಸುನಿ (Simple Suni) ನಿರ್ದೇಶನದ ಕಾಮಿಡಿ ಕಿಂಗ್ ಅಧ್ಯಕ್ಷ ಶರಣ್ (Sharan) ಅಭಿನಯದ 'ಅವತಾರ ಪುರುಷ' (Avatar Purusha) ಚಿತ್ರ ಡಿಸೆಂಬರ್‌ 10ರಂದು ತೆರೆಗೆ ಬರುತ್ತಿದೆ. ಶರಣ್‌ಗೆ ಜೋಡಿಯಾಗಿ ಚುಟು ಚುಟು ಹುಡುಗಿ ಆಶಿಕಾ ರಂಗನಾಥ್ (Ashika Ranganath) ನಟಿಸಿದ್ದಾರೆ. ಈ ಚಿತ್ರದ ಬಗ್ಗೆ ಆಶಿಕಾ ಸಖತ್ ಎಕ್ಸೈಟ್ ಆಗಿದ್ದು, ತಮ್ಮ ಪಾತ್ರದ ಬಗ್ಗೆ, ನಿರ್ದೇಶಕ ಸಿಂಪಲ್ ಸುನಿ ಅವರ ಜೊತೆಗಿನ ಕೆಲಸ ಹಾಗೂ ಕಚಗುಳಿಯಿಡುವ ಹಾಸ್ಯ ದೃಶ್ಯಗಳು ಸೇರಿದಂತೆ ಚಿತ್ರದ ಮಾಹಿತಿಯನ್ನು ಹಂಚಿಕೊಂಡಿದ್ದಾರೆ. ಎರಡನೇ ಬಾರಿಗೆ ನಟ ಶರಣ್ ಜೊತೆ ಆಶಿಕಾ ತೆರೆಹಂಚಿಕೊಳ್ಳುತ್ತಿದ್ದಾರೆ.

ಡಿಸೆಂಬರ್ 10ಕ್ಕೆ ಗ್ರ್ಯಾಂಡ್ ಎಂಟ್ರಿ ಕೊಡಲಿದ್ದಾನೆ 'ಅವತಾರ ಪುರುಷ'

ಸಿಕ್ಕಾಪಟ್ಟೆ ಶಾಕ್‌ನೊಂದಿಗೆ ಭಯಮೂಡಿಸುವಂತಹ ಬ್ಲ್ಯಾಕ್ ಮ್ಯಾಜಿಕ್ (Black Maagic) ಇರುವ ಈ ಚಿತ್ರಕ್ಕೆ ಪುಷ್ಕರ್‌ ಮಲ್ಲಿಕಾರ್ಜುನಯ್ಯ (Pushkar Mallikarjunaiah) ಬಂಡವಾಳ ಹೂಡಿದ್ದಾರೆ. ಎರಡು ಭಾಗಗಳಲ್ಲಿ ಈ ಚಿತ್ರ ತೆರೆಗೆ ಬರಲಿದೆ. ಮೊದಲ ಭಾಗಕ್ಕೆ ಅಷ್ಟದಿಗ್ಬಂಧನ ಮಂಡಲಕ ಹಾಗೂ ಎರಡನೇ ಪಾರ್ಟ್‌ಗೆ  ತ್ರಿಶಂಕು ಎನ್ನುವ ಟ್ಯಾಗ್‌ಲೈನ್ ಇಡಲಾಗಿದೆ. ಸಾಯಿಕುಮಾರ್‌, ಶ್ರೀನಗರ ಕಿಟ್ಟಿ,  ಸುಧಾರಾಣಿ, ಸಾಧುಕೋಕಿಲ, ಭವ್ಯ, ಅಯ್ಯಪ್ಪ ಸೇರಿದಂತೆ ಮುಂತಾದವರು ಚಿತ್ರದ ತಾರಾಬಳಗದಲ್ಲಿದ್ದಾರೆ. ಈ ಹಿಂದೆ 'ರ‍್ಯಾಂಬೊ 2' ಚಿತ್ರದಲ್ಲಿ ಶರಣ್ ಆಶಿಕಾ ಒಟ್ಟಿಗೆ ನಟಿಸಿದ್ದರು. 

ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಕ್ಲಿಕಿಸಿ: Asianet Suvarna Entertainment

02:59ಜಯಪ್ರಕಾಶ್ ಶೆಟ್ಟಿ ನಟನೆ, ಕನ್ನಡ-ತುಳು ಭಾಷೆಯ 'ಬನ' ರಿಲೀಸ್ ಡೇಟ್ ಅನೌನ್ಸ್!
02:24ನೆಪೋಟಿಸಂ ಬಗ್ಗೆ ಪ್ರಿಯಾಂಕಾ ಉಪೇಂದ್ರ ಹೇಳಿದ್ದೇನು..?!
04:57ಅಪ್ಪನ ಆಸೆ.. ಮಗಳ ಕನಸು.. ಅಪ್ಪ ಇಟ್ಟ ಹೆಸರಲ್ಲೇ ಬಿಜಿನೆಸ್​ಶುರು ಮಾಡಿದ ಅಪ್ಪು ಪುತ್ರಿ ವಂದಿತಾ..!
02:36Yash: ನಟ ಯಶ್​ ಹೃದಯವಂತ, ಜೊತೆ ಕೆಲಸ ಮಾಡಿದ್ದು ಅದ್ಭುತ ಅನುಭವ: ತಾರಾ ಸುತಾರಿಯಾ
08:02Toxic Movie: ಲಸ್ಟ್ ಸ್ಟೋರೀಸ್, ಕಬೀರ್ ಸಿಂಗ್ ಆಯ್ತು; ಮದುವೆಯಾಗಿ ಮಗು ಆದ್ರೂ ಕಮ್ಮಿಯಾಗಿಲ್ಲ Kiara Advani ಬ್ಯೂಟಿ
09:56Yash Toxic Movie Tabaahi Song: ಯಶ್‌, ಕಿಯಾರಾ ಅಡ್ವಾಣಿ ಕೆಮಿಸ್ಟ್ರಿಗೆ ದಂಗಾದ ಇಂಟರ್‌ನೆಟ್‌ ಜಗತ್ತು!
04:04ಶಿವಣ್ಣ-ಧನಂಜಯ್ ಮತ್ತೊಮ್ಮೆ ಜೊತೆಯಾಟ.. ಹೇಮಂತ್ ರಾವ್ ನಿರ್ದೇಶನದಲ್ಲಿ '...ಡ್ರೀಮ್ ಥಿಯೇಟರ್..!
09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
05:49Toxic: Ladies & Ladies Teaser: 3 ಟೀಸರ್.. 100 ಮ್ಯಾಟರ್: ಇದ್ರಲ್ಲಿ ಲೇಡೀಸ್ ಗ್ಯಾಂಗ್ ಆರ್ಭಟ!
07:55Toxic: ಟಾಕ್ಸಿಕ್ ಸೌಂದರ್ಯ & ಸಮರ; ಲೇಡೀಸ್ ಸ್ಪೆಷಲ್ ಟೀಸರ್ ಸೆನ್ಸೇಷನ್‌ ಏನ್ ಹೇಳ್ತಿದೆ?
Read more