James 2022: ಪುನೀತ್ 'ಜೇಮ್ಸ್' ಜಾತ್ರೆಗೆ ಸಿದ್ಧವಾಗಿದೆ ದೊಡ್ಡ ಪ್ಲಾನ್

James 2022: ಪುನೀತ್ 'ಜೇಮ್ಸ್' ಜಾತ್ರೆಗೆ ಸಿದ್ಧವಾಗಿದೆ ದೊಡ್ಡ ಪ್ಲಾನ್

Suvarna News   | Asianet News
Published : Mar 10, 2022, 03:39 PM IST

ಪುನೀತ್ ರಾಜ್‌ಕುಮಾರ್ 'ಜೇಮ್ಸ್‌' ಸಿನಿಮಾ ಬಗ್ಗೆ ಹೇಳುತ್ತಾ ಕುಳಿತರೆ ಸಮಯವೇ ಸಾಲಲ್ಲ.ಯಾಕಂದ್ರೆ ಟೀಸರ್‌ ಹಾಗೂ 1 ಹಾಡಿನಿಂದ 'ಜೇಮ್ಸ್‌' ಸಿನಿಮಾ ಸಾಕಷ್ಟು ಹೈಪ್‌ ಕ್ರಿಯೇಟ್‌ ಮಾಡಿದೆ. ಹೀಗಾಗಿಯೇ 'ಜೇಮ್ಸ್‌' ಬಿಡುಗಡೆಗೆ ಇನ್ನೂ ಕೆಲವೇ ದಿನ ಬಾಕಿ ಇದ್ದರೂ ಎಲ್ಲೆಲ್ಲೂ 'ಅಪ್ಪು' ಕಟೌಟ್ ಗಳೇ ರಾರಾಜಿಸುತ್ತಿವೆ. 

ಪವರ್ ಸ್ಟಾರ್ ಪುನೀತ್ ರಾಜ್‌ಕುಮಾರ್ (Puneeth Rajkumar) 'ಜೇಮ್ಸ್‌' (James) ಸಿನಿಮಾ ಬಗ್ಗೆ ಹೇಳುತ್ತಾ ಕುಳಿತರೆ ಸಮಯವೇ ಸಾಲಲ್ಲ.ಯಾಕಂದ್ರೆ ಟೀಸರ್‌ ಹಾಗೂ 1 ಹಾಡಿನಿಂದ 'ಜೇಮ್ಸ್‌' ಸಿನಿಮಾ ಸಾಕಷ್ಟು ಹೈಪ್‌ ಕ್ರಿಯೇಟ್‌ ಮಾಡಿದೆ. ಹೀಗಾಗಿಯೇ 'ಜೇಮ್ಸ್‌' ಬಿಡುಗಡೆಗೆ ಇನ್ನೂ ಕೆಲವೇ ದಿನ ಬಾಕಿ ಇದ್ದರೂ ಎಲ್ಲೆಲ್ಲೂ 'ಅಪ್ಪು' ಕಟೌಟ್ ಗಳೇ ರಾರಾಜಿಸುತ್ತಿವೆ. ಈ ಮೂಲಕ 'ಜೇಮ್ಸ್‌' ಚಿತ್ರ ಬರಮಾಡಿಕೊಳ್ಳಲು ಇಡೀ ಜಗತ್ತೇ ತುದಿಗಾಲಲ್ಲಿ ನಿಂತಿದೆ. ಅದರಲ್ಲೂ ಅಪ್ಪು ಅಭಿಮಾನಿಗಳು 'ಜೇಮ್ಸ್‌' ಚಿತ್ರವನ್ನು ಬರಮಾಡಿಕೊಳ್ಳಲು ತಮ್ಮದೇ ಆದಂತಹ ರೀತಿಯಲ್ಲಿ ಸಜ್ಜಾಗಿದ್ದಾರೆ. ವಿಶೇಷವಾಗಿ ಥಿಯೇಟರ್‌ಗಳ ಎದುರು ಅಪ್ಪು ದೊಡ್ಡ ಕಟೌಟ್‌ ಹಾಕಲಾಗಿದ್ದು, ಕನ್ನಡಿಗರ ಪಾಲಿನ ನೆಚ್ಚಿನ 'ಅಣ್ಣಾವ್ರು' ಡಾ. ರಾಜ್‌ ಕುಮಾರ್‌ ಹಾಗೂ ಪಾರ್ವತಮ್ಮ ಅವರ ಕಟೌಟ್‌ ಸಹ ಹಾಕಲಾಗಿದೆ. 

James 2022: ಬಾಕ್ಸಾಫೀಸ್‌ನಲ್ಲಿ ನೂರು ಕೋಟಿ ಕ್ಲಬ್‌ಗೆ ಸೇರಲಿದೆಯಂತೆ ಪುನೀತ್ ಸಿನಿಮಾ!

ಮಾರ್ಚ್ 17ರಂದು ಪುನೀತ್ ಹುಟ್ಟುಹಬ್ಬದಂದು ಏಕಕಾಲಕ್ಕೆ ಕನ್ನಡದ ಜತೆಗೆ ತೆಲುಗು, ತಮಿಳು, ಮಲಯಾಳಂ ಹಾಗೂ ಹಿಂದಿಯಲ್ಲಿ ಬಿಡುಗಡೆ ಆಗುತ್ತಿದೆ. ಹೊರ ದೇಶಗಳಲ್ಲೂ ‘ಜೇಮ್ಸ್‌’ ದರ್ಶನ ಆಗುತ್ತಿದೆ. ಚಿತ್ರದಲ್ಲಿ ಪುನೀತ್ ರಾಜ್‌ಕುಮಾರ್ ಡಬಲ್‌ ಶೇಡ್‌ನಲ್ಲಿ ಕಾಣಿಸಿಕೊಂಡಿದ್ದು, ಈಗಾಗಲೇ ಪವರ್ ಆರ್ಮಿ ಆಫೀಸರ್ ಆಗಿ ಸಿನಿರಸಿಕರಿಗೆ ಕಿಕ್ ಕೊಟ್ಟಿದ್ದಾರೆ. ಪುನೀತ್‌ಗೆ ನಾಯಕಿಯಾಗಿ ಪ್ರಿಯಾ ಆನಂದ್ ಜೋಡಿಯಾಗಿದ್ದಾರೆ. ಚೇತನ್ ಕುಮಾರ್ (Chetan Kumar) ನಿರ್ದೇಶನದ ಈ ಚಿತ್ರಕ್ಕೆ ಕಿಶೋರ್ ಪತ್ತಿಕೊಂಡ (Kishore Pathikonda) ಬಂಡವಾಳ ಹೂಡಿದ್ದಾರೆ. ಹೆಚ್ಚಿನ ಮಾಹಿತಿಗೆ ಈ ವಿಡಿಯೋವನ್ನು ವೀಕ್ಷಿಸಿ.

ಸಿನಿಮಾ ಹಂಗಾಮಾ ವೀಡಿಯೋಗಳನ್ನು ವೀಕ್ಷಿಸಲು ಇಲ್ಲಿ ಕ್ಲಿಕ್ಕಿಸಿ: https://kannada.asianetnews.com/movies

06:59ಜಿಮ್ ಮಾಡ್ತಿದ್ದ ದರ್ಶನ್ 'ಯೋಗ' ಮಾಡುವಂತಾಗಿದ್ದು ಹೀಗೆ.. ಅವರು ಹೇಳಿಲ್ಲಾ ಅಂದ್ರೆ ಇವರು ಮಾಡ್ತಿರ್ಲಿಲ್ಲ!?
05:4622 ವರ್ಷಗಳ ಬಳಿಕ ಮತ್ತೆ ಬಂತು ಕಲಾಸಿಪಾಳ್ಯ; ಸಿನಿಮಾ ಮೂಲಕ ಫ್ಯಾನ್ಸ್‌ಗೆ 'ಕೆಂಚ'ನ 'ದರ್ಶನ'
13:34Darshan-Boss: ದರ್ಶನ್‌ಗೆ ಯಾಕೆ ಇಷ್ಟೊಂದು ಟೆನ್ಷನ್? 'ಬಾಸ್' ಸಿನಿಮಾದಲ್ಲಿ ಅಂಥದ್ದೇನಿದೆ?
04:23Cine Express: ಸಿನಿ ಪ್ರೇಮಿಗಳಿಗೆ ಗುಡ್ ನ್ಯೂಸ್: ಟೀಸರ್, ಹಾಡು, ಸಿನಿಮಾ ರಿಲೀಸ್ ಮತ್ತು ಮದುವೆ ಸುದ್ದಿ!
04:28ಚಿನ್ನೇಗೌಡರ ಪತ್ನಿ ಜಯಮ್ಮ ವಿಧಿವಶ; ವಿಜಯ್ ರಾಘವೇಂದ್ರ, ಶ್ರೀಮುರುಳಿಗೆ ಮಾತೃವಿಯೋಗ
04:23ಅತೀ ಶೀಘ್ರದಲ್ಲೇ ಅಂತಿಮ ತೀರ್ಪು.. ದರ್ಶನ್‌ಗೆ ಸಿಗೋದು ಬೇಲಾ, ಪರ್ಮನೆಂಟ್ ಜೈಲಾ?
04:33Cine Express: '8' ಗ್ಲಿಂಪ್ಸ್‌ನಿಂದ 'ಊರಬ್ಬ' ಟ್ರೇಲರ್‌ವರೆಗೆ: ಸ್ಯಾಂಡಲ್‌ವುಡ್‌ನಲ್ಲಿ ಸಿನಿಮಾಗಳ ಹವಾ
04:30Cine Express: ಈ ವಾರ ಸಿನಿ ಇಂಡಸ್ಟ್ರಿಯಲ್ಲಿ ಹೆಚ್ಚು ಚರ್ಚೆಯಾದ 5 ದೊಡ್ಡ ಅಪ್‌ಡೇಟ್‌ಗಳು ಯಾವುವು?
04:09ಅಪ್ಪನಿಗಾಗಿ ಬಂದ ಹೊಸ ಹಾಡು, ಕಾನ್ಸ್‌ನಲ್ಲಿ ಮೆಚ್ಚುಗೆ ಪಡೆದ ಚಿತ್ರದ ಟ್ರೇಲರ್: ಸಿನಿರಂಗದಲ್ಲಿ ಏನಾಗುತ್ತಿದೆ?
04:18ಸ್ಯಾಂಡಲ್​ವುಡ್​ನಲ್ಲಿ ಮತ್ತೆ ನೆಪೋಟಿಸಂ ಕಿಚ್ಚು: ವಿವಾದಕ್ಕೆ ಅಂತ್ಯ ಹಾಡಿದ ಶಿವಣ್ಣ
Read more