ಜೈಲಿಂದ ದರ್ಶನ್ ರಿಲೀಸ್ ಬಗ್ಗೆ ಸ್ಫೋಟಕ ಭವಿಷ್ಯ ನುಡಿದ ಕೌಡೇಪೀರ ಲಾಲಸಾಬ!

ಜೈಲಿಂದ ದರ್ಶನ್ ರಿಲೀಸ್ ಬಗ್ಗೆ ಸ್ಫೋಟಕ ಭವಿಷ್ಯ ನುಡಿದ ಕೌಡೇಪೀರ ಲಾಲಸಾಬ!

Published : Jul 26, 2024, 12:42 PM ISTUpdated : Jul 26, 2024, 01:16 PM IST

ದರ್ಶನ್ ಯಾವಾಗ ಹೊರ ಬರುತ್ತಾರೆ ಎನ್ನುವ ಪ್ರಶ್ನೆ ಅಭಿಮಾನಿಗಳನ್ನು ಬಹುವಾಗಿ ಕಾಡಿತ್ತು. ಇದಕ್ಕೆ ಕೌಡೇಪಿರ ಲಾಲಸಾಬ ದೇವರು ಭವಿಷ್ಯ ನುಡಿದಿದ್ದು ಅಚ್ಚರಿಯ ಭವಿಷ್ಯ ನುಡಿದಿದ್ದು ಈಗ ಎಲ್ಲೆಡೆ ವೈರಲ್ ಆಗುತ್ತಿದೆ.

ಒಂದು ಕಡೆ ದರ್ಶನ್‌ಗೆ ಬೇಲ್ ಸಿಗ್ತಿಲ್ಲ. ಇನ್ನೊಂದು ಕಡೆ ಪ್ರಾಥಮಿಕ ಚಾರ್ಜ್ ಶೀಟ್ ರೆಡಿಯಾಗುತ್ತಿದ್ದು ದರ್ಶನ್ ಇನ್ ಟ್ರಬಲ್ ಎನ್ನಲಾಗಿದೆ.  ರೇಣುಕಾ ಸ್ವಾಮಿ ಕೊಲೆ ಕೇಸ್ನಲ್ಲಿ ಜೈಲಿಗೆ ಹೋಗಿ ಒಂದು ತಿಂಗಳಿಗೂ ಹೆಚ್ಚು ಸಮಯವಾಯಿತು. ಬೆಂಗಳೂರಿನ ಕೇಂದ್ರ ಕಾರಾಗೃಹದಲ್ಲಿ ಅವರನ್ನು ಇಡಲಾಗಿದೆ. ದರ್ಶನ್ ಅವರು ಎ2 ಆರೋಪಿ ಆದರೆ, ಪವಿತ್ರಾ ಗೌಡ ಅವರು ಎ1 ಆರೋಪಿ ಎನಿಸಿಕೊಂಡಿದ್ದಾರೆ. ದರ್ಶನ್ ಯಾವಾಗ ಹೊರ ಬರುತ್ತಾರೆ ಎನ್ನುವ ಪ್ರಶ್ನೆ ಅಭಿಮಾನಿಗಳನ್ನು ಬಹುವಾಗಿ ಕಾಡಿತ್ತು. ಇದಕ್ಕೆ ಕೌಡೇಪಿರ ಲಾಲಸಾಬ ದೇವರು ಭವಿಷ್ಯ ನುಡಿದಿದ್ದು ಅಚ್ಚರಿಯ ಭವಿಷ್ಯ ನುಡಿದಿದ್ದು ಈಗ ಎಲ್ಲಡೆ ವೈರಲ್ ಆಗುತ್ತಿದೆ.

ದರ್ಶನ್ ಜೈಲಿನಲ್ಲಿ ನರಕಯಾತನೆ ಅನುಭವಿಸುತ್ತಿದ್ದಾರೆ. ಜೈಲೂಟ ಹೊಂದುತ್ತಿಲ್ಲ. ಶತಾಯ ಗತಾಯ ಅವರು ಹೊರ ಬರಲು ಪ್ರಯತ್ನಿಸುತ್ತಿದ್ದಾರೆ. ಆದರೆ. ಅದು ಸಾಧ್ಯವಾಗುತ್ತಿಲ್ಲ. ಚಾರ್ಜ್ಶೀಟ್ ಸಲ್ಲಿಕೆ ಮಾಡದೆ ಜಾಮೀನಿಗೆ ಅರ್ಜಿ ಹಾಕೋಕೆ ಸಾಧ್ಯವಿಲ್ಲ. ಹೀಗಾಗಿ, ದರ್ಶನ್ ಅವರಿಗೆ ಯಾವಾಗ ಹೊರಗೆ ಬರುತ್ತೇನೆ ಎಂದು ಅತಿಯಾಗಿ ಅನಿಸುತ್ತಿದೆ. ಅಭಿಮಾನಿಗಳಿಗೂ ತಮ್ಮ ನೆಚ್ಚಿನ ನಟ ಯಾವಾಗ ಹೊರಕ್ಕೆ ಬರೋದು ಎನ್ನುವ ಪ್ರಶ್ನೆ ಕಾಡಿದೆ. ಇದಕ್ಕೆ ದೇವರಿಂದ ಉತ್ತರ ಸಿಕ್ಕಿದೆ.ಕೊಪ್ಪಳ ಜಿಲ್ಲೆಯ ಕನಕಗಿರಿ ಪಟ್ಟಣದ 10ನೇ ವಾರ್ಡಿನಲ್ಲಿ ಇರಿಸಲಾಗಿದ್ದ ಕೌಡೇಪಿರ ಲಾಲಸಾಬ ಅವರು ಈ ಭವಿಷ್ಯ ನುಡಿದಿದ್ದಾರೆ. ದರ್ಶನ್ ಅಭಿಮಾನಿಗಳು ದೇವರ ಎದುರು ಪ್ರಶ್ನೆ ಇಟ್ಟಿದ್ದರು. ‘ದರ್ಶನ್ ಬಿಡುಗಡೆ ಯಾವಾಗ’ ಎನ್ನುವ ಪ್ರಶ್ನೆ ಕೇಳಿದ್ದರು. ಇದಕ್ಕೆ ಈ ದೇವರಿಂದ ಉತ್ತರ ಸಿಕ್ಕಿದೆ. 

‘ಮೂರೇ ತಿಂಗಳಲ್ಲಿ ದರ್ಶನ್ ಹೊರಕ್ಕೆ ಬರುತ್ತಾರೆ’ ಎಂದು ದೇವರು ಭವಿಷ್ಯ ನುಡಿದಿದ್ದಾರೆ. ಈ ಹಿಂದೆ  2019ರಲ್ಲಿ ಅಕ್ರಮ ಹಣವರ್ಗಾವಣೆ ಪ್ರಕರಣದಲ್ಲಿ ಕಾಂಗ್ರೆಸ್ನ ಹಿರಿಯ ನಾಯಕ ಡಿಕೆ ಶಿವಕುಮಾರ್ ಅರೆಸ್ಟ್ ಆಗಿದ್ದರು. ಆ ಸಂದರ್ಭದಲ್ಲೂ ಕೌಡೇಪಿರ ಲಾಲಸಾಬ ದೇವರು ಭವಿಷ್ಯ ನುಡಿದಿತ್ತು.  ಅದು ನಿಜ ಆಗಿತ್ತು. ಹೀಗಾಗಿ, ದರ್ಶನ್ ಫ್ಯಾನ್ಸ್ ಈಗ ಖುಷಿಯಾಗಿದ್ದಾರೆ. ಮೊಹರಂ ಸಂದರ್ಭದಲ್ಲಿ ದೇವರನ್ನು ಕೂರಿಸೋ ಪದ್ಧತಿ ಮುಸ್ಲಿಂ ಧರ್ಮದಲ್ಲಿ ಇದೆ. ಅದೇ ರೀತಿ ಕೊಪ್ಪಳದಲ್ಲಿ ಕೌಡೇಪಿರ ಲಾಲಸಾಬ ದೇವರು ದರ್ಶನ್ ಬಗ್ಗೆ ಉತ್ತರಿಸಿದ್ದಾರೆ. ಸದ್ಯಕ್ಕಂತೂ ಈ ಸುದ್ದಿಯಿಂದ ದರ್ಶನ್ ಅಭಿಮಾನಿಗಳಿಗೆ ಖುಷಿಯಾಗಿದೆ.

04:59ಟಾಕ್ಸಿಕ್ ಹಸಿಬಿಸಿ ದೃಶ್ಯದ ವಿರುದ್ದ ಕಂಪ್ಲೇಂಟ್; ಈ ವಿವಾದದ ಬಗ್ಗೆ ಯಶ್ ಏನಂತಾರೆ..?
03:36Golden Star Ganesh ಬಗ್ಗೆ ಇಂಥ ಚಿಂತಾಜನಕ ಸುದ್ದಿ ಹರಡಿದ್ಯಾಕೆ? ಯಾಕೆ ಹೀಗಾಯ್ತು?
05:51ದರ್ಶನ್ ಪತ್ನಿ ವಿಜಯಲಕ್ಷ್ಮೀ ವಿರುದ್ಧ ಅಶ್ಲೀಲ ಕಾಮೆಂಟ್: ಇಬ್ಬರ ಅರೆಸ್ಟ್, ಫ್ಯಾನ್ಸ್ ವಾರ್‌ಗೆ ಬ್ರೇಕ್
02:06ಬಾಕ್ಸಾಫೀಸ್​​ನಲ್ಲಿ ದಾಖಲೆ ಬರೆದ ಧುರಂಧರ್: ವೆಬ್​ ಸರಣಿ ನಿರ್ದೇಶನಕ್ಕೆ ಕೈ ಹಾಕಿದ ಪಿ.ಸಿ.ಶೇಖರ್
05:38ಒಂದೇ ಒಂದು ಹಾಡಿನಿಂದ ಟ್ರೆಂಡಿಂಗ್ ಟಾಪ್​ಸಿಂಗರ್​ಆಗ್ಬಿಟ್ರಾ ಸಾನ್ವಿ? ಅಪ್ಪನಂತೇ ಮಗಳು, ಸಂಗೀತದ ಬೆರಗು..!
03:37ಇತ್ತ ಡೆವಿಲ್.. ಅತ್ತ ಟ್ರಯಲ್.. ದಾಸನಿಗೆ ಟ್ರಬಲ್: ಪವಿತ್ರಾ ಗೌಡಗೂ ಟಿವಿ ಕೊಡಿ, ವಕೀಲರ ಮನವಿ!
04:23'ತ್ರಿಮೂರ್ತಿ'ಗಳ ಹಾಲಿವುಡ್‌ ರೇಂಜ್ ಮೇಕಿಂಗ್ '45' ಸಿನಿಮಾ ಟ್ರೈಲರ್ ನೋಡಿದವ್ರು ಏನಂತಿದಾರೆ?!
05:37ಡೆವಿಲ್ ಸಿನಿಮಾದಲ್ಲಿ ದರ್ಶನ್ ಸಿಎಂ..! ಕಿಚ್ಚ ಸುದೀಪ್ ಹೇಳಿದ ಪಾಲಿಟಿಕ್ಸ್ ಸೀಕ್ರೆಟ್ ಏನು?
04:38Video: ನಟಿ ರಮ್ಯಾಗೆ ಸಂದರ್ಶನದಲ್ಲೇ ತಿರುಗೇಟು ಕೊಟ್ಟ Actor Darshan Wife Vijayalakshmi
04:51ಎಲ್ಲೆಲ್ಲೂ 'ಗಿಲ್ಲಿ ನಟ'ನದೇ ದರ್ಬಾರ್.. ಬಿಗ್ ಬಾಸ್‌ನಲ್ಲೂ ಬಿಗ್ ಸ್ಕ್ರೀನ್‌ನಲ್ಲೂ ಸಖತ್ ಸದ್ದು..!
Read more