Yash: 'ಕೆಜಿಎಫ್ 2' ಚಿತ್ರದ ಪ್ಯಾನ್‌ವರ್ಲ್ಡ್ ಪ್ರಚಾರಕ್ಕೆ ಭರ್ಜರಿ ತಯಾರಿ

Yash: 'ಕೆಜಿಎಫ್ 2' ಚಿತ್ರದ ಪ್ಯಾನ್‌ವರ್ಲ್ಡ್ ಪ್ರಚಾರಕ್ಕೆ ಭರ್ಜರಿ ತಯಾರಿ

Suvarna News   | Asianet News
Published : Mar 05, 2022, 01:27 PM IST

ರಾಕಿಂಗ್ ಸ್ಟಾರ್ ಯಶ್ ಅಭಿನಯದ ಬಹುನಿರೀಕ್ಷಿತ 'ಕೆಜಿಎಫ್ ಚಾಪ್ಟರ್ 2' ಸಿನಿಮಾದ ಬಿಡುಗಡೆಗಾಗಿ ಅಭಿಮಾನಿಗಳು ಕಾಯುತ್ತಿದ್ದಾರೆ. 2018ರ ಡಿಸೆಂಬರ್‌ನಲ್ಲಿ ಪಾರ್ಟ್ 1 ರಿಲೀಸ್ ಆಗಿತ್ತು. ಇದೀಗ ಏಪ್ರಿಲ್ 14ರಂದು ಪಾರ್ಟ್ 2 ರಿಲೀಸ್ ಆಗಲಿದೆ. 

ರಾಕಿಂಗ್ ಸ್ಟಾರ್ ಯಶ್ (Yash) ಅಭಿನಯದ ಬಹುನಿರೀಕ್ಷಿತ 'ಕೆಜಿಎಫ್ ಚಾಪ್ಟರ್ 2'(KGF Chapter 2) ಸಿನಿಮಾದ ಬಿಡುಗಡೆಗಾಗಿ ಅಭಿಮಾನಿಗಳು ಕಾಯುತ್ತಿದ್ದಾರೆ. 2018ರ ಡಿಸೆಂಬರ್‌ನಲ್ಲಿ ಪಾರ್ಟ್ 1 ರಿಲೀಸ್ ಆಗಿತ್ತು. ಇದೀಗ ಏಪ್ರಿಲ್ 14ರಂದು ಪಾರ್ಟ್ 2 ರಿಲೀಸ್ ಆಗಲಿದೆ. ಕೆಜಿಎಫ್​ ಇಡೀ ವಿಶ್ವವನ್ನೇ ಕನ್ನಡ ಚಿತ್ರರಂಗದತ್ತ ತಿರುಗಿ ನೋಡುವಂತೆ ಮಾಡಿದ ಸಿನಿಮಾ. ಇದೀಗ ಈ ಸಿನಿಮಾವನ್ನು ಪ್ಯಾನ್‌ವರ್ಲ್ಡ್ ಆಗಿಸಬೇಕೆಂದು ಚಿತ್ರತಂಡ ತಯಾರಿ ನಡೆಸಿದ್ದು, 'ಕೆಜಿಎಫ್ 2' ಟ್ರೇಲರ್ ರಿಲೀಸ್ ಡೇಟ್ ಅನೌನ್ಸ್ ಮಾಡುವ ಮೂಲಕ ವಿಶ್ವಮಟ್ಟದಲ್ಲಿ ಪ್ರಚಾರ ಮಾಡಲು ಶುರು ಮಾಡಿದೆ. 

KGF Chapter 2: : ರಾಕಿ ಭಾಯ್ ಚಿತ್ರದ ಟ್ರೇಲರ್‌ ರಿಲೀಸ್‌ಗೆ ಮುಹೂರ್ತ ಫಿಕ್ಸ್!

ಚಿತ್ರದ ಟ್ರೇಲರ್ ಮಾರ್ಚ್ 27ರಂದು ಸಂಜೆ 6.40ಕ್ಕೆ ರಿಲೀಸ್ ಆಗಲಿದೆ. ಈ ಹಿಂದೆ ಯಶ್​ ಅವರ ಹುಟ್ಟುಹಬ್ಬಕ್ಕೆ 'ಕೆಜಿಎಫ್ 2' ಚಿತ್ರದ ಹೊಸ ಪೋಸ್ಟರ್​ವೊಂದು ರಿಲೀಸ್​ ಆಗಿತ್ತು. 'ಡೇಂಜರ್​ ಆಹೆಡ್' ಎಂಬ ಬರಹ ಬರೆದು ಪೋಸ್ಟರ್​ ರಿಲೀಸ್​ ಮಾಡಲಾಗಿತ್ತು. ಇನ್ನು ರವಿ ಬಸ್ರೂರ್ ಸಂಗಿತ ಸಂಯೋಜನೆ 'ಕೆಜಿಎಫ್ 2' ಚಿತ್ರಕ್ಕಿದ್ದು, ಪ್ರಕಾಶ್ ರಾಜ್, ಬಾಲಿವುಡ್ ನಟ ಸಂಜಯ್ ದತ್, ತೆಲುಗು ನಟ ರಾವ್ ರಮೇಶ್, ರವೀನಾ ಟಂಡನ್ ಸೇರಿದಂತೆ ದೊಡ್ಡ ತಾರಾಬಳಗ ಚಿತ್ರಕ್ಕಿದೆ. 'ಕೆಜಿಎಫ್ 2'​ ಸಿನಿಮಾ ಏಪ್ರಿಲ್​ 14ಕ್ಕೆ ವಿಶ್ವದಾದ್ಯಾಂತ‌ ಏಕಕಾಲದಲ್ಲಿ ಕನ್ನಡ, ಹಿಂದಿ, ತಮಿಳು, ತೆಲುಗು, ಮಲಯಾಳಂ ಸೇರಿದಂತೆ ಇಂಗ್ಲಿಷ್ ಭಾಷೆಗಳಲ್ಲಿ ತೆರೆ ಕಾಣಲಿದೆ.

ಸಿನಿಮಾ ಹಂಗಾಮಾ ವೀಡಿಯೋಗಳನ್ನು ವೀಕ್ಷಿಸಲು ಇಲ್ಲಿ ಕ್ಲಿಕ್ಕಿಸಿ: https://kannada.asianetnews.com/movies

04:59ಟಾಕ್ಸಿಕ್ ಹಸಿಬಿಸಿ ದೃಶ್ಯದ ವಿರುದ್ದ ಕಂಪ್ಲೇಂಟ್; ಈ ವಿವಾದದ ಬಗ್ಗೆ ಯಶ್ ಏನಂತಾರೆ..?
03:36Golden Star Ganesh ಬಗ್ಗೆ ಇಂಥ ಚಿಂತಾಜನಕ ಸುದ್ದಿ ಹರಡಿದ್ಯಾಕೆ? ಯಾಕೆ ಹೀಗಾಯ್ತು?
05:51ದರ್ಶನ್ ಪತ್ನಿ ವಿಜಯಲಕ್ಷ್ಮೀ ವಿರುದ್ಧ ಅಶ್ಲೀಲ ಕಾಮೆಂಟ್: ಇಬ್ಬರ ಅರೆಸ್ಟ್, ಫ್ಯಾನ್ಸ್ ವಾರ್‌ಗೆ ಬ್ರೇಕ್
02:06ಬಾಕ್ಸಾಫೀಸ್​​ನಲ್ಲಿ ದಾಖಲೆ ಬರೆದ ಧುರಂಧರ್: ವೆಬ್​ ಸರಣಿ ನಿರ್ದೇಶನಕ್ಕೆ ಕೈ ಹಾಕಿದ ಪಿ.ಸಿ.ಶೇಖರ್
05:38ಒಂದೇ ಒಂದು ಹಾಡಿನಿಂದ ಟ್ರೆಂಡಿಂಗ್ ಟಾಪ್​ಸಿಂಗರ್​ಆಗ್ಬಿಟ್ರಾ ಸಾನ್ವಿ? ಅಪ್ಪನಂತೇ ಮಗಳು, ಸಂಗೀತದ ಬೆರಗು..!
03:37ಇತ್ತ ಡೆವಿಲ್.. ಅತ್ತ ಟ್ರಯಲ್.. ದಾಸನಿಗೆ ಟ್ರಬಲ್: ಪವಿತ್ರಾ ಗೌಡಗೂ ಟಿವಿ ಕೊಡಿ, ವಕೀಲರ ಮನವಿ!
04:23'ತ್ರಿಮೂರ್ತಿ'ಗಳ ಹಾಲಿವುಡ್‌ ರೇಂಜ್ ಮೇಕಿಂಗ್ '45' ಸಿನಿಮಾ ಟ್ರೈಲರ್ ನೋಡಿದವ್ರು ಏನಂತಿದಾರೆ?!
05:37ಡೆವಿಲ್ ಸಿನಿಮಾದಲ್ಲಿ ದರ್ಶನ್ ಸಿಎಂ..! ಕಿಚ್ಚ ಸುದೀಪ್ ಹೇಳಿದ ಪಾಲಿಟಿಕ್ಸ್ ಸೀಕ್ರೆಟ್ ಏನು?
04:38Video: ನಟಿ ರಮ್ಯಾಗೆ ಸಂದರ್ಶನದಲ್ಲೇ ತಿರುಗೇಟು ಕೊಟ್ಟ Actor Darshan Wife Vijayalakshmi
04:51ಎಲ್ಲೆಲ್ಲೂ 'ಗಿಲ್ಲಿ ನಟ'ನದೇ ದರ್ಬಾರ್.. ಬಿಗ್ ಬಾಸ್‌ನಲ್ಲೂ ಬಿಗ್ ಸ್ಕ್ರೀನ್‌ನಲ್ಲೂ ಸಖತ್ ಸದ್ದು..!
Read more