ಮ್ಯಾಕ್ಸ್ ಸಿನಿಮಾ ಯಶಸ್ಸು; ಚಾಮುಂಡೇಶ್ವರಿ ದೇವಿಗೆ ಹರಕೆ ತೀರಿಸಿದ ಕಿಚ್ಚ ಸುದೀಪ್!

ಮ್ಯಾಕ್ಸ್ ಸಿನಿಮಾ ಯಶಸ್ಸು; ಚಾಮುಂಡೇಶ್ವರಿ ದೇವಿಗೆ ಹರಕೆ ತೀರಿಸಿದ ಕಿಚ್ಚ ಸುದೀಪ್!

Published : Dec 30, 2024, 09:10 PM IST

ಮ್ಯಾಕ್ಸ್ ಚಿತ್ರದ ಯಶಸ್ಸಿನ ನಂತರ ಕಿಚ್ಚ ಸುದೀಪ್ ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದರು. ಹೊಸ ವರ್ಷದಲ್ಲಿ 'ಗನ್ಸ್ ಅಂಡ್ ರೋಸಸ್' ಚಿತ್ರದ ಮೂಲಕ ಅರ್ಜುನ್ ನಾಯಕನಾಗಿ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಲಿದ್ದಾರೆ.

ಕಿಚ್ಚ ಸುದೀಪ್ ನಟನೆಯ ಮ್ಯಾಕ್ಸ್ ಸಿನಿಮಾ ಬಾಕ್ಸ್ ಆಫೀಸ್ ನಲ್ಲಿ ಕಮಾಲ್ ಮಾಡ್ತಾ ಇದೆ. ಮ್ಯಾಕ್ಸ್ ಯಶಸ್ಸಿನಿಂದ ಫುಲ್ ಖುಷ್ ಆಗಿರೊ ಕಿಚ್ಚ ಇವತ್ತು ಮೈಸೂರಿನ ಚಾಮುಂಡಿಬೆಟ್ಟಕ್ಕೆ ಹೋಗಿ ನಾಡದೇವತೆಗೆ ಪೂಜೆ ಸಲ್ಲಿಸಿದ್ದಾರೆ. ಭಾನುವಾರ ಚಾಮುಂಡೇಶ್ವರಿ ದೇವಿ ದರ್ಶನಕ್ಕೆ ಬಂದ ಭಕ್ತರು ಕಿಚ್ಚ ಸುದೀಪ್​ನ ನೋಡಿ ಸೆಲ್ಫಿ ಪಡೆದು ಸಂಭ್ರಮ ಪಟ್ಟಿದ್ದಾರೆ. ಮ್ಯಾಕ್ಸ್ ಮೂವಿಗೆ ತೆಲುಗು, ತಮಿಳಿನಲ್ಲೂ ಒಳ್ಳೆ ರೆಸ್ಪಾನ್ಸ್ ಬರ್ತಾ ಇದ್ದು, ವರ್ಷಾಂತ್ಯಕ್ಕೆ ಸ್ಯಾಂಡಲ್‌ವುಡ್‌ನಲ್ಲಿ ಗೆಲುವಿನ ನಗೆ ಮೂಡಿದೆ.

ಹೊಸವರ್ಷದ ಮೊದಲ ಚಿತ್ರ ‘ಗನ್ಸ್ ಅಂಡ್ ರೋಸಸ್’:
ಕನ್ನಡದ ಹಲವು ಸೂಪರ್ ಹಿಟ್ ಚಿತ್ರಗಳಿಗೆ ಕಥೆ ಬರೆದಿರುವ ಅಜಯ್ ಕುಮಾರ್ ಅವರ ಪುತ್ರ ಅರ್ಜುನ್, 'ಗನ್ಸ್ ಅಂಡ್ ರೋಸಸ್' ಚಿತ್ರದ ಮೂಲಕ ನಾಯಕನಾಗಿ ಚಿತ್ರರಂಗಕ್ಕೆ ಪ್ರವೇಶ ಮಾಡ್ತಾ ಇದ್ದಾನೆ. ಹೆಚ್ ಆರ್ ನಟರಾಜ್  ದ್ರೋಣ ಕ್ರಿಯೇಷನ್ಸ್ ಲಾಂಛನದಲ್ಲಿ ಈ ಚಿತ್ರವನ್ನ ನಿರ್ಮಿಸಿದ್ದು, ಶ್ರೀನಿವಾಸ್ ಕುಮಾರ್ ಗನ್ಸ್ ಅಂಡ್ ರೋಸಸ್ ಚಿತ್ರಕ್ಕೆ ಆಕ್ಷನ್ ಕಟ್ ಹೇಳಿದ್ದಾರೆ. ಅರ್ಜುನ್ ಗೆ ನಾಯಕಿಯಾಗಿ ಯಶ್ವಿಕ ನಿಷ್ಕಲ ಕಾಣಿಸಿಕೊಂಡಿದ್ದು ಹೊಸ ವರ್ಷದ ಮೊದಲ ಚಿತ್ರವಾಗಿ ಗನ್ಸ್ ಅಂಡ್ ರೋಸಸ್ ತೆರೆಗೆ ಬರಲಿದೆ.

02:59ಜಯಪ್ರಕಾಶ್ ಶೆಟ್ಟಿ ನಟನೆ, ಕನ್ನಡ-ತುಳು ಭಾಷೆಯ 'ಬನ' ರಿಲೀಸ್ ಡೇಟ್ ಅನೌನ್ಸ್!
02:24ನೆಪೋಟಿಸಂ ಬಗ್ಗೆ ಪ್ರಿಯಾಂಕಾ ಉಪೇಂದ್ರ ಹೇಳಿದ್ದೇನು..?!
04:57ಅಪ್ಪನ ಆಸೆ.. ಮಗಳ ಕನಸು.. ಅಪ್ಪ ಇಟ್ಟ ಹೆಸರಲ್ಲೇ ಬಿಜಿನೆಸ್​ಶುರು ಮಾಡಿದ ಅಪ್ಪು ಪುತ್ರಿ ವಂದಿತಾ..!
02:36Yash: ನಟ ಯಶ್​ ಹೃದಯವಂತ, ಜೊತೆ ಕೆಲಸ ಮಾಡಿದ್ದು ಅದ್ಭುತ ಅನುಭವ: ತಾರಾ ಸುತಾರಿಯಾ
08:02Toxic Movie: ಲಸ್ಟ್ ಸ್ಟೋರೀಸ್, ಕಬೀರ್ ಸಿಂಗ್ ಆಯ್ತು; ಮದುವೆಯಾಗಿ ಮಗು ಆದ್ರೂ ಕಮ್ಮಿಯಾಗಿಲ್ಲ Kiara Advani ಬ್ಯೂಟಿ
09:56Yash Toxic Movie Tabaahi Song: ಯಶ್‌, ಕಿಯಾರಾ ಅಡ್ವಾಣಿ ಕೆಮಿಸ್ಟ್ರಿಗೆ ದಂಗಾದ ಇಂಟರ್‌ನೆಟ್‌ ಜಗತ್ತು!
04:04ಶಿವಣ್ಣ-ಧನಂಜಯ್ ಮತ್ತೊಮ್ಮೆ ಜೊತೆಯಾಟ.. ಹೇಮಂತ್ ರಾವ್ ನಿರ್ದೇಶನದಲ್ಲಿ '...ಡ್ರೀಮ್ ಥಿಯೇಟರ್..!
09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
05:49Toxic: Ladies & Ladies Teaser: 3 ಟೀಸರ್.. 100 ಮ್ಯಾಟರ್: ಇದ್ರಲ್ಲಿ ಲೇಡೀಸ್ ಗ್ಯಾಂಗ್ ಆರ್ಭಟ!
07:55Toxic: ಟಾಕ್ಸಿಕ್ ಸೌಂದರ್ಯ & ಸಮರ; ಲೇಡೀಸ್ ಸ್ಪೆಷಲ್ ಟೀಸರ್ ಸೆನ್ಸೇಷನ್‌ ಏನ್ ಹೇಳ್ತಿದೆ?