ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರ ಪುತ್ರ ನಿಖಿಲ್ ಹಾಗೂ ವಿಜಯನಗರ ಮಾಜಿ ಶಾಸಕ ಕೃಷ್ಣಪ್ಪ ಅವರ ಮೊಮ್ಮಗಳು ರೇವತಿ ಅವರ ನಿಶ್ಚಿತಾರ್ಥ ಬೆಂಗಳೂರಿನ ತಾಜ್ ವೆಸ್ಟೆಂಡ್‌ನಲ್ಲಿ ಅದ್ದೂರಿಯಾಗಿ ನೆರವೇರಿದೆ.
ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರ ಪುತ್ರ ನಿಖಿಲ್ ಹಾಗೂ ವಿಜಯನಗರ ಮಾಜಿ ಶಾಸಕ ಕೃಷ್ಣಪ್ಪ ಅವರ ಮೊಮ್ಮಗಳು ರೇವತಿ ಅವರ ನಿಶ್ಚಿತಾರ್ಥ ಬೆಂಗಳೂರಿನ ತಾಜ್ ವೆಸ್ಟೆಂಡ್‌ನಲ್ಲಿ ಅದ್ದೂರಿಯಾಗಿ ನೆರವೇರಿದೆ.
ಕುಮಾರಸ್ವಾಮಿ ಹಾಗೂ ನಿಖಿಲ್ ರಾಜ್ಯದ ಚಿತ್ರರಂಗದ ಗಣ್ಯರು ಹಾಗೂ ರಾಜಕಾರಣಿಗಳಿಗೆ ಖುದ್ದಾಗಿ ಆಹ್ವಾನಿಸಿದ್ದು, ಅನೇಕರು ಕುಟುಂಬ ಸಮೇತರಾಗಿ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು. ರಾಮನಗರದಲ್ಲಿ ಪುತ್ರನ ಮದುವೆ ಆಗಬೇಕೆಂಬುವುದು ಕುಮಾರಸ್ವಾಮಿ ಅವರ ಆಸೆ. ಏಪ್ರಿಲ್ 17ರಂದು ನಿಖಿಲ್ ದಾಂಪತ್ಯ ಜೀವನಕ್ಕೆ ಕಾಲಿಡಲಿದ್ದಾರೆ. ಅಂದು ದೇಶದೆಲ್ಲೆಡೆಯ ಸ್ನೇಹಿತರನ್ನು ಆಹ್ವಾನಿಸುವುದಾಗಿ ಮಾಜಿ ಸಿಎಂ ಹೇಳಿದ್ದಾರೆ. ಮತ್ತೆ ಮಗನ ಮದುವೆ ಹಾಗೂ ಭಾವಿ ಸೊಸೆ ಬಗ್ಗೆ ಕುಮಾರಸ್ವಾಮಿ ಹೇಳಿದ್ದೇನು?