Puneeth Rajkumar: ಪವರ್ ಸ್ಟಾರ್ ಅಪ್ಪು ಸಮಾಧಿಗೆ ಹರಿದುಬರ್ತಿದೆ ಜನಸಾಗರ

Puneeth Rajkumar: ಪವರ್ ಸ್ಟಾರ್ ಅಪ್ಪು ಸಮಾಧಿಗೆ ಹರಿದುಬರ್ತಿದೆ ಜನಸಾಗರ

Published : Mar 18, 2022, 01:48 PM IST

ಪುನೀತ್ ರಾಜ್‍ಕುಮಾರ್ ಸಮಾಧಿಗೆ ಅಭಿಮಾನಿಗಳ ಜನಸಾಗರವೇ ಭೇಟಿ ನೀಡುತ್ತಿದೆ. ಗುರುವಾರ ಒಂದೇ ದಿನ 45 ಸಾವಿರ ಜನರು ನಗರದ ಕಂಠೀರವ ಸ್ಟುಡಿಯೋ ಬಳಿ ಇರುವ ಅಪ್ಪು ಸಮಾಧಿಯ ದರ್ಶನ ಪಡೆದಿದ್ದಾರೆ.

ಸ್ಯಾಂಡಲ್‌ವುಡ್‌ನ ಪವರ್ ಸ್ಟಾರ್ ಡಾ. ಪುನೀತ್ ರಾಜ್‍ಕುಮಾರ್ (Puneeth Rajkumar) ಸಮಾಧಿಗೆ ಅಭಿಮಾನಿಗಳ (Fans) ಜನಸಾಗರವೇ ಭೇಟಿ ನೀಡುತ್ತಿದೆ. ಗುರುವಾರ ಒಂದೇ ದಿನ 45 ಸಾವಿರ ಜನರು ನಗರದ ಕಂಠೀರವ ಸ್ಟುಡಿಯೋ ಬಳಿ ಇರುವ ಅಪ್ಪು ಸಮಾಧಿಯ ದರ್ಶನ ಪಡೆದಿದ್ದಾರೆ. ಗುರುವಾರ ಅಪ್ಪು ಹುಟ್ಟುಹಬ್ಬವಾದ್ದರಿಂದ (Birthday) ಸಾಕಷ್ಟು ಅಭಿಮಾನಿಗಳು ಅಪ್ಪು ಸಮಾಧಿಗೆ ಧಾವಿಸಿ ಸಮಾಧಿ ದರ್ಶನ ಪಡೆದಿದ್ದಾರೆ. ಸರತಿ ಸಾಲಿನಲ್ಲಿ ಒಂದು ಕೂಡಾ ಅಭಿಮಾನಿಗಳು ಸಮಾಧಿಯ ದರ್ಶನವನ್ನು ಪಡೆಯುತ್ತಿದ್ದಾರೆ. ಈ ವೇಳೆ ಅಪ್ಪು ನೆನೆದು ಅಭಿಮಾನಿಗಳು ಭಾವುಕರಾಗಿದ್ದಾರೆ. ಜೊತೆಗೆ ಪುನೀತ್ ಫೋಟೋ ಹಿಡಿದು ಜೈಕಾರ ಘೋಷಣೆ ಕೂಗಿ ಮಿಸ್ ಯೂ ಅಪ್ಪು ಎಂದು ಹೇಳುತ್ತಿದ್ದಾರೆ. 

James 2022: ಅಪ್ಪು ಕೊನೆ ಚಿತ್ರವನ್ನು ನೋಡಿ ಪುನೀತರಾದ ಅಭಿಮಾನಿಗಳು

ಇನ್ನು ಪುನೀತ್ ಅಗಲಿದ ದಿನದಿಂದಲೂ ಪುನೀತ್ ಸಮಾಧಿಗೆ ಅಭಿಮಾನಿಗಳು ಧಾವಿಸುತ್ತಲೇ ಇದ್ದಾರೆ. ಸದ್ಯ ಪುನೀತ್ ಅಭಿನಯದ 'ಜೇಮ್ಸ್‌' (James) ಸಿನಿಮಾ ರಾಜ್ಯಾದ್ಯಂತ ಎಲ್ಲ ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಿದ್ದು, ಸುಮಾರು 400ಕ್ಕೂ ಹೆಚ್ಚು ಥಿಯೇಟರ್‌ಗಳಲ್ಲಿ 'ಜೇಮ್ಸ್‌' ದರ್ಶನವಾಗಿತ್ತು. 150ಕ್ಕೂ ಹೆಚ್ಚು ಮಲ್ಟಿಪ್ಲೆಕ್ಸ್‌ ಸ್ಕ್ರೀನ್‌ಗಳಲ್ಲಿ 'ಜೇಮ್ಸ್' ಶೋ ಪ್ರದರ್ಶನ ಕಂಡಿತ್ತು. ಬೆಳಗ್ಗೆ 6 ಗಂಟೆಯಿಂದಲೇ ಚಿತ್ರದ ಶೋ ಆರಂಭವಾಗಿದ್ದು, ಚಿತ್ರವನ್ನು ವೀಕ್ಷಿಸಿ ಬಂದ ಅಭಿಮಾನಿಗಳು, ಅಪ್ಪು ಫೈಟಿಂಗ್, ಡ್ಯಾನ್ಸು, ಡೈಲಾಗ್ ಎಲ್ಲವೂ ಸೂಪರ್ ಎಂದು ಚಿತ್ರದ ಬಗ್ಗೆ ಹೊಗಳಿದ್ದಾರೆ. ಹೆಚ್ಚಿನ ಮಾಹಿತಿಗೆ ಈ ವಿಡಿಯೋವನ್ನು ವೀಕ್ಷಿಸಿ.

ಸಿನಿಮಾ ಹಂಗಾಮಾ ವೀಡಿಯೋಗಳನ್ನು ವೀಕ್ಷಿಸಲು ಇಲ್ಲಿ ಕ್ಲಿಕ್ಕಿಸಿ: https://kannada.asianetnews.com/movies

02:59ಜಯಪ್ರಕಾಶ್ ಶೆಟ್ಟಿ ನಟನೆ, ಕನ್ನಡ-ತುಳು ಭಾಷೆಯ 'ಬನ' ರಿಲೀಸ್ ಡೇಟ್ ಅನೌನ್ಸ್!
02:24ನೆಪೋಟಿಸಂ ಬಗ್ಗೆ ಪ್ರಿಯಾಂಕಾ ಉಪೇಂದ್ರ ಹೇಳಿದ್ದೇನು..?!
04:57ಅಪ್ಪನ ಆಸೆ.. ಮಗಳ ಕನಸು.. ಅಪ್ಪ ಇಟ್ಟ ಹೆಸರಲ್ಲೇ ಬಿಜಿನೆಸ್​ಶುರು ಮಾಡಿದ ಅಪ್ಪು ಪುತ್ರಿ ವಂದಿತಾ..!
02:36Yash: ನಟ ಯಶ್​ ಹೃದಯವಂತ, ಜೊತೆ ಕೆಲಸ ಮಾಡಿದ್ದು ಅದ್ಭುತ ಅನುಭವ: ತಾರಾ ಸುತಾರಿಯಾ
08:02Toxic Movie: ಲಸ್ಟ್ ಸ್ಟೋರೀಸ್, ಕಬೀರ್ ಸಿಂಗ್ ಆಯ್ತು; ಮದುವೆಯಾಗಿ ಮಗು ಆದ್ರೂ ಕಮ್ಮಿಯಾಗಿಲ್ಲ Kiara Advani ಬ್ಯೂಟಿ
09:56Yash Toxic Movie Tabaahi Song: ಯಶ್‌, ಕಿಯಾರಾ ಅಡ್ವಾಣಿ ಕೆಮಿಸ್ಟ್ರಿಗೆ ದಂಗಾದ ಇಂಟರ್‌ನೆಟ್‌ ಜಗತ್ತು!
04:04ಶಿವಣ್ಣ-ಧನಂಜಯ್ ಮತ್ತೊಮ್ಮೆ ಜೊತೆಯಾಟ.. ಹೇಮಂತ್ ರಾವ್ ನಿರ್ದೇಶನದಲ್ಲಿ '...ಡ್ರೀಮ್ ಥಿಯೇಟರ್..!
09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
05:49Toxic: Ladies & Ladies Teaser: 3 ಟೀಸರ್.. 100 ಮ್ಯಾಟರ್: ಇದ್ರಲ್ಲಿ ಲೇಡೀಸ್ ಗ್ಯಾಂಗ್ ಆರ್ಭಟ!
07:55Toxic: ಟಾಕ್ಸಿಕ್ ಸೌಂದರ್ಯ & ಸಮರ; ಲೇಡೀಸ್ ಸ್ಪೆಷಲ್ ಟೀಸರ್ ಸೆನ್ಸೇಷನ್‌ ಏನ್ ಹೇಳ್ತಿದೆ?
Read more