Jan 18, 2020, 1:57 PM IST
ಸ್ಯಾಂಡಲ್‌ವುಡ್ ಸೂಪರ್ ಸ್ಟಾರ್ ಪುನೀತ್ ರಾಜ್‌ಕುಮಾರ್ ನಿರ್ಮಾಣದಲ್ಲಿ 'ಮಾಯಾಬಜಾರ್' ಚಿತ್ರ ಸದ್ಯದಲ್ಲೇ ತೆರೆಕಾಣಲು ಸಜ್ಜಾಗುತ್ತಿದೆ. ನಿರ್ದೇಶಕ ರಾಧಾಕೃಷ್ಣ ರೆಡ್ಡಿ ಅವರ ಕೈ ಚಳಕದಲ್ಲಿ ಮೂಡಿ ಬರುತ್ತಿರುವ ಈ ಚಿತ್ರಕ್ಕೆ ನಾಯಕಿಯಾಗಿ ಕಿರುತೆರೆ ನಟಿ ಚೈತ್ರಾ ಹಾಗೂ ನಟನಾಗಿ ವಸಿಷ್ಠ ಸಿಂಹ ಮತ್ತು ರಾಜೇಶ್ ಬಿ ಶೆಟ್ಟಿ ಕಾಣಿಸಿಕೊಳ್ಳಲಿದ್ದಾರೆ.
ಬೆಂಗಳೂರಿನ ಖಾಸಗಿ ಹೊಲೇಟ್‌ನಲ್ಲಿ ನಡೆದ ಪ್ರೆಸ್‌ಮೀಟ್‌ನಲ್ಲಿ ಪುನೀತ್ 'ಲೋಕ ಮಾಯಾಬಜಾರ್' ಹಾಡನ್ನು ರಿಲೀಸ್ ಮಾಡಿ, ಚಿತ್ರದ ಬಗ್ಗೆ ತಮ್ಮ ಅಭಿಪ್ರಾಯ ಹಂಚಿಕೊಂಡಿದ್ದಾರೆ.