Jan 4, 2023, 12:47 PM IST
80, 90 ದಶಕದವರಿಗೆ ದೂರದರ್ಶನ ಅಂದ್ರೆ ಒಂದು ರೋಮಾಂಚನಕಾರಿ ಅನುಭವ. ಅದರೊಂದಿಗೆ ಒಂದು ಅವಿನಾಭಾವ ನಂಟು ಬೆಳೆದಿರುತ್ತೆ. ಅದ್ರಲ್ಲೂ ಹಳ್ಳಿಯವರಾದರೆ ಆ ನಂಟಿನ ಸೊಗಸೇ ಅದ್ಭುತ. ಈಗಲೂ ಆ ದಿನಗಳನ್ನು ನೆನಪಿಸಿಕೊಳ್ಳಲು ಸಿನಿಮಾ ಒಂದು ಸಿದ್ಧವಾಗಿದೆ. ಆ ಚಿತ್ರವೇ ದೂರದರ್ಶನ. ಟೈಟಲ್ ಕೇಳಿದಾಕ್ಷಣ ಬಹಳ ಬೇಗ ಕನೆಕ್ಟ್ ಆಗೋ ಈ ಸಿನಿಮಾ ಹಳ್ಳಿ ಸೊಗಡಲ್ಲೇ ಮೋಡಿ ಮಾಡೋಕೆ ಸಿದ್ದವಾಗಿದೆ. ಹಾಡುಗಳ ಮೂಲಕ ಮೋಡಿ ಮಾಡಿರೋ ‘ದೂರದರ್ಶನ’ ಚಿತ್ರತಂಡ ಇದೀಗ ಪ್ರಾಮಿಸಿಂಗ್ ಆಗಿರೋ ಟೀಸರ್ ಬಿಡುಗಡೆ ಮಾಡಿದೆ. 80, 90 ದಶಕದ ಚಿತ್ರಣವನ್ನೊಳಗೊಂಡ ಸಿನಿಮಾ ಆಗಿದ್ದು, ಸುಕೇಶ್ ಶೆಟ್ಟಿ ನಿರ್ದೇಶನ ಮಾಡಿದ್ದಾರೆ. ದಿಯಾ ಸಿನಿಮಾ ಖ್ಯಾತಿಯ ಪೃಥ್ವಿ ಅಂಬರ್ ನಾಯಕ ನಟನಾಗಿ ನಟಿಸಿದ್ದು, ಅಯಾನ ನಾಯಕಿಯಾಗಿ ಬಣ್ಣ ಹಚ್ಚಿದ್ದಾರೆ. ಇನ್ನುಳಿದಂತೆ ಉಗ್ರಂ ಮಂಜು, ಸುಂದರ್ ವೀಣಾ, ಹರಿಣಿ, ದೀಪಕ್ ರೈ ಪಾಣಾಜೆ, ರಘು ರಮಣಕೊಪ್ಪ, ಹುಲಿ ಕಾರ್ತಿಕ್, ಸೂರಜ್ ಮಂಗಳೂರು, ಸೂರ್ಯ ಕುಂದಾಪುರ ಒಳಗೊಂಡ ತಾರಾಗಣ ಸಿನಿಮಾದಲ್ಲಿದೆ. ರಾಜೇಶ್ ಭಟ್ ದೂರದರ್ಶನ ಸಿನಿಮಾ ನಿರ್ಮಾಣ ಮಾಡಿದ್ದಾರೆ.
ಅನಿಮಲ್ ಜೊತೆ ರಣಬೀರ್: ಸೌತ್ ಸಿನಿ ದುನಿಯಾದಲ್ಲಿ ‘ಅರ್ಜುನ್ ರೆಡ್ಡಿ’ ಚಿತ್ರದ ಮೂಲಕ ಸೆನ್ಸೇಷನ್ ಕ್ರಿಯೇಟ್ ಮಾಡಿರೋ ನಿರ್ದೇಶಕ ಸಂದೀಪ್ ರೆಡ್ಡಿ ವಂಗಾ ಇದೀಗ ಬಿಟೌನ್ ಸ್ಟಾರ್ ರಣಬೀರ್ ಕಪೂರ್ ಜೊತೆಗೂಡಿ ಪ್ಯಾನ್ ಇಂಡಿಯಾ ಸಿನಿಮಾಗೆ ಆಕ್ಷನ್ ಕಟ್ ಹೇಳಲು ಸಜ್ಜಾಗಿದ್ದಾರೆ. ಚಿತ್ರಕ್ಕೆ ‘ಅನಿಮಲ್’ ಎಂದು ಟೈಟಲ್ ಇಡಲಾಗಿದ್ದು, ಈ ಚಿತ್ರದ ಮೂಲಕ ರಣಬೀರ್ ಕಪೂರ್ ಆಕ್ಷನ್ ಹೀರೋ ಆಗಿ ತೆರೆ ಮೇಲೆ ಮಿಂಚಲು ರೆಡಿಯಾಗಿದ್ದಾರೆ. ‘ಅನಿಮಲ್’ ಚಿತ್ರದ ಫಸ್ಟ್ ಲುಕ್ ಅನ್ನ ಚಿತ್ರತಂಡ ರಿಲೀಸ್ ಮಾಡಿದ್ದು, ರಣಬೀರ್ ನಯಾ ಅವತಾರ ಕಂಡು ಬಿಟೌನ್ ಮಂದಿ ಥ್ರಿಲ್ ಆಗಿದ್ದಾರೆ. ರಕ್ತಸಿಕ್ತವಾಗಿರೋ ದೇಹ, ಉದ್ದವಾದ ಕೂದಲು, ಕೈಯಲ್ಲಿ ಕೊಡಲಿ ಹಿಡಿದು ಸಿಗರೇಟ್ ಸೇದುತ್ತಿರುವ ರಣಬೀರ್ ರಗಡ್ ಲುಕ್ ‘ಅನಿಮಲ್’ ಸಿನಿಮಾ ಆಕ್ಷನ್ ಥ್ರಿಲ್ಲರ್ ಸಬ್ಜೆಕ್ಟ್ ಚಿತ್ರ ಎನ್ನೋದನ್ನು ಖಾತ್ರಿ ಪಡಿಸಿದೆ. ‘ಅನಿಮಲ್’ ಚಿತ್ರದಲ್ಲಿ ನ್ಯಾಶನಲ್ ಕ್ರಶ್ ರಶ್ಮಿಕಾ ಮಂದಣ್ಣ ನಾಯಕಿಯಾಗಿ ನಟಿಸುತ್ತಿದ್ದಾರೆ. ಈ ಚಿತ್ರವನ್ನು ಭೂಷಣ್ ಕುಮಾರ್, ಪ್ರನಯ್ ರೆಡ್ಡಿ ವಾಂಗ ನಿರ್ಮಾಣ ಮಾಡುತ್ತಿದ್ದಾರೆ.
ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಕ್ಲಿಕ್ಕಿಸಿ: Asianet Suvarna Entertainment