Karnataka Ratna Puneeth Rajkumar: ನಟ ದಿ.ಪುನೀತ್ ರಾಜ್‌ಕುಮಾರ್ ಅವರಿಗೆಕರ್ನಾಟಕ ರತ್ನ ಪ್ರಶಸ್ತಿಯನ್ನು ಸಿಎಂ ಬೊಮ್ಮಾಯಿ ಪ್ರದಾನ ಮಾಡಿದ್ದಾರೆ.
ಬೆಂಗಳೂರು (ನ. 01): ನಟ ದಿ.ಪುನೀತ್ ರಾಜ್‌ಕುಮಾರ್ (Puneeth Rajkumar) ಅವರಿಗೆ ಮರಣೋತ್ತರವಾಗಿ ರಾಜ್ಯ ಸರ್ಕಾರ ನೀಡುವ ರಾಜ್ಯದ ಅತ್ಯುನ್ನತ ನಾಗರಿಕ ಪ್ರಶಸ್ತಿಯಾದ ಕರ್ನಾಟಕ ರತ್ನ (Karnataka Ratna) ಪ್ರಶಸ್ತಿಯನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai) ಪ್ರದಾನ ಮಾಡಿದ್ದಾರೆ. ವಿಧಾನಸೌಧದ ಮೆಟ್ಟಿಲುಗಳ ಮೇಲೆ ನಡೆಯುವ ಅದ್ದೂರಿ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಪುನೀತ್ ರಾಜ್‌ಕುಮಾರ್ ಪತ್ನಿ ಅಶ್ವಿನಿ ಪುನೀತ್ ರಾಜ್‌ಕುಮಾರ್ ಅವರಿಗೆ ಪ್ರಶಸ್ತಿ ಪ್ರದಾನ ಮಾಡಿದ್ದಾರೆ. ಕರ್ನಾಟಕ ರತ್ನ ಪ್ರಶಸ್ತಿಯು ಪೂರ್ಣ ಬೆಳ್ಳಿಯಲ್ಲಿರಲಿದ್ದು, 50 ಗ್ರಾಂ ಚಿನ್ನದ ಪದಕ ಸಹ ಇರಲಿದೆ. ಸನ್ಮಾನ ಪತ್ರ, ನೆನಪಿನ ಕಾಣಿಕೆ ಮತ್ತು ಒಂದು ಶಾಲು ಇರಲಿದೆ.