Oct 30, 2022, 4:00 PM IST
ಪುನೀತ್ ರಾಜ್ ಕುಮಾರ್ ಸಮಾಧಿಗೆ ದೊಡ್ಮನೆ ಕುಟುಂಬ ಬೆಳಗ್ಗೆ 9 ಗಂಟೆಗೆ ಭೇಟಿ ನೀಡಿ, ಪೂಜೆ ಸಲ್ಲಿಸಿದೆ. ಸಮಾಧಿ ಬಳಿ ಅಪ್ಪುಗೆ ಇಷ್ಟವಾದ ತಿನಿಸುಗಳನ್ನು ಇಟ್ಟು ಪೂಜೆ ನೆರವೇರಿಸಲಾಗಿದೆ. ಹಾಗೂ ಅಭಿಮಾನಿಗಳಿಗೆ ಅನ್ನದಾನ ಮಾಡಲಾಗಿದೆ. ರಕ್ತದಾನ ಕೂಡ ನಡೆದಿದೆ. ನಿನ್ನೆಯಿಂದ ಲಕ್ಷಾಂತರ ಅಭಿಮಾನಿಗಳು ಭೇಟಿ ನೀಡಿ, ನೆಚ್ಚಿನ ನಟನಿಗೆ ನಮನ ಸಲ್ಲಿಸುತ್ತಿದ್ದಾರೆ.