ಪುನೀತ್ ರಾಜ್‍ಕುಮಾರ್ ಅಭಿನಯದ ಕೊನೆಯ ಚಿತ್ರ 'ಜೇಮ್ಸ್' ರಾಜ್ಯಾದ್ಯಂತ ಯಶಸ್ವಿ ಪ್ರದರ್ಶನ ಕಾಣುತ್ತಿದೆ. ಈ ಸಿನಿಮಾವನ್ನು ನಾನು ನೋಡೋಕೆ ಆಗಲ್ಲ ಎಂದು ಅಪ್ಪು ಪತ್ನಿ ಅಶ್ವಿನಿ ಪುನೀತ್ ರಾಜ್‌ಕುಮಾರ್ ಹೇಳಿದ್ದಾರೆ.
ಸ್ಯಾಂಡಲ್‌ವುಡ್‌ನ ಪವರ್ ಸ್ಟಾರ್ ಡಾ. ಪುನೀತ್ ರಾಜ್‍ಕುಮಾರ್ (Puneeth Rajkumar) ಅಭಿನಯದ ಕೊನೆಯ ಚಿತ್ರ 'ಜೇಮ್ಸ್' (James) ರಾಜ್ಯಾದ್ಯಂತ ಯಶಸ್ವಿ ಪ್ರದರ್ಶನ ಕಾಣುತ್ತಿದೆ. ಈ ಸಿನಿಮಾವನ್ನು ನಾನು ನೋಡೋಕೆ ಆಗಲ್ಲ ಎಂದು ಅಪ್ಪು ಪತ್ನಿ ಅಶ್ವಿನಿ ಪುನೀತ್ ರಾಜ್‌ಕುಮಾರ್ (Ashwini Puneeth Rajkumar) ಹೇಳಿದ್ದಾರೆ. ಹಾಗೆಯೇ 'ಜೇಮ್ಸ್' ಒಂದು ಸಿನಿಮಾ ಅಲ್ಲ. ಇದೊಂದು ಎಮೋಷನ್ ಎಂದು ರಾಘವೇಂದ್ರ ರಾಜ್‌ಕುಮಾರ್ (Raghavendra Rajkumar) ಹೇಳಿದರೆ, ಶಿವರಾಜ್‌ಕುಮಾರ್ (Shivarajkumar) ಈ ಚಿತ್ರವು ಅಪ್ಪು ಕೊನೇ ಸಿನಿಮಾ ಅನ್ನೋಕೆ ತುಂಬಾ ನೋವಾಗುತ್ತೆ ಎಂದು ಭಾವುಕರಾಗಿ ತಿಳಿಸಿದ್ದಾರೆ. ಅಪ್ಪು ಅನುಪಸ್ಥಿತಿಯಲ್ಲಿ 'ಜೇಮ್ಸ್' ಚಿತ್ರವನ್ನು ನೋಡಲು ಆಗಲ್ಲ ಎಂದು ಅವರ ಕುಟುಂಬಸ್ಥರು, ಅಭಿಮಾನಿಗಳು (Fans) ಹಾಗೂ ಚಿತ್ರರಂಗದ ತಾರೆಯರೂ ಹೇಳಿದ್ದಾರೆ.
James 2022: ರೆಕಾರ್ಡ್ ಬ್ರೇಕ್ ಮಾಡಿದ ಪವರ್ ಪ್ಯಾಕ್ಡ್ 'ಜೇಮ್ಸ್'
ಮಾತ್ರವಲ್ಲದೇ ಅಪ್ಪು ಇನ್ನಿಲ್ಲದಿದ್ದರೂ ಅವರ ಹುಟ್ಟುಹಬ್ಬವನ್ನು ಅಭಿಮಾನಿಗಳು ಸಡಗರ ಸಂಭ್ರಮದಿಂದ ಆಚರಿಸಿದ್ದಾರೆ. ಲಕ್ಷಾಂತರ ಅಭಿಮಾನಿಗಳು 'ಜೇಮ್ಸ್' ಚಿತ್ರವನ್ನು ವೀಕ್ಷಿಸಲು ಧಾವಿಸಿ ಬರುತ್ತಿದ್ದಾರೆ. ಇನ್ನು ಕಂಠೀರವ ಸ್ಟುಡಿಯೋದಲ್ಲಿರುವ ಪುನೀತ್ ರಾಜ್‌ಕುಮಾರ್ ಸಮಾಧಿಗೆ ಗುರುವಾರ ಮಧ್ಯರಾತ್ರಿ 12ಕ್ಕೆ ಕುಟುಂಬ ಸಮೇತರಾಗಿ ಆಗಮಿಸಿದ ರಾಘವೇಂದ್ರ ರಾಜ್‌ಕುಮಾರ್ ಬೃಹತ್ ಕೇಕ್ ಕತ್ತರಿಸುವ ಮೂಲಕ ಅಭಿಮಾನಿಗಳ ಜೊತೆ ಪುನೀತ್ ಹುಟ್ಟುಹಬ್ಬವನ್ನು ಆಚರಿಸಿದರು. ಈ ವೇಳೆ ಸಾರ್ವಜನಿಕರು ದೊಡ್ಡ ಸಂಖ್ಯೆಯಲ್ಲಿ ಆಗಮಿಸಿದ್ದರು. ಇಡೀ ದಿನ ಕಂಠೀರವ ಸ್ಟುಡಿಯೋದಲ್ಲಿ ಉತ್ಸವದ ವಾತಾವರಣ ಉಂಟಾಗಿತ್ತು. ಹೆಚ್ಚಿನ ಮಾಹಿತಿಗೆ ಈ ವಿಡಿಯೋವನ್ನು ವೀಕ್ಷಿಸಿ.
ಸಿನಿಮಾ ಹಂಗಾಮಾ ವೀಡಿಯೋಗಳನ್ನು ವೀಕ್ಷಿಸಲು ಇಲ್ಲಿ ಕ್ಲಿಕ್ಕಿಸಿ: https://kannada.asianetnews.com/movies