James 2022: ಪುನೀತ್ ರಾಜ್‍ಕುಮಾರ್ ಕೊನೆ ಚಿತ್ರಕ್ಕೆ ಸಿಕ್ತು ಯು/ಎ ಸರ್ಟಿಫಿಕೇಟ್!

James 2022: ಪುನೀತ್ ರಾಜ್‍ಕುಮಾರ್ ಕೊನೆ ಚಿತ್ರಕ್ಕೆ ಸಿಕ್ತು ಯು/ಎ ಸರ್ಟಿಫಿಕೇಟ್!

Suvarna News   | Asianet News
Published : Mar 07, 2022, 12:11 PM IST

ಪವರ್ ಸ್ಟಾರ್ ಪುನೀತ್ ರಾಜ್‌ಕುಮಾರ್ ಕೊನೆಯ ಸಿನಿಮಾ 'ಜೇಮ್ಸ್' ಬೆಳ್ಳಿತೆರೆ ಮೇಲೆ ಬರಲು ರೆಡಿಯಾಗಿದೆ. ಅಪ್ಪು ಇಲ್ಲ ಅಂತ ನೊಂದು ಬೆಂದ ಮನಸ್ಸುಗಳೆಲ್ಲಾ ಈಗ 'ಜೇಮ್ಸ್' ಸಿನಿಮಾನ ನೋಡಿ ಒಂದಷ್ಟು ಸಮಾಧಾನ ಪಡೋ ಸಮಯ ಬಂದಿದೆ. 

ಪವರ್ ಸ್ಟಾರ್ ಪುನೀತ್ ರಾಜ್‌ಕುಮಾರ್ (Puneeth Rajkumar) ಕೊನೆಯ ಸಿನಿಮಾ 'ಜೇಮ್ಸ್' (James) ಬೆಳ್ಳಿತೆರೆ ಮೇಲೆ ಬರಲು ರೆಡಿಯಾಗಿದೆ. ಅಪ್ಪು ಇಲ್ಲ ಅಂತ ನೊಂದು ಬೆಂದ ಮನಸ್ಸುಗಳೆಲ್ಲಾ ಈಗ 'ಜೇಮ್ಸ್' ಸಿನಿಮಾನ ನೋಡಿ ಒಂದಷ್ಟು ಸಮಾಧಾನ ಪಡೋ ಸಮಯ ಬಂದಿದೆ. 'ಜೇಮ್ಸ್' ಸಿನಿಮಾ ಮಾರ್ಚ್ 17ಕ್ಕೆ ವಿಶ್ವದಾದ್ಯಂತ ರಿಲೀಸ್ ಆಗುತ್ತಿದೆ. 'ಜೇಮ್ಸ್' ಸಿನಿಮಾವನ್ನ ಕುಟುಂಬ ಸಮೇತರಾಗಿ ನೋಡಬಹುದು ಅಂತ ಸೆನ್ಸಾರ್ ಬೋರ್ಡ್ ಯು/ಎ ಪ್ರಮಾಣ ಪತ್ರ (UA Censor Certificate) ಕೊಟ್ಟಿದೆ. ಹೀಗಾಗಿ 'ಜೇಮ್ಸ್' ಸಿನಿಮಾ ಬಿಡುಗಡೆ ಆಗೋ ಚಿತ್ರಮಂದಿರಗಳ ಲೀಸ್ಟ್ ಕೂಡ ಅನೌನ್ಸ್ ಆಗಿದೆ. 

James 2022: ಪುನೀತ್ 'ಟ್ರೇಡ್‌ಮಾರ್ಕ್' ಹಾಡು ನೋಡಿ ಥ್ರಿಲ್ ಆದ ಅಭಿಮಾನಿಗಳು!

ರಾಜ್ಯದ 450ಕ್ಕೂ ಹೆಚ್ಚಿನ ಥಿಯೇಟರ್ಗಳು ಹಾಗು ವಿದೇಶದ 100ಕ್ಕು ಹೆಚ್ಚಿನ ಸಿನಿಮಾ ಮಂದಿರಗಳಲ್ಲಿ ಜೇಮ್ಸ್ ಪ್ರದರ್ಶನ ಕಾಣಲಿದೆ. ಯುಎಸ್ಎ, ಕೆನಡಾ,  ಯುಕೆ ಆಸ್ಟ್ರೇಲೊಯಾ, ನ್ಯೂಜಿಲ್ಯಾಂಡ್, ಸಿಂಗಾಪುರ್, ದುಬೈ, ಜಪಾನ್, ಮಲೇಶಿಯಾ, ಮತ್ತು ಕೀನ್ಯಾದಲ್ಲಿ 'ಜೇಮ್ಸ್' ಪ್ರದರ್ಶನಗೊಳ್ಳುತ್ತಿದೆ. ಚಿತ್ರದಲ್ಲಿ ಪುನೀತ್ ರಾಜ್‌ಕುಮಾರ್ ಡಬಲ್‌ ಶೇಡ್‌ನಲ್ಲಿ ಕಾಣಿಸಿಕೊಂಡಿದ್ದು, ಈಗಾಗಲೇ ಪವರ್ ಆರ್ಮಿ ಆಫೀಸರ್ ಆಗಿ ಸಿನಿರಸಿಕರಿಗೆ ಕಿಕ್ ಕೊಟ್ಟಿದ್ದಾರೆ. ಪುನೀತ್‌ಗೆ ನಾಯಕಿಯಾಗಿ ಪ್ರಿಯಾ ಆನಂದ್ ಜೋಡಿಯಾಗಿದ್ದಾರೆ. ಚೇತನ್ ಕುಮಾರ್ (Chetan Kumar) ನಿರ್ದೇಶನದ ಈ ಚಿತ್ರಕ್ಕೆ ಕಿಶೋರ್ ಪತ್ತಿಕೊಂಡ (Kishore Pathikonda) ಬಂಡವಾಳ ಹೂಡಿದ್ದಾರೆ.

ಸಿನಿಮಾ ಹಂಗಾಮಾ ವೀಡಿಯೋಗಳನ್ನು ವೀಕ್ಷಿಸಲು ಇಲ್ಲಿ ಕ್ಲಿಕ್ಕಿಸಿ: https://kannada.asianetnews.com/movies

03:42ಜೀ ಕನ್ನಡದಲ್ಲಿ ಆದಿ ಲಕ್ಷ್ಮೀ ಪುರಾಣ ಆರಂಭ.. ಡೆವಿಲ್​ ಜೊತೆ ಪಿವೋಟ್ ಚಿತ್ರ ರಿಲೀಸ್!
04:13ಡೆವಿಲ್ Vs ಮಾರ್ಕ್.. ಯಾರಿಗೆಷ್ಟು ಮಾರ್ಕ್ಸ್? ಬಾಕ್ಸಾಫೀಸ್​ ಗಳಿಕೆಯಲ್ಲಿ ಯಾರು ಗೆಲ್ತಾರೆ?
02:16ಬೇರೆಯದೇ ಸಂದೇಶ ಕೊಡುತ್ತಿರೋ 'ದಿ ಡೆವಿಲ್’ ಟ್ರೈಲರ್; ದರ್ಶನ್ ಫ್ಯಾನ್ಸ್‌ ಮುಖದಲ್ಲಿ ಮೂಡ್ತಿದೆ ಮಂದಹಾಸ!
05:19ದರ್ಶನ್ ಕಷ್ಟಕ್ಕೆ ಕಾರಣ ಅದೇನಾ..? 'ಡೆವಿಲ್' ನೆಗೆಟಿವ್ ಟೈಟಲ್ ಸುದ್ದಿಗೆ ಬಿಗ್ ಟ್ವಿಸ್ಟ್; ಸೀಕ್ರೆಟ್ ಹೊರಬಂತು!
02:55ನಿಜವಾಗಿಯೂ ಬಿಗ್ ಬಾಸ್ ಒಳಗೆ ಏನ್ ನಡಿತಾ ಇದೆ? ಜಾಹ್ನವಿ ಹೇಳಿದ ದೊಡ್ಮನೆ ಸತ್ಯ ಕಥೆ ನೋಡಿ..!
04:11'ನಾನ್ ಬರ್ತಿದ್ದೀನಿ ಚಿನ್ನಾ'.. ದರ್ಶನ್ ವಾಯ್ಸ್ ಕೇಳಿ ಕುಣಿದು ಕುಪ್ಪಳಿಸುತ್ತಿರೋ ಫ್ಯಾನ್ಸ್; ಏನಾಗ್ತಿದೆ ಈಗ?
02:58ವೈರಲ್ ಆಯ್ತು ಜೂನಿಯರ್ ದರ್ಶನ್ ಡ್ಯಾನ್ಸ್ ಧಮಾಕಾ! ಅಪ್ಪನ ಹಾಡಿಗೆ ನರ್ತಿಸಿದ ವಿನೀಶ್ ದರ್ಶನ್
05:37ಐದೇ ವಾರಕ್ಕೆ ಔಟ್ ಆದ ರಿಷಾ ಗೌಡ; ಬಿಗ್​ಬಾಸ್ ಟ್ರೋಫಿ ಗೊಲ್ಲೋರ ಸೀಕ್ರೆಟ್ ಹೇಳಿದ ನಟಿ!
03:15ಕಾಂತಾರ ನಂತರ ಮತ್ತೆ ತೆರೆ ಮೇಲೆ ಕೊರಗಜ್ಜನ ಖದರ್: ಬಾಲಿವುಡ್ ನಟನ ದೈವ ಸಿನಿಮಾ ಹೇಗಿರುತ್ತೆ?
04:05ಸ್ಯಾಂಡಲ್‌ವುಡ್‌ನಲ್ಲಿ ಹೊಸ ಬಿರುಗಾಳಿ, ಸಿನಿ ಭಕ್ತ ಗಣದ ಮನ ಗೆದ್ದ ಮಾರುತ, ರಾಧೇಯ!
Read more