Ek Love Ya: ಪ್ರೇಮ್ ನಿರ್ದೇಶನದ 'ಏಕ್‌ ಲವ್‌ ಯಾ' ಸಿನಿಮಾ ಫೆ.25ಕ್ಕೆ ರಿಲೀಸ್‌!

Feb 5, 2022, 2:43 PM IST

ಎಲ್ಲವೂ ಅಂದುಕೊಂಡಂತೆ ಆಗಿದ್ದರೆ ಜೋಗಿ (Jogi Prem) ಪ್ರೇಮ್‌ ನಿರ್ದೇಶನದ 'ಏಕ್‌ ಲವ್‌ ಯಾ' (Ek Love Ya) ಚಿತ್ರ ಜನವರಿ 21ಕ್ಕೆ ಬಿಡುಗಡೆಯಾಗಬೇಕಿತ್ತು. ಆದರೆ, ಕೋವಿಡ್‌ (Covid19) ಮೂರನೇ ಅಲೆ ಹಾಗೂ ಚಿತ್ರಮಂದಿರಗಳಲ್ಲಿ ಶೇ 50 ಪ್ರವೇಶಾತಿ ಇದ್ದ ಕಾರಣ ಚಿತ್ರದ ಬಿಡುಗಡೆಯನ್ನು ಚಿತ್ರತಂಡ ಮುಂದಕ್ಕೆ ಹಾಕಿತ್ತು. ಇದೀಗ 'ಏಕ್‌ ಲವ್‌ ಯಾ' ಚಿತ್ರತಂಡ ಅಧಿಕೃತವಾಗಿ ತನ್ನ ಬಿಡುಗಡೆಯನ್ನು ಘೋಷಿಸಿಕೊಂಡಿದೆ.  ಹೌದು! ಚಿತ್ರ ಇದೇ ಫೆ.25ರಂದು ಬಿಡುಗಡೆಯಾಗುತ್ತಿದೆ. 

Ek Love Ya: ಸಿಗರೇಟ್ ಸೀನ್‌ಗೆ ಸಂಬಂಧಪಟ್ಟಂತೆ ನೇರವಾಗಿ ಉತ್ತರಿಸಿದ ರಚಿತಾ ರಾಮ್

ಈ ಮೂಲಕ ಪ್ರೇಮ್‌ ನಿರ್ದೇಶನದ ಸಿನಿಮಾವೊಂದು ದೊಡ್ಡ ಗ್ಯಾಪ್‌ನ ನಂತರ ಬಿಡುಗಡೆಯಾದಂತಾಗುತ್ತದೆ. ಇನ್ನು, ಮೊದಲ ಹಂತವಾಗಿ ಚಿತ್ರದ ಟ್ರೇಲರ್‌ನ್ನು ಫೆ.11ರಂದು ಸಂಜೆ 5 ಗಂಟೆಗೆ ಬಿಡುಗಡೆಯಾಗಲಿದೆ. ಪ್ರೇಮ್‌ ನಿರ್ದೇಶನದ ಈ ಚಿತ್ರದಲ್ಲಿ ರಾಣಾ (Raanna) ನಾಯಕರಾಗಿ ನಟಿಸಿದ್ದಾರೆ. ರಚಿತಾ ರಾಮ್‌ (Rachita Ram), ಗ್ರೀಷ್ಮಾ ನಾಣಯ್ಯ (Grishma Nanayya) ಸೇರಿದಂತೆ ಅನೇಕರು ನಟಿಸಿದ್ದಾರೆ. ರಕ್ಷಿತಾ (Rakshita) ಫಿಲಂ ಫ್ಯಾಕ್ಟರಿಯಡಿ ಈ ಸಿನಿಮಾವನ್ನು ನಿರ್ಮಿಸಲಾಗಿದೆ. ಮ್ಯಾಜಿಕಲ್ ಕಂಪೋಸರ್ ಅರ್ಜುನ್ ಜನ್ಯಾ (Arjun Janya) ಸಂಗೀತ ಸಂಯೋಜನೆ ಈ ಚಿತ್ರಕ್ಕಿದೆ.

ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಕ್ಲಿಕಿಸಿ: Asianet Suvarna Entertainment