'ಅಘೋರಿ'ಯಾಗಿ ಬಂದ ರಾಧಿಕಾ: 'ಭೈರಾದೇವಿ' ಲುಕ್'ಗೆ ಫ್ಯಾನ್ಸ್ ಫಿದಾ

'ಅಘೋರಿ'ಯಾಗಿ ಬಂದ ರಾಧಿಕಾ: 'ಭೈರಾದೇವಿ' ಲುಕ್'ಗೆ ಫ್ಯಾನ್ಸ್ ಫಿದಾ

Published : Feb 23, 2023, 03:39 PM IST

ರಾಧಿಕಾ ಕುಮಾರಸ್ವಾಮಿ ಅಭಿನಯದ 'ಭೈರಾದೇವಿ' ಸಿನಿಮಾ ಪ್ಯಾನ್ ಇಂಡಿಯಾ ಮಟ್ಟದಲ್ಲಿ ಕನ್ನಡ, ತೆಲುಗು ಮತ್ತು ತಮಿಳು ಭಾಷೆಗಳಲ್ಲಿ ನಿರ್ಮಾಣವಾಗುತ್ತಿದೆ.

ಶ್ರೀಜೈ ನಿರ್ದೇಶಿಸುತ್ತಿರುವ ಭೈರಾದೇವಿ ಸಿನಿಮಾವನ್ನು ರಾಧಿಕಾ ಕುಮಾರಸ್ವಾಮಿ ಹೋಮ್ ಬ್ಯಾನರ್ ಶಮಿಕಾ ಎಂಟರ್ ಪ್ರೈಸಸ್ ನಿರ್ಮಾಣ ಮಾಡುತ್ತಿದೆ. ಈ ಸಿನಿಮಾದಲ್ಲಿ ರಾಧಿಕಾ ಕಾಳಿ ಮತ್ತು ಅಘೋರಿ  ಅವತಾರದಲ್ಲಿ ಕಾಣಿಸಿಕೊಂಡಿದ್ದಾರೆ.  ಭೈರಾದೇವಿಯ ಮತ್ತೊಂದು ಹೆಸರು ಕಾಳಿ, ಹಾಗಾಗಿ ಕಾಳಿ ಅವತಾರದಲ್ಲೂ ರಾಧಿಕಾ ಕಾಣಿಸಿಕೊಂಡಿದ್ದಾರೆ. ರಾಧಿಕಾ ಇದೇ ಮೊದಲ ಬಾರಿಗೆ ಅಘೋರಿ ಪಾತ್ರ ಮಾಡಿದ್ದು, ಸ್ಮಶಾನದಲ್ಲೆಲ್ಲಾ ಓಡಾಡಿ ಕುಣಿದಾಡಿದ್ದರು. ಚಿತ್ರೀಕರಣದ ವೇಳೆ ಸ್ಮಶಾನದಲ್ಲಿ ಡಾನ್ಸ್ ಮಾಡುವಾಗ ಬಿದ್ದಿದ್ದರು ಕೂಡ. ಈ ಪಾತ್ರಕ್ಕಾಗಿ ಸುಮಾರು 5 ಗಂಟೆ ಸಮಯ ರಾಘವೇಂದ್ರ ಮತ್ತು ನಾಗೇಂದ್ರ ಮೇಕಪ್ ಮಾಡಿದ್ದಾರೆ. ರಾಧಿಕಾ ಕುಮಾರಸ್ವಾಮಿ ಅಘೋರಿ ಅವತಾರದಲ್ಲಿ ನಿಜಕ್ಕೂ ಬೆಚ್ಚಿ ಬೀಳುವಂತೆ ಕಾಣುತ್ತಾರೆ. ಇತ್ತೀಚೆಗಷ್ಟೇ ಶಿವರಾತ್ರಿಯಂದು ಈ ಸಿನಿಮಾದ ಒಂದು ಸಣ್ಣ ಝಲಕ್ ರಿಲೀಸ್ ಆಗಿದ್ದು ಇಂಡಸ್ಟ್ರಿಯಲ್ಲಿ ಈ ಚಿತ್ರದ ಬಗ್ಗೆ ಹೊಸ ಟಾಕ್ ಶುರುವಾಗಿದೆ.

04:57ಅಪ್ಪನ ಆಸೆ.. ಮಗಳ ಕನಸು.. ಅಪ್ಪ ಇಟ್ಟ ಹೆಸರಲ್ಲೇ ಬಿಜಿನೆಸ್​ಶುರು ಮಾಡಿದ ಅಪ್ಪು ಪುತ್ರಿ ವಂದಿತಾ..!
02:36Yash: ನಟ ಯಶ್​ ಹೃದಯವಂತ, ಜೊತೆ ಕೆಲಸ ಮಾಡಿದ್ದು ಅದ್ಭುತ ಅನುಭವ: ತಾರಾ ಸುತಾರಿಯಾ
08:02Toxic Movie: ಲಸ್ಟ್ ಸ್ಟೋರೀಸ್, ಕಬೀರ್ ಸಿಂಗ್ ಆಯ್ತು; ಮದುವೆಯಾಗಿ ಮಗು ಆದ್ರೂ ಕಮ್ಮಿಯಾಗಿಲ್ಲ Kiara Advani ಬ್ಯೂಟಿ
09:56Yash Toxic Movie Tabaahi Song: ಯಶ್‌, ಕಿಯಾರಾ ಅಡ್ವಾಣಿ ಕೆಮಿಸ್ಟ್ರಿಗೆ ದಂಗಾದ ಇಂಟರ್‌ನೆಟ್‌ ಜಗತ್ತು!
04:04ಶಿವಣ್ಣ-ಧನಂಜಯ್ ಮತ್ತೊಮ್ಮೆ ಜೊತೆಯಾಟ.. ಹೇಮಂತ್ ರಾವ್ ನಿರ್ದೇಶನದಲ್ಲಿ '...ಡ್ರೀಮ್ ಥಿಯೇಟರ್..!
09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
05:49Toxic: Ladies & Ladies Teaser: 3 ಟೀಸರ್.. 100 ಮ್ಯಾಟರ್: ಇದ್ರಲ್ಲಿ ಲೇಡೀಸ್ ಗ್ಯಾಂಗ್ ಆರ್ಭಟ!
07:55Toxic: ಟಾಕ್ಸಿಕ್ ಸೌಂದರ್ಯ & ಸಮರ; ಲೇಡೀಸ್ ಸ್ಪೆಷಲ್ ಟೀಸರ್ ಸೆನ್ಸೇಷನ್‌ ಏನ್ ಹೇಳ್ತಿದೆ?
22:40ಗೆಳತಿ ಮನೆಯಲ್ಲಿ Vaishak​​ ನೇಣಿಗೆ ಶರಣಾಗಿದ್ದೇಕೆ ? ದುರಂತದ ಆ ರಾತ್ರಿ ಕೃಷಿ ತಾಪಂಡ ಮನೆಯಲ್ಲಿ ನಡೆದಿದ್ದೇನು?
06:59ಜಿಮ್ ಮಾಡ್ತಿದ್ದ ದರ್ಶನ್ 'ಯೋಗ' ಮಾಡುವಂತಾಗಿದ್ದು ಹೀಗೆ.. ಅವರು ಹೇಳಿಲ್ಲಾ ಅಂದ್ರೆ ಇವರು ಮಾಡ್ತಿರ್ಲಿಲ್ಲ!?