ಬೆಳ್ತಂಗಡಿಯ ಲೀಲಾವತಿ ಸ್ಟಾರ್ ನಟಿಯಾಗಿದ್ದು ಹೇಗೆ ? 86 ವರ್ಷದ ಸಾರ್ಥಕ ಬದುಕು..ತುಂಬಿದ ಕೊಡ !

ಬೆಳ್ತಂಗಡಿಯ ಲೀಲಾವತಿ ಸ್ಟಾರ್ ನಟಿಯಾಗಿದ್ದು ಹೇಗೆ ? 86 ವರ್ಷದ ಸಾರ್ಥಕ ಬದುಕು..ತುಂಬಿದ ಕೊಡ !

Published : Dec 10, 2023, 09:41 AM IST

ಲೀಲಾವತಿಯವ ಹಿನ್ನೆಲೆ ಬಹಳ ಇಂಟ್ರೆಸ್ಟಿಂಗ್. ಬೆಳ್ತಂಗಡಿ ಮೂಲದ ಲೀಲಾ ಕಿರಣ್ ಓದಿದ್ದು 2ನೇ ತರಗತಿ ಮಾತ್ರ. ಬಾಲ್ಯದಲ್ಲಿ ಬದುಕಲು ನೆರೆ ಹೊರೆಯವರ ಮನೆಯಲ್ಲಿ ಮುಸರೆ  ಪಾತ್ರೆ ತೊಳೆದಿದ್ದರಂತೆ. ಅಂತಹ ಕಷ್ಟದ ದಿನಗಳನ್ನೂ ನೋಡಿದವರು ಲೀಲಾವತಿ.

ಲೀಲಾವತಿ ಅವರು 1949ರಲ್ಲಿ ಶಂಕರ್ ಸಿಂಗ್ ಅವರ ನಾಗಕನ್ನಿಕ ಚಿತ್ರದಲ್ಲಿ ಸಖಿಯ ಪಾತ್ರದ ಮುಖಾಂತರ ಕನ್ನಡ ಚಿತ್ರರಂಗ ಪ್ರವೇಶಿಸಿದರು. ಸುಬ್ಬಯ್ಯ ನಾಯ್ಡು ಅವರ ಸಂಸ್ಥೆಯಲ್ಲಿ ರಂಗಭೂಮಿ ಕಲಾವಿದೆಯಾಗಿದ್ದ ಲೀಲಾವತಿ(Leelavathi) ಅವರು ಕಯಾದುವಿನ ಸಖಿಯಾಗಿ ಅಭಿನಯಿಸಿದ್ದರು. ಮಹಾಲಿಂಗ ಭಾಗವತರ ನಾಟಕ ಸಂಸ್ಥೆಯನ್ನು ಸೇರಿ ಹಲವಾರು ನಾಟಕಗಳಲ್ಲಿ ಅಭಿನಯಿಸಿದರು. ಸಂತ ತುಕಾರಾಂ, ಕಣ್ತೆರೆದು ನೋಡು, ಕೈವಾರ ಮಹಾತ್ಮೆ, ಗಾಳಿ ಗೋಪುರ, ಕನ್ಯಾರತ್ನ, ಕುಲವಧು, ವೀರ ಕೇಸರಿ, ಮನ ಮೆಚ್ಚಿದ ಮಡದಿ ಹೀಗೆ ಹಲವಾರು ಚಿತ್ರಗಳ ನಾಯಕಿಯಾದರು. ಕೆಲಚಿತ್ರಗಳಲ್ಲಿ ನಾಯಕ ನಟರಿಗಿಂತ ಹೆಚ್ಚಿನ ಸಂಭಾವನೆ ಪಡೆಯುವ ನಾಯಕಿಯಾಗಿ ಗುರುತಿಸಿಕೊಂಡಿದ್ದರು. ಸುಬ್ಬಯ್ಯ ನಾಯ್ಡು ಅವರ ಭಕ್ತ ಪ್ರಹ್ಲಾದದಲ್ಲಿ ಕೂಡಾ ಅಭಿನಯಿಸಿದರು. ಹಲವಾರು ಚಿತ್ರಗಳಲ್ಲಿ ಚಿಕ್ಕ ಪಾತ್ರಗಳಲ್ಲಿ ಅಭಿನಯಿಸಿದರು. ನಾಯಕಿಯಾಗಿ ಅವರು ಅಭಿನಯಿಸಿದ ಮೊದಲ ಚಿತ್ರ ಮಾಂಗಲ್ಯ ಯೋಗ. ಡಾ. ರಾಜ್ ಕುಮಾರ್(Dr.Rajkumar) ಅವರೊಂದಿಗೆ ನಟಿಸಿದ ಮೊದಲ ಚಿತ್ರ ರಣಧೀರ ಕಂಠೀರವ. ರಾಣಿ ಹೊನ್ನಮ್ಮ(Rani Honnamma) ಚಿತ್ರದ ಯಶಸ್ಸಿನ ನಂತರ ರಾಜ್ ಕುಮಾರ್ ಮತ್ತು ಲೀಲಾವತಿ ಅವರ ಜೋಡಿ ಜನಪ್ರಿಯವಾಯಿತು. ಡಾ ರಾಜ್ ಕುಮಾರ್ ಜೊತೆಗೆ ಒಟ್ಟು 39 ಸಿನಿಮಾಗಳಲ್ಲಿ ನಟಿಸಿದ ಖ್ಯಾತಿ ಇವರದ್ದು. ಡಾ.ರಾಜ್ ಕುಮಾರ್ ಅವರಿಗೆ ತಂಗಿಯಾಗಿ ಅತ್ತಿಗೆಯಾಗಿ ಅಮ್ಮನಾಗಿ ನಟಿಸಿದ ಏಕೈಕ ನಟಿ ಲೀಲಾವತಿಯವರು ಎನ್ನುವುದು ವಿಶೇಷ.

ಕನ್ನಡ, ತಮಿಳು ಮತ್ತು ತೆಲುಗು, ಮಲಯಾಳಂ ಚಲನಚಿತ್ರಗಳು ಸೇರಿದಂತೆ  ಲೀಲಾವತಿಯವರು 50ವರ್ಷಗಳಿಗೂ ಹೆಚ್ಚು ಕಾಲ ತಮ್ಮ ವೃತ್ತಿಜೀವನದುದ್ದಕ್ಕೂ 600 ಕ್ಕೂ ಹೆಚ್ಚು ಚಲನಚಿತ್ರಗಳಲ್ಲಿ ನಟಿಸಿದ್ದರು. ಕನ್ನಡದಲ್ಲಿ 400 ಕ್ಕೂ ಹೆಚ್ಚು ಚಿತ್ರಗಳಲ್ಲಿ ನಟಿಸಿ ಮನೆಮಾತಾಗಿದ್ದರು. ಭಕ್ತ ಕುಂಬಾರ, ಮನ ಮೆಚ್ಚಿದ ಮಂದಿ ಮತ್ತು ಸಂತ ತುಕಾರಂ ಚಿತ್ರಗಳಲ್ಲಿನ ಸ್ಮರಣೀಯ ಅಭಿನಯಕ್ಕಾಗಿ ಅವರು ಜನಪ್ರಿಯತೆಯ ಉತ್ತುಂಗಕ್ಕೆ ಏರಿದ್ದರು.70ರ ದಶಕದ ಬಳಿಕ ಕೆಲವು ಸಿನಿಮಾಗಳಲ್ಲಿ ಪೋಷಕ ಪಾತ್ರಗಳಲ್ಲಿ ಲೀಲಾವತಿಯವರು ನಟಿಸಿದ್ದರು. ನಾಗರಹಾವು, ಭಕ್ತ ಕುಂಬಾರ, ಗೆಜ್ಜೆ ಪೂಜೆ, ಸಿಪಾಯಿ ರಾಮು, ಮುಂತಾದ ಪ್ರಮುಖ ಚಿತ್ರಗಳಲ್ಲಿ ಅಭಿನಯಿಸಿದ್ದಾರೆ. 

ಇದನ್ನೂ ವೀಕ್ಷಿಸಿ:  ಮೇರುನಟಿ ಚಂದನವನದ ನಗುಮೊಗದ ಚೆಲುವೆ ಲೀಲಮ್ಮ! ದೇವರ ಗುಡಿ ಸೇರಿದ ಅಭಿನೇತ್ರಿ !

04:59ಟಾಕ್ಸಿಕ್ ಹಸಿಬಿಸಿ ದೃಶ್ಯದ ವಿರುದ್ದ ಕಂಪ್ಲೇಂಟ್; ಈ ವಿವಾದದ ಬಗ್ಗೆ ಯಶ್ ಏನಂತಾರೆ..?
03:36Golden Star Ganesh ಬಗ್ಗೆ ಇಂಥ ಚಿಂತಾಜನಕ ಸುದ್ದಿ ಹರಡಿದ್ಯಾಕೆ? ಯಾಕೆ ಹೀಗಾಯ್ತು?
05:51ದರ್ಶನ್ ಪತ್ನಿ ವಿಜಯಲಕ್ಷ್ಮೀ ವಿರುದ್ಧ ಅಶ್ಲೀಲ ಕಾಮೆಂಟ್: ಇಬ್ಬರ ಅರೆಸ್ಟ್, ಫ್ಯಾನ್ಸ್ ವಾರ್‌ಗೆ ಬ್ರೇಕ್
02:06ಬಾಕ್ಸಾಫೀಸ್​​ನಲ್ಲಿ ದಾಖಲೆ ಬರೆದ ಧುರಂಧರ್: ವೆಬ್​ ಸರಣಿ ನಿರ್ದೇಶನಕ್ಕೆ ಕೈ ಹಾಕಿದ ಪಿ.ಸಿ.ಶೇಖರ್
05:38ಒಂದೇ ಒಂದು ಹಾಡಿನಿಂದ ಟ್ರೆಂಡಿಂಗ್ ಟಾಪ್​ಸಿಂಗರ್​ಆಗ್ಬಿಟ್ರಾ ಸಾನ್ವಿ? ಅಪ್ಪನಂತೇ ಮಗಳು, ಸಂಗೀತದ ಬೆರಗು..!
03:37ಇತ್ತ ಡೆವಿಲ್.. ಅತ್ತ ಟ್ರಯಲ್.. ದಾಸನಿಗೆ ಟ್ರಬಲ್: ಪವಿತ್ರಾ ಗೌಡಗೂ ಟಿವಿ ಕೊಡಿ, ವಕೀಲರ ಮನವಿ!
04:23'ತ್ರಿಮೂರ್ತಿ'ಗಳ ಹಾಲಿವುಡ್‌ ರೇಂಜ್ ಮೇಕಿಂಗ್ '45' ಸಿನಿಮಾ ಟ್ರೈಲರ್ ನೋಡಿದವ್ರು ಏನಂತಿದಾರೆ?!
05:37ಡೆವಿಲ್ ಸಿನಿಮಾದಲ್ಲಿ ದರ್ಶನ್ ಸಿಎಂ..! ಕಿಚ್ಚ ಸುದೀಪ್ ಹೇಳಿದ ಪಾಲಿಟಿಕ್ಸ್ ಸೀಕ್ರೆಟ್ ಏನು?
04:38Video: ನಟಿ ರಮ್ಯಾಗೆ ಸಂದರ್ಶನದಲ್ಲೇ ತಿರುಗೇಟು ಕೊಟ್ಟ Actor Darshan Wife Vijayalakshmi
04:51ಎಲ್ಲೆಲ್ಲೂ 'ಗಿಲ್ಲಿ ನಟ'ನದೇ ದರ್ಬಾರ್.. ಬಿಗ್ ಬಾಸ್‌ನಲ್ಲೂ ಬಿಗ್ ಸ್ಕ್ರೀನ್‌ನಲ್ಲೂ ಸಖತ್ ಸದ್ದು..!
Read more