ಡಿಂಗ್ರಿ ನಾಗರಾಜ್‌ ಪುತ್ರ ರಾಜವರ್ಧನ್ ಹೊಸ ಸಿನಿಮಾ 'ಪ್ರಣಯಂ': ಫೆಬ್ರವರಿ 9ಕ್ಕೆ ತೆರೆಗೆ!

ಡಿಂಗ್ರಿ ನಾಗರಾಜ್‌ ಪುತ್ರ ರಾಜವರ್ಧನ್ ಹೊಸ ಸಿನಿಮಾ 'ಪ್ರಣಯಂ': ಫೆಬ್ರವರಿ 9ಕ್ಕೆ ತೆರೆಗೆ!

Published : Feb 07, 2024, 12:46 PM IST

ಪಲ್ಲಕ್ಕಿ, ಗಣಪ, ಪಾರಿಜಾತದಂಥ ಅದ್ಭುತ  ಚಿತ್ರಗಳನ್ನು ನೀಡಿದ ನಿರ್ಮಾಪಕ  ಪರಮೇಶ್ ಅವರೀಗ ಮತ್ತೊಂದು ಇನ್ ಟೆನ್ಸ್ ಲವ್ ಸ್ಟೋರಿಯನ್ನು ಪ್ರಣಯಂ ಚಿತ್ರದ ಮೂಲಕ ಪ್ರೇಕ್ಷಕರಿಗೆ ನೀಡಲಿದ್ದಾರೆ.  

ಪಲ್ಲಕ್ಕಿ, ಗಣಪ, ಪಾರಿಜಾತದಂಥ ಅದ್ಭುತ  ಚಿತ್ರಗಳನ್ನು ನೀಡಿದ ನಿರ್ಮಾಪಕ  ಪರಮೇಶ್ ಅವರೀಗ ಮತ್ತೊಂದು ಇನ್ ಟೆನ್ಸ್ ಲವ್ ಸ್ಟೋರಿಯನ್ನು ಪ್ರಣಯಂ ಚಿತ್ರದ ಮೂಲಕ ಪ್ರೇಕ್ಷಕರಿಗೆ ನೀಡಲಿದ್ದಾರೆ. ಮನಸ್ವಿ ವೆಂಚರ್ಸ್ ಹಾಗೂ ಪಿಟು ಪ್ರೊಡಕ್ಷನ್ಸ್ ಬ್ಯಾನರ್ ಅಡಿ ಪರಮೇಶ್ ಅವರೇ ಕಥೆ ಬರೆದು ನಿರ್ಮಿಸಿರುವ  ಈ ಚಿತ್ರಕ್ಕೆ ಎಸ್. ದತ್ತಾತ್ರೇಯ ಚಿತ್ರಕಥೆ ಬರೆದು ಆಕ್ಷನ್ ಕಟ್ ಹೇಳಿದ್ದಾರೆ. ಬಿಚ್ಚುಗತ್ತಿ ಖ್ಯಾತಿಯ  ನಟ ರಾಜವರ್ಧನ್, ನೈನಾ ಗಂಗೂಲಿ ಚಿತ್ರದ  ನಾಯಕ, ನಾಯಕಿಯಾಗಿ ಅಭಿನಯಿಸಿದ್ದಾರೆ.  ಈ ಚಿತ್ರದ ಟ್ರೈಲರ್  ರಿಲೀಸ್ ಆಗಿದ್ದು ಯೂಟ್ಯೂಬ್ನಲ್ಲಿ ಸದ್ದು ಮಾಡುತ್ತಿದೆ. ಫೆಬ್ರವರಿ 9ರಂದು ‘ಪ್ರಯಣಂ’ ತೆರೆಕಾಣಲಿದೆ. ಈ ಸಿನಿಮಾದಲ್ಲಿ ಖ್ಯಾತಿಯ ನಟ ರಾಜವರ್ಧನ್ ಗೆ ನಾಯಕಿಯಾಗಿ ನೈನಾ ಗಂಗೂಲಿ ಜೋಡಿಯಾಗಿದ್ದಾರೆ. 

ಪ್ರಣಯಂ ಒಂದು ಗಾಢವಾದ ಪ್ರೇಮಕಥೆ. ಅದರ ಝಲಕ್ ಹೇಗಿರಲಿದೆ ಎಂಬುದನ್ನು ತಿಳಿಸಲು ಇತ್ತೀಚೆಗೆ ಟ್ರೇಲರ್ ಬಿಡುಗಡೆ ಮಾಡಲಾಗಿದೆ. ಎಸ್. ದತ್ತಾತ್ರೇಯ ಅವರು ಚಿತ್ರಕಥೆ ಬರೆದು ಈ ಸಿನಿಮಾಗೆ ನಿರ್ದೇಶನ ಮಾಡಿದ್ದಾರೆ. ‘ಮನಸ್ವಿ ವೆಂಚರ್ಸ್’ ಹಾಗೂ ‘ಪಿಟು ಪ್ರೊಡಕ್ಷನ್ಸ್’ ಮೂಲಕ ‘ಪ್ರಯಣಂ’ ನಿರ್ಮಾಣ ಆಗಿದೆ. ಈ ಸಿನಿಮಾಗೆ ಮನೋಮೂರ್ತಿ ಸಂಗೀತ ನೀಡಿದ್ದು, 3 ಹಾಡುಗಳಿಗೆ ಜಯಂತ್ ಕಾಯ್ಕಿಣಿ ಸಾಹಿತ್ಯ ಬರೆದಿದ್ದಾರೆ. ಈ ಸಿನಿಮಾದಲ್ಲಿ ಒಟ್ಟು 5 ಹಾಡುಗಳು ಇವೆ. ವಿ. ನಾಗೇಶ್ ಆಚಾರ್ಯ ಛಾಯಾಗ್ರಹಣ ಮಾಡಿದ್ದಾರೆ. ನಿರ್ಮಾಪಕ ಪರಮೇಶ್ ಅವರಿಗೆ ಇರುವ ಸಿನಿಮಾ ಪ್ರೀತಿಯೇ ಪ್ರಣಯಂ ಸಿನಿಮಾ ಮಾಡುವಂತೆ ಮಾಡಿದೆ. ಈ ಶುಕ್ರವಾರ ರಾಜ್ಯಾಧ್ಯಂತ ತೆರೆಕಾಣುತ್ತಿದ್ದು ಪ್ರಣಯಂ ಸಿನಿಮಾವನ್ನು ಪ್ರೇಕ್ಷಕ ಒಪ್ಪಿ ಅಪ್ಪಿಕೊಳ್ಳಲಿದ್ದಾರೆ ಎಂಬ ಭರವಸೆಯಲ್ಲಿದೆ ಚಿತ್ರತಂಡ.

02:59ಜಯಪ್ರಕಾಶ್ ಶೆಟ್ಟಿ ನಟನೆ, ಕನ್ನಡ-ತುಳು ಭಾಷೆಯ 'ಬನ' ರಿಲೀಸ್ ಡೇಟ್ ಅನೌನ್ಸ್!
02:24ನೆಪೋಟಿಸಂ ಬಗ್ಗೆ ಪ್ರಿಯಾಂಕಾ ಉಪೇಂದ್ರ ಹೇಳಿದ್ದೇನು..?!
04:57ಅಪ್ಪನ ಆಸೆ.. ಮಗಳ ಕನಸು.. ಅಪ್ಪ ಇಟ್ಟ ಹೆಸರಲ್ಲೇ ಬಿಜಿನೆಸ್​ಶುರು ಮಾಡಿದ ಅಪ್ಪು ಪುತ್ರಿ ವಂದಿತಾ..!
02:36Yash: ನಟ ಯಶ್​ ಹೃದಯವಂತ, ಜೊತೆ ಕೆಲಸ ಮಾಡಿದ್ದು ಅದ್ಭುತ ಅನುಭವ: ತಾರಾ ಸುತಾರಿಯಾ
08:02Toxic Movie: ಲಸ್ಟ್ ಸ್ಟೋರೀಸ್, ಕಬೀರ್ ಸಿಂಗ್ ಆಯ್ತು; ಮದುವೆಯಾಗಿ ಮಗು ಆದ್ರೂ ಕಮ್ಮಿಯಾಗಿಲ್ಲ Kiara Advani ಬ್ಯೂಟಿ
09:56Yash Toxic Movie Tabaahi Song: ಯಶ್‌, ಕಿಯಾರಾ ಅಡ್ವಾಣಿ ಕೆಮಿಸ್ಟ್ರಿಗೆ ದಂಗಾದ ಇಂಟರ್‌ನೆಟ್‌ ಜಗತ್ತು!
04:04ಶಿವಣ್ಣ-ಧನಂಜಯ್ ಮತ್ತೊಮ್ಮೆ ಜೊತೆಯಾಟ.. ಹೇಮಂತ್ ರಾವ್ ನಿರ್ದೇಶನದಲ್ಲಿ '...ಡ್ರೀಮ್ ಥಿಯೇಟರ್..!
09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
05:49Toxic: Ladies & Ladies Teaser: 3 ಟೀಸರ್.. 100 ಮ್ಯಾಟರ್: ಇದ್ರಲ್ಲಿ ಲೇಡೀಸ್ ಗ್ಯಾಂಗ್ ಆರ್ಭಟ!
07:55Toxic: ಟಾಕ್ಸಿಕ್ ಸೌಂದರ್ಯ & ಸಮರ; ಲೇಡೀಸ್ ಸ್ಪೆಷಲ್ ಟೀಸರ್ ಸೆನ್ಸೇಷನ್‌ ಏನ್ ಹೇಳ್ತಿದೆ?
Read more