31 ಪುಣ್ಯಕೋಟಿಗಳ ದತ್ತು ಪಡೆದ ಅಭಿನಯ ಚಕ್ರವರ್ತಿ!

Nov 24, 2022, 5:11 PM IST

ಬೆಂಗಳೂರು: ನನ್ನನ್ನು ಪುಣ್ಯಕೋಟಿ ದತ್ತು ಯೋಜನೆಯ ರಾಯಭಾರಿಯನ್ನಾಗಿ ನೇಮಕ ಮಾಡಿ ಸರ್ಕಾರ ನನ್ನ ಜವಾಬ್ದಾರಿ ಹೆಚ್ಚಿಸಿದೆ. ನನ್ನನ್ನು ನೇಮಕ ಮಾಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಸಚಿವ ಪ್ರಭು ಚವ್ಹಾಣ್ ಅವರಿಗೆ ಕೃತಜ್ಞತೆ ತಿಳಿಸುತ್ತೇನೆ. ಸಾರ್ವಜನಿಕರು, ಚಿತ್ರರಂಗದ ಕಲಾವಿದರು, ಸಾರ್ವಜನಿಕ ಸಂಘ ಸಂಸ್ಥೆಗಳು ಗೋವುಗಳನ್ನು ದತ್ತು ಪಡೆಯಬೇಕು ಎಂದು ಸುದೀಪ್ ಮನವಿ ಮಾಡಿದರು. ಇಂದು ತಮ್ಮ ನಿವಾಸದಲ್ಲಿ ಗೋಪೂಜೆ ನೇರವೇರಿಸಿ ಮಾತನಾಡಿದ ಅವರು, ರಾಜ್ಯ ಸರ್ಕಾರ ಗೋಸಂಕುಲ ಸಂರಕ್ಷಣೆಯಲ್ಲಿ ಮಹತ್ವದ ಕೆಲಸ ಮಾಡುತ್ತಿದೆ ಎಂದರು. ಸಿಎಂ ತಮ್ಮ ಹುಟ್ಟುಹಬ್ಬದಂದು 11 ಗೋವು ದತ್ತು ಪಡೆದು, ತಮ್ಮ ಕನಸಿನ ಕೂಸಾದ ಪುಣ್ಯಕೋಟಿ ದತ್ತು ಯೋಜನೆ ಜಾರಿಗೆ ತಂದರು. ನಾನು ಕೂಡ ಜಿಲ್ಲೆಗೆ ಒಂದರಂತೆ 31 ಗೋವುಗಳನ್ನು ದತ್ತು ಪಡೆದಿದ್ದೇನೆ ಎಂದು ಸಚಿವ ಪ್ರಭು ಚವ್ಹಾಣ್ ಅವರು ವಿವರಿಸಿದಾಗ ನಾನು ಕೂಡ ನಿಮ್ಮಂತೆ ದತ್ತು ಪಡೆದಿದ್ದೇನೆ  ಎಂದು ಸುದೀಪ್ ಅವರು ಸಚಿವರಿಗೆ ತಿಳಿಸಿದರು.

ತೆರೆಮೇಲೆ ರತನ್ ಟಾಟಾ ಬಯೋಪಿಕ್; ರಾಷ್ಟ್ರ ಪ್ರಶಸ್ತಿ ವಿಜೇತ ಡೈರೆಕ್ಟರ್ ಆಕ್ಷನ್ ಕಟ್