Rakshit Shetty: 777 ಚಾರ್ಲಿ ಬಗ್ಗೆ ಇಂಟರೆಸ್ಟಿಂಗ್ ವಿಚಾರಗಳನ್ನು ಬಿಚ್ಚಿಟ್ಟ ಸಿಂಪಲ್ ಸ್ಟಾರ್!

Rakshit Shetty: 777 ಚಾರ್ಲಿ ಬಗ್ಗೆ ಇಂಟರೆಸ್ಟಿಂಗ್ ವಿಚಾರಗಳನ್ನು ಬಿಚ್ಚಿಟ್ಟ ಸಿಂಪಲ್ ಸ್ಟಾರ್!

Published : Jun 06, 2022, 08:49 PM IST

ಸ್ಯಾಂಡಲ್‌ವುಡ್ ಸ್ಟಾರ್ ರಕ್ಷಿತ್ ಶೆಟ್ಟಿ ಅಭಿನಯದ '777 ಚಾರ್ಲಿ' ಸಿನಿಮಾ ಜೂನ್ 10ರಂದು ಬಿಡುಗಡೆಯಾಗುತ್ತಿದ್ದು, ರಕ್ಷಿತ್ ಶೆಟ್ಟಿ ಏಷ್ಯಾನೆಟ್‌ ಸುವರ್ಣ ನ್ಯೂಸ್‌ ಜೊತೆ 777 ಚಾರ್ಲಿ ಚಿತ್ರದ ಬಗ್ಗೆ ಇಂಟರೆಸ್ಟಿಂಗ್ ವಿಚಾರಗಳನ್ನು ಹಂಚಿಕೊಂಡಿದ್ದಾರೆ.

ಸ್ಯಾಂಡಲ್‌ವುಡ್ ಸ್ಟಾರ್ ರಕ್ಷಿತ್ ಶೆಟ್ಟಿ ಅವರಿಗೆ ಇಂದು (ಜೂನ್ 6) ಹುಟ್ಟುಹಬ್ಬದ ಸಂಭ್ರಮ. ಸಿಂಪಲ್ ಸ್ಟಾರ್ ಎಂದೇ ಖ್ಯಾತಿಗಳಿಸಿರುವ  ರಕ್ಷಿತ್ ಶೆಟ್ಟಿಗೆ ಈ ಬಾರಿಯ ಹುಟ್ಟುಹಬ್ಬ ತುಂಬಾನೆ ಸ್ಪೆಷಲ್. ಯಾಕಂದರೆ ರಕ್ಷಿತ್ ನಟನೆಯ ಮೊದಲ ಪ್ಯಾನ್ ಇಂಡಿಯಾ ಸಿನಿಮಾ ಬಿಡುಗಡೆಗೆ ದಿನಗಣನೆ ಪ್ರಾರಂಭವಾಗಿದೆ. ಹೌದು! '777 ಚಾರ್ಲಿ' ಸಿನಿಮಾ ಜೂನ್ 10ರಂದು ಬಿಡುಗಡೆಯಾಗುತ್ತಿದ್ದು, ಈಗಾಗಲೇ ರಿಲೀಸ್ ಆಗಿರುವ ಟ್ರೇಲರ್ ಸಖತ್ ಮೋಡಿ ಮಾಡಿದೆ. ಈ ನಡುವೆ ರಕ್ಷಿತ್ ಶೆಟ್ಟಿ ಏಷ್ಯಾನೆಟ್‌ ಸುವರ್ಣ ನ್ಯೂಸ್‌ ಜೊತೆ 777 ಚಾರ್ಲಿ ಚಿತ್ರದ ಬಗ್ಗೆ ಇಂಟರೆಸ್ಟಿಂಗ್ ವಿಚಾರಗಳನ್ನು ಹಂಚಿಕೊಂಡಿದ್ದಾರೆ.

ಪ್ಯಾನ್ ಇಂಡಿಯಾದಲ್ಲಿ ಚಾರ್ಲಿ ಹವಾ ಜೋರು; ಐಎಂಡಿಬಿ ನಲ್ಲಿ ಅತೀ ಹೆಚ್ಚು ರೇಟಿಂಗ್ ಪಡೆದ ಸಿನಿಮಾ

ಇನ್ನು ಪರಮಃ ಸ್ಟುಡಿಯೋಸ್ ನಿರ್ಮಾಣದಲ್ಲಿ ಮೂಡಿಬಂದಿರುವ '777 ಚಾರ್ಲಿ' ಸಿನಿಮಾವನ್ನು ಕಿರಣ್‌ರಾಜ್‌ ನಿರ್ದೇಶನ ಮಾಡಿದ್ದಾರೆ. ಇದು ಅವರ ಚೊಚ್ಚಲ ನಿರ್ದೇಶನದ ಸಿನಿಮಾ. ನಟ ರಕ್ಷಿತ್ ಶೆಟ್ಟಿ ಈ ಸಿನಿಮಾದಲ್ಲಿ ಧರ್ಮ ಅನ್ನೋ ಪಾತ್ರವನ್ನು ನಿಭಾಯಿಸಿದ್ದಾರೆ. ಶ್ವಾನ ಮತ್ತು ಮನುಷ್ಯನ ನಡುವಿನ ಒಡನಾಟದ ಕಥೆಯನ್ನು ಈ ಸಿನಿಮಾ ಹೊಂದಿದೆ. ಈ ಸಿನಿಮಾದಲ್ಲಿ ನಾಯಕಿಯಾಗಿ ಸಂಗೀತಾ ಶೃಂಗೇರಿ ಕಾಣಿಸಿಕೊಂಡಿದ್ದಾರೆ. ಉಳಿದಂತೆ, ರಾಜ್‌ ಬಿ. ಶೆಟ್ಟಿ, ದಾನಿಶ್‌ ಸೇಠ್‌, ತಮಿಳಿನ ಬಾಬಿ ಸಿಂಹ ಮುಂತಾದವರು ನಟಿಸಿದ್ದಾರೆ.

ಸಿನಿಮಾ ಹಂಗಾಮಾ ವೀಡಿಯೋಗಳನ್ನು ವೀಕ್ಷಿಸಲು ಇಲ್ಲಿ ಕ್ಲಿಕ್ಕಿಸಿ: https://kannada.asianetnews.com/movies

02:06ಬಾಕ್ಸಾಫೀಸ್​​ನಲ್ಲಿ ದಾಖಲೆ ಬರೆದ ಧುರಂಧರ್: ವೆಬ್​ ಸರಣಿ ನಿರ್ದೇಶನಕ್ಕೆ ಕೈ ಹಾಕಿದ ಪಿ.ಸಿ.ಶೇಖರ್
05:38ಒಂದೇ ಒಂದು ಹಾಡಿನಿಂದ ಟ್ರೆಂಡಿಂಗ್ ಟಾಪ್​ಸಿಂಗರ್​ಆಗ್ಬಿಟ್ರಾ ಸಾನ್ವಿ? ಅಪ್ಪನಂತೇ ಮಗಳು, ಸಂಗೀತದ ಬೆರಗು..!
03:37ಇತ್ತ ಡೆವಿಲ್.. ಅತ್ತ ಟ್ರಯಲ್.. ದಾಸನಿಗೆ ಟ್ರಬಲ್: ಪವಿತ್ರಾ ಗೌಡಗೂ ಟಿವಿ ಕೊಡಿ, ವಕೀಲರ ಮನವಿ!
04:23'ತ್ರಿಮೂರ್ತಿ'ಗಳ ಹಾಲಿವುಡ್‌ ರೇಂಜ್ ಮೇಕಿಂಗ್ '45' ಸಿನಿಮಾ ಟ್ರೈಲರ್ ನೋಡಿದವ್ರು ಏನಂತಿದಾರೆ?!
05:37ಡೆವಿಲ್ ಸಿನಿಮಾದಲ್ಲಿ ದರ್ಶನ್ ಸಿಎಂ..! ಕಿಚ್ಚ ಸುದೀಪ್ ಹೇಳಿದ ಪಾಲಿಟಿಕ್ಸ್ ಸೀಕ್ರೆಟ್ ಏನು?
04:38Video: ನಟಿ ರಮ್ಯಾಗೆ ಸಂದರ್ಶನದಲ್ಲೇ ತಿರುಗೇಟು ಕೊಟ್ಟ Actor Darshan Wife Vijayalakshmi
04:51ಎಲ್ಲೆಲ್ಲೂ 'ಗಿಲ್ಲಿ ನಟ'ನದೇ ದರ್ಬಾರ್.. ಬಿಗ್ ಬಾಸ್‌ನಲ್ಲೂ ಬಿಗ್ ಸ್ಕ್ರೀನ್‌ನಲ್ಲೂ ಸಖತ್ ಸದ್ದು..!
05:21ರಾಜ್ಯಾದ್ಯಂತ Devil ಜಾತ್ರೆ.. ಮ್ಯಾಸಿವ್ ಓಪನಿಂಗ್: ದರ್ಶನ್ ನೋಡಿದ ಅಭಿಮಾನಿಗಳು ಹೇಳಿದ್ದೇನು?
04:44ನಾ ಬಂದೆ ಚಿನ್ನ: 'ದಿ ಡೆವಿಲ್' ಗ್ರ್ಯಾಂಡ್ ಎಂಟ್ರಿ.. ರಾಜ್ಯಾದ್ಯಂತ 400+ ಸ್ಕ್ರೀನ್‌ಗಳಲ್ಲಿ ದರ್ಶನ್ ಆಟ ಶುರು
05:38ದರ್ಶನ್ ಜೈಲಿನಲ್ಲಿ.. 'ದಿ ಡೆವಿಲ್‌' ಗೆಲ್ಲಿಸ್ತಾರಾ ಪ್ಯಾನ್ಸ್‌..? ಮತ್ತೊಂದು 'ಸಾರಥಿ' ಆಗುತ್ತಾ ಈ ಸಿನಿಮಾ?
Read more