ಶ್ರೀಮುರಳಿ ಬರ್ತ್​ಡೇಗೆ ಪರಾಕ್ ಫಸ್ಟ್ ಲುಕ್ ರಿಲೀಸ್; 'ಗೇಮ್ ಚೇಂಜರ್' ಪ್ರೀಮಿಯರ್​​ಗೆ ನೀರಸ ಸ್ವಾಗತ!

ಶ್ರೀಮುರಳಿ ಬರ್ತ್​ಡೇಗೆ ಪರಾಕ್ ಫಸ್ಟ್ ಲುಕ್ ರಿಲೀಸ್; 'ಗೇಮ್ ಚೇಂಜರ್' ಪ್ರೀಮಿಯರ್​​ಗೆ ನೀರಸ ಸ್ವಾಗತ!

Published : Dec 18, 2024, 05:29 PM IST

ರೋರಿಂಗ್ ಸ್ಟಾರ್ ಶ್ರೀಮುರಳಿ ಜನ್ಮದಿನದಂದು 'ಪರಾಕ್' ಹೊಸ ಚಿತ್ರ ಘೋಷಣೆಯಾಗಿದೆ. ಈ ಚಿತ್ರವನ್ನು ಹಾಲೇಶ್ ಕೋಗುಂಡಿ ನಿರ್ದೇಶಿಸುತ್ತಿದ್ದು, ಬ್ರ್ಯಾಂಡ್ ಸ್ಟುಡಿಯೋಸ್ ನಿರ್ಮಿಸುತ್ತಿದೆ. ರಾಮ್ ಚರಣ್ 'ಗೇಮ್ ಚೇಂಜರ್' ಚಿತ್ರದ ಬಗ್ಗೆ ಪ್ರೇಕ್ಷಕರಲ್ಲಿ ನಿರೀಕ್ಷೆ ಕಡಿಮೆಯಾಗಿದ್ದು, ಅಮೆರಿಕದಲ್ಲಿ ಅಡ್ವಾನ್ಸ್ ಬುಕಿಂಗ್ ನಿರಾಶಾದಾಯಕವಾಗಿದೆ.

ರೋರಿಂಗ್ ಸ್ಟಾರ್ ಶ್ರೀಮುರಳಿ  ಜನ್ಮದಿನದ ಸಂಭ್ರಮದಲ್ಲಿದ್ದಾರೆ. ಶ್ರೀಮುರಳಿ, ಬರ್ತಡೇ ಪ್ರಯುಕ್ತ 'ಪರಾಕ್' ಎಂಬ ಹೊಸ ಚಿತ್ರ ಘೋಷಣೆಯಾಗಿದೆ. ಒಂದು ಕೈಯಲ್ಲಿ ಗನ್ ಹಿಡಿದು ಬೆನ್ನು ತೋರಿಸ್ತಿರುವ ಶ್ರೀ, ಬೆನ್ನಿಗೆ ಪಿಸ್ತೂಲ್ ಹಾಕಿ ಪ್ರತ್ಯಕ್ಷರಾಗಿದ್ದಾರೆ. ನವ ನಿರ್ದೇಶಕ ಹಾಲೇಶ್ ಕೋಗುಂಡಿ ಈ ಚಿತ್ರ ನಿರ್ದೇಶನ ಮಾಡುತ್ತಿದ್ದಾರೆ. ಬ್ರ್ಯಾಂಡ್ ಸ್ಟುಡಿಯೋಸ್ ಬ್ಯಾನರ್ ನಡಿ ಪರಾಕ್ ಸಿನಿಮಾ ನಿರ್ಮಾಣವಾಗುತ್ತಿದ್ದು ಮಾರ್ಚ್​​ ನಿಂದ ಶೂಟಿಂಗ್ ಶುರುವಾಗಲಿದೆ. ರಾಮ್‌ ಚರಣ್ ನಟನೆಯ ಹೊಸ ಚಿತ್ರ 'ಗೇಮ್ ಚೇಂಜರ್' ರಿಲೀಸ್‌ಗೆ ರೆಡಿಯಾಗಿದೆ. ಅದರಲ್ಲೂ ಪ್ಯಾನ್ ಇಂಡಿಯಾ ಡೈರೆಕ್ಟರ್ ಶಂಕರ್ ನಿರ್ದೇಶನದ ಸಿನಿಮಾ ಅಂದರೆ ಅದರ ಕ್ರೇಜ್ ದೊಡ್ಡ ಮಟ್ಟದಲ್ಲಿ ಇರುತ್ತೆ. ಆದ್ರೆ ಈ ಸಿನಿಮಾ ಮಾತ್ರ  ಪ್ರೇಕ್ಷಕರಲ್ಲಿ ಕ್ರೇಜ್ ಹುಟ್ಟಾಕುವಲ್ಲಿ ವಿಫಲವಾಗಿದೆ. ಜನವರಿ 10ಕ್ಕೆ ಈ ಸಿನಿಮಾ ತೆರೆಗೆ ಬರಲಿದ್ದು, ಆದ್ರೆ ಚಿತ್ರದ ಬಗ್ಗೆ ಪ್ರೇಕ್ಷಕರಲ್ಲಿ ನಿರೀಕ್ಷೆ ಮಾತ್ರ ಸೃಷ್ಟಿಯಾಗಿಲ್ಲ. ಅಮೆರಿಕದಲ್ಲಿ ಅಡ್ವಾನ್ಸ್ ಬುಕಿಂಗ್ ಓಪನ್ ಆಗಿದ್ದು, ಪೇಯ್ಡ್ ಪ್ರೀಮಿಯರ್‌ಗೆ ಮೊದಲ 48ಗಂಟೆಗಳಲ್ಲಿ ಜಸ್ಟ್ 1315 ಟಿಕೆಟ್ ಬುಕ್ ಆಗಿದ್ದು ಚಿತ್ರಕ್ಕೆ ಬಂಡವಾಳ ಹೂಡಿರೋ ದಿಲ್ ರಾಜುಗೆ ಟೆನ್​ಷನ್ ಶುರುವಾಗಿದೆ.

ದರ್ಶನ್​ ಹೆಸರಲ್ಲಿ ಅರ್ಚನೆ ಮಾಡಿಸಿದ ಪವಿತ್ರಾ ಗೌಡ ತಾಯಿ; ಪತಿ-ಪತ್ನಿಯ ನಡುವೆ ಮತ್ತೆ ಬರ್ತಾಳಾ ಪವಿತ್ರಾ?

04:59ಟಾಕ್ಸಿಕ್ ಹಸಿಬಿಸಿ ದೃಶ್ಯದ ವಿರುದ್ದ ಕಂಪ್ಲೇಂಟ್; ಈ ವಿವಾದದ ಬಗ್ಗೆ ಯಶ್ ಏನಂತಾರೆ..?
03:36Golden Star Ganesh ಬಗ್ಗೆ ಇಂಥ ಚಿಂತಾಜನಕ ಸುದ್ದಿ ಹರಡಿದ್ಯಾಕೆ? ಯಾಕೆ ಹೀಗಾಯ್ತು?
05:51ದರ್ಶನ್ ಪತ್ನಿ ವಿಜಯಲಕ್ಷ್ಮೀ ವಿರುದ್ಧ ಅಶ್ಲೀಲ ಕಾಮೆಂಟ್: ಇಬ್ಬರ ಅರೆಸ್ಟ್, ಫ್ಯಾನ್ಸ್ ವಾರ್‌ಗೆ ಬ್ರೇಕ್
02:06ಬಾಕ್ಸಾಫೀಸ್​​ನಲ್ಲಿ ದಾಖಲೆ ಬರೆದ ಧುರಂಧರ್: ವೆಬ್​ ಸರಣಿ ನಿರ್ದೇಶನಕ್ಕೆ ಕೈ ಹಾಕಿದ ಪಿ.ಸಿ.ಶೇಖರ್
05:38ಒಂದೇ ಒಂದು ಹಾಡಿನಿಂದ ಟ್ರೆಂಡಿಂಗ್ ಟಾಪ್​ಸಿಂಗರ್​ಆಗ್ಬಿಟ್ರಾ ಸಾನ್ವಿ? ಅಪ್ಪನಂತೇ ಮಗಳು, ಸಂಗೀತದ ಬೆರಗು..!
03:37ಇತ್ತ ಡೆವಿಲ್.. ಅತ್ತ ಟ್ರಯಲ್.. ದಾಸನಿಗೆ ಟ್ರಬಲ್: ಪವಿತ್ರಾ ಗೌಡಗೂ ಟಿವಿ ಕೊಡಿ, ವಕೀಲರ ಮನವಿ!
04:23'ತ್ರಿಮೂರ್ತಿ'ಗಳ ಹಾಲಿವುಡ್‌ ರೇಂಜ್ ಮೇಕಿಂಗ್ '45' ಸಿನಿಮಾ ಟ್ರೈಲರ್ ನೋಡಿದವ್ರು ಏನಂತಿದಾರೆ?!
05:37ಡೆವಿಲ್ ಸಿನಿಮಾದಲ್ಲಿ ದರ್ಶನ್ ಸಿಎಂ..! ಕಿಚ್ಚ ಸುದೀಪ್ ಹೇಳಿದ ಪಾಲಿಟಿಕ್ಸ್ ಸೀಕ್ರೆಟ್ ಏನು?
04:38Video: ನಟಿ ರಮ್ಯಾಗೆ ಸಂದರ್ಶನದಲ್ಲೇ ತಿರುಗೇಟು ಕೊಟ್ಟ Actor Darshan Wife Vijayalakshmi
04:51ಎಲ್ಲೆಲ್ಲೂ 'ಗಿಲ್ಲಿ ನಟ'ನದೇ ದರ್ಬಾರ್.. ಬಿಗ್ ಬಾಸ್‌ನಲ್ಲೂ ಬಿಗ್ ಸ್ಕ್ರೀನ್‌ನಲ್ಲೂ ಸಖತ್ ಸದ್ದು..!
Read more