Madhagaja: ತಾಂಡವನ ಜೊತೆಗೆ ಶ್ರೀಮುರಳಿ-ಆಶಿಕಾ ಎಕ್ಸ್‌ಕ್ಲೂಸಿವ್ ಮಾತುಗಳು!

Madhagaja: ತಾಂಡವನ ಜೊತೆಗೆ ಶ್ರೀಮುರಳಿ-ಆಶಿಕಾ ಎಕ್ಸ್‌ಕ್ಲೂಸಿವ್ ಮಾತುಗಳು!

Published : Dec 01, 2021, 11:56 PM IST

'ಮದಗಜ' ಚಿತ್ರ ದೇಶದಾದ್ಯಂತ 1400 ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗುತ್ತಿದ್ದು, ಈ ಬಗ್ಗೆ ಶ್ರೀಮುರಳಿ, ನಾಯಕಿ ಆಶಿಕಾ ರಂಗನಾಥ್ ಹಾಗೂ ಚಿತ್ರದ ಖಳನಾಯಕ ಗರುಡ ರಾಮ್‌ ಸುವರ್ಣ ನ್ಯೂಸ್‌ಗೆ ಎಕ್ಸ್‌ಕ್ಲೂಸಿವ್ ಸಂದರ್ಶನ ಕೊಟ್ಟಿದ್ದಾರೆ. 

ರೋರಿಂಗ್ ಸ್ಟಾರ್ ಶ್ರೀಮುರಳಿ (SriiMurali) ಅಭಿನಯದ ಹಾಗೂ ಮಹೇಶ್ ಕುಮಾರ್ (Mahesh Kumar) ನಿರ್ದೇಶನದ ಬಹು ನಿರೀಕ್ಷಿತ ಚಿತ್ರ 'ಮದಗಜ' (Madhagaja) ಚಿತ್ರದ ಟೀಸರ್ (Teaser), ಟ್ರೈಲರ್ (Trailer) ಹಾಗೂ ಮೇಕಿಂಗ್ ವಿಡಿಯೋ ಈಗಾಗಲೇ ಸಿನಿ ರಸಿಕರ ಗಮನ ಸೆಳೆದಿದ್ದು, ಇದೇ ಡಿಸೆಂಬರ್ 3ರಂದು ದೇಶದಾದ್ಯಂತ 1400 ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಲಿದೆ. ಇದೀಗ 'ಮದಗಜ' ಚಿತ್ರದ ಬಗ್ಗೆ ಶ್ರೀಮುರಳಿ, ನಾಯಕಿ ಆಶಿಕಾ ರಂಗನಾಥ್ (Ashika Ranganath) ಹಾಗೂ ಚಿತ್ರದ ಖಳನಾಯಕ ಗರುಡ ರಾಮ್‌ (Garuda Ram) ಸುವರ್ಣ ನ್ಯೂಸ್‌ಗೆ ಎಕ್ಸ್‌ಕ್ಲೂಸಿವ್ ಸಂದರ್ಶನ ಕೊಟ್ಟಿದ್ದಾರೆ. 

Madhagaja: ರೋರಿಂಗ್ ಸ್ಟಾರ್ ಶ್ರೀಮುರಳಿ ಚಿತ್ರದಲ್ಲಿ 3 ವಿಭಿನ್ನ ಪಾತ್ರಗಳು

ಚಿತ್ರದ ಮೇಕಿಂಗ್, ಟ್ರೇಲರ್ ಹಾಗೂ ಹಾಡುಗಳು ಸೇರಿದಂತೆ ತಮ್ಮ ಪಾತ್ರಗಳ ಬಗ್ಗೆ ಎಲ್ಲರೂ ಸಂಪೂರ್ಣ ಮಾಹಿತಿಯನ್ನು ಹಂಚಿಕೊಂಡಿದ್ದಾರೆ. ವಾರಾಣಸಿ ಗ್ಯಾಂಗ್‌ಸ್ಟರ್‌ (Gangster) ಆಗಿ ಶ್ರೀಮುರಳಿ ಚಿತ್ರದಲ್ಲಿ ಕಾಣಿಸಿಕೊಂಡಿದ್ದು, ಚುಟು ಚುಟು ಬೆಡಗಿ ಆಶಿಕಾ ರಂಗನಾಥ್ ಹಳ್ಳಿ ಹುಡುಗಿ ಪಾತ್ರದಲ್ಲಿ ನಟಿಸಿದ್ದಾರೆ. ಖಳನಾಯಕ ಗರುಡ ರಾಮ್‌ ತಾಂಡವ ಪಾತ್ರದಲ್ಲಿ ಅಭಿನಯಿಸಿದ್ದಾರೆ. ಹರೀಶ್ ಕೊಮ್ಮೆ ಸಂಕಲನ, ರವಿ ಬಸ್ರೂರ್‌ ಸಂಗೀತ ಸಂಯೋಜನೆಯಿರುವ ಈ ಚಿತ್ರದಲ್ಲಿ ಟಾಲಿವುಡ್‌ ಖ್ಯಾತ ನಟ ಜಗಪತಿ ಬಾಬು (Jagapati Babu), ತೆಲುಗಿನ ದೇವಯಾನಿ (Devayani), ರಂಗಾಯಣ ರಘು (Rangayana Raghu) ಮುಖ್ಯ ಪಾತ್ರಗಳಲ್ಲಿ ಕಾಣಿಸಿಕೊಂಡಿದ್ದಾರೆ. ಉಮಾಪತಿ ಶ್ರೀನಿವಾಸ್ ಗೌಡ (Umapathy Srinivas Gowda) 'ಮದಗಜ' ಚಿತ್ರಕ್ಕೆ ಬಂಡವಾಳ ಹೂಡಿದ್ದಾರೆ.

ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಕ್ಲಿಕಿಸಿ: Asianet Suvarna Entertainment

02:59ಜಯಪ್ರಕಾಶ್ ಶೆಟ್ಟಿ ನಟನೆ, ಕನ್ನಡ-ತುಳು ಭಾಷೆಯ 'ಬನ' ರಿಲೀಸ್ ಡೇಟ್ ಅನೌನ್ಸ್!
02:24ನೆಪೋಟಿಸಂ ಬಗ್ಗೆ ಪ್ರಿಯಾಂಕಾ ಉಪೇಂದ್ರ ಹೇಳಿದ್ದೇನು..?!
04:57ಅಪ್ಪನ ಆಸೆ.. ಮಗಳ ಕನಸು.. ಅಪ್ಪ ಇಟ್ಟ ಹೆಸರಲ್ಲೇ ಬಿಜಿನೆಸ್​ಶುರು ಮಾಡಿದ ಅಪ್ಪು ಪುತ್ರಿ ವಂದಿತಾ..!
02:36Yash: ನಟ ಯಶ್​ ಹೃದಯವಂತ, ಜೊತೆ ಕೆಲಸ ಮಾಡಿದ್ದು ಅದ್ಭುತ ಅನುಭವ: ತಾರಾ ಸುತಾರಿಯಾ
08:02Toxic Movie: ಲಸ್ಟ್ ಸ್ಟೋರೀಸ್, ಕಬೀರ್ ಸಿಂಗ್ ಆಯ್ತು; ಮದುವೆಯಾಗಿ ಮಗು ಆದ್ರೂ ಕಮ್ಮಿಯಾಗಿಲ್ಲ Kiara Advani ಬ್ಯೂಟಿ
09:56Yash Toxic Movie Tabaahi Song: ಯಶ್‌, ಕಿಯಾರಾ ಅಡ್ವಾಣಿ ಕೆಮಿಸ್ಟ್ರಿಗೆ ದಂಗಾದ ಇಂಟರ್‌ನೆಟ್‌ ಜಗತ್ತು!
04:04ಶಿವಣ್ಣ-ಧನಂಜಯ್ ಮತ್ತೊಮ್ಮೆ ಜೊತೆಯಾಟ.. ಹೇಮಂತ್ ರಾವ್ ನಿರ್ದೇಶನದಲ್ಲಿ '...ಡ್ರೀಮ್ ಥಿಯೇಟರ್..!
09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
05:49Toxic: Ladies & Ladies Teaser: 3 ಟೀಸರ್.. 100 ಮ್ಯಾಟರ್: ಇದ್ರಲ್ಲಿ ಲೇಡೀಸ್ ಗ್ಯಾಂಗ್ ಆರ್ಭಟ!
07:55Toxic: ಟಾಕ್ಸಿಕ್ ಸೌಂದರ್ಯ & ಸಮರ; ಲೇಡೀಸ್ ಸ್ಪೆಷಲ್ ಟೀಸರ್ ಸೆನ್ಸೇಷನ್‌ ಏನ್ ಹೇಳ್ತಿದೆ?
Read more