Rishab Shetty: ಹುಲಿ ವೇಷಧಾರಿಗಳ ಜೊತೆ ಮಸ್ತ್‌ ಡ್ಯಾನ್ಸ್‌ ಮಾಡಿದ ರಿಷಬ್‌ ಶೆಟ್ಟಿ

Rishab Shetty: ಹುಲಿ ವೇಷಧಾರಿಗಳ ಜೊತೆ ಮಸ್ತ್‌ ಡ್ಯಾನ್ಸ್‌ ಮಾಡಿದ ರಿಷಬ್‌ ಶೆಟ್ಟಿ

Published : Jul 08, 2023, 10:41 AM IST

ನಟ ರಿಷಬ್‌ ಶೆಟ್ಟಿ ತಮ್ಮ ಹುಟ್ಟುಹಬ್ಬ ಆಚರಣೆ ಕಾರ್ಯಕ್ರಮದಲ್ಲಿ ಹುಲಿ ವೇಷಧಾರಿಗಳ ಜೊತೆ ಮಸ್ತ್‌ ಆಗಿ ಹುಲಿ ಡ್ಯಾನ್ಸ್‌ ಮಾಡಿದ್ದಾರೆ.
 

ಬೆಂಗಳೂರು: ನಟ, ನಿರ್ದೇಶಕ ಹಾಗೂ ನಿರ್ಮಾಪಕ ರಿಷಬ್‌ ಶೆಟ್ಟಿ( Rishab Shetty) ಅವರು ಅಭಿಮಾನಿಗಳ ಜತೆಗೆ ಶುಕ್ರವಾರ ತಮ್ಮ ಹುಟ್ಟುಹಬ್ಬವನ್ನು(Birthday) ಅದ್ಧೂರಿಯಾಗಿ ಆಚರಿಸಿಕೊಂಡಿದ್ದಾರೆ. ಬೆಂಗಳೂರಿನ ಹೊಸಕೆರೆಹಳ್ಳಿ ಬಳಿ ಇರುವ ನಂದಿ ಮೈದಾನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಸಾವಿರಾರು ಮಂದಿ ಅಭಿಮಾನಿಗಳು ಸೇರಿದ್ದರು. ಡೊಳ್ಳು ಕುಣಿತ, ನೃತ್ಯ ಕಾರ್ಯಕ್ರಮ ಸೇರಿದಂತೆ ಹಲವು ಮನರಂಜನೆ ಕಾರ್ಯಕ್ರಮಗಳ ಜತೆಗೆ ಅಭಿಮಾನಿಗಳು ತಂದಿದ್ದ ಕೇಕ್‌ ಕತ್ತರಿಸಿ ತಮ್ಮ ಹುಟ್ಟುಹಬ್ಬವನ್ನು ಆಚರಿಸಿಕೊಂಡರು. ಕಾರ್ಯಕ್ರಮದಲ್ಲಿ ಹುಲಿ ಕುಣಿತ, ಚೆಂಡೆ ಸದ್ದು ತುಂಬಾ ಜೋರಾಗಿ ಇತ್ತು. ಇನ್ನು ಉಡುಪಿಯಿಂದ ಬಂದ ಹುಲಿ ವೇಷಧಾರಿಗಳ ಜೊತೆ ರಿಷಬ್ ಹುಲಿ ಡಾನ್ಸ್ (tiger dance) ಮಾಡಿ ಸಂಭ್ರಮಿಸಿದರು. ದೊಡ್ಡ ಮಟ್ಟದಲ್ಲಿ ಯಶಸ್ಸು ಕಂಡ ‘ಕಾಂತಾರ’ (Kantara) ಚಿತ್ರದ ನಂತರ ರಿಷಬ್‌ ಶೆಟ್ಟಿ ಅವರನ್ನು ಅಭಿಮಾನಿಸುವವರ ಸಂಖ್ಯೆ ದೊಡ್ಡದಾಗಿದೆ. 

ಇದನ್ನೂ ವೀಕ್ಷಿಸಿ:  ಬಿಟ್‌ ಕಾಯಿನ್‌ ಹಗರಣ ಮರುತನಿಖೆ: ಅನುಮಾನಕ್ಕೆ ಕಾರಣವಾಯ್ತು ಸರ್ಕಾರದ ಆದೇಶ!

04:57ಅಪ್ಪನ ಆಸೆ.. ಮಗಳ ಕನಸು.. ಅಪ್ಪ ಇಟ್ಟ ಹೆಸರಲ್ಲೇ ಬಿಜಿನೆಸ್​ಶುರು ಮಾಡಿದ ಅಪ್ಪು ಪುತ್ರಿ ವಂದಿತಾ..!
02:36Yash: ನಟ ಯಶ್​ ಹೃದಯವಂತ, ಜೊತೆ ಕೆಲಸ ಮಾಡಿದ್ದು ಅದ್ಭುತ ಅನುಭವ: ತಾರಾ ಸುತಾರಿಯಾ
08:02Toxic Movie: ಲಸ್ಟ್ ಸ್ಟೋರೀಸ್, ಕಬೀರ್ ಸಿಂಗ್ ಆಯ್ತು; ಮದುವೆಯಾಗಿ ಮಗು ಆದ್ರೂ ಕಮ್ಮಿಯಾಗಿಲ್ಲ Kiara Advani ಬ್ಯೂಟಿ
09:56Yash Toxic Movie Tabaahi Song: ಯಶ್‌, ಕಿಯಾರಾ ಅಡ್ವಾಣಿ ಕೆಮಿಸ್ಟ್ರಿಗೆ ದಂಗಾದ ಇಂಟರ್‌ನೆಟ್‌ ಜಗತ್ತು!
04:04ಶಿವಣ್ಣ-ಧನಂಜಯ್ ಮತ್ತೊಮ್ಮೆ ಜೊತೆಯಾಟ.. ಹೇಮಂತ್ ರಾವ್ ನಿರ್ದೇಶನದಲ್ಲಿ '...ಡ್ರೀಮ್ ಥಿಯೇಟರ್..!
09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
05:49Toxic: Ladies & Ladies Teaser: 3 ಟೀಸರ್.. 100 ಮ್ಯಾಟರ್: ಇದ್ರಲ್ಲಿ ಲೇಡೀಸ್ ಗ್ಯಾಂಗ್ ಆರ್ಭಟ!
07:55Toxic: ಟಾಕ್ಸಿಕ್ ಸೌಂದರ್ಯ & ಸಮರ; ಲೇಡೀಸ್ ಸ್ಪೆಷಲ್ ಟೀಸರ್ ಸೆನ್ಸೇಷನ್‌ ಏನ್ ಹೇಳ್ತಿದೆ?
22:40ಗೆಳತಿ ಮನೆಯಲ್ಲಿ Vaishak​​ ನೇಣಿಗೆ ಶರಣಾಗಿದ್ದೇಕೆ ? ದುರಂತದ ಆ ರಾತ್ರಿ ಕೃಷಿ ತಾಪಂಡ ಮನೆಯಲ್ಲಿ ನಡೆದಿದ್ದೇನು?
06:59ಜಿಮ್ ಮಾಡ್ತಿದ್ದ ದರ್ಶನ್ 'ಯೋಗ' ಮಾಡುವಂತಾಗಿದ್ದು ಹೀಗೆ.. ಅವರು ಹೇಳಿಲ್ಲಾ ಅಂದ್ರೆ ಇವರು ಮಾಡ್ತಿರ್ಲಿಲ್ಲ!?
Read more