Upendra: ಮತ್ತೆ ಡೈರೆಕ್ಷನ್ ಕ್ಯಾಪ್ ತೊಟ್ಟ ರಿಯಲ್ ಸ್ಟಾರ್ ಉಪೇಂದ್ರ

Upendra: ಮತ್ತೆ ಡೈರೆಕ್ಷನ್ ಕ್ಯಾಪ್ ತೊಟ್ಟ ರಿಯಲ್ ಸ್ಟಾರ್ ಉಪೇಂದ್ರ

Suvarna News   | Asianet News
Published : Mar 12, 2022, 11:11 AM IST

ನಟ ರಿಯಲ್ ಸ್ಟಾರ್ ಉಪೇಂದ್ರ ನಿರ್ದೇಶನದ ಸಿನಿಮಾಗಳನ್ನು ನೋಡಲು ಅವರ ಅಭಿಮಾನಿಗಳು ಕಾಯುತ್ತಿರುತ್ತಾರೆ. ಅಂತೆಯೇ 7 ವರ್ಷಗಳ ಬಳಿಕ ಅವರು ನಿರ್ದೇಶನಕ್ಕೆ ಮರಳಿದ್ದಾರೆ. 

ನಟ ರಿಯಲ್ ಸ್ಟಾರ್ ಉಪೇಂದ್ರ (Upendra)  ನಿರ್ದೇಶನದ ಸಿನಿಮಾಗಳನ್ನು ನೋಡಲು ಅವರ ಅಭಿಮಾನಿಗಳು ಕಾಯುತ್ತಿರುತ್ತಾರೆ. ಅಂತೆಯೇ 7 ವರ್ಷಗಳ ಬಳಿಕ ಅವರು ನಿರ್ದೇಶನಕ್ಕೆ ಮರಳಿದ್ದಾರೆ. ನಿರ್ದೇಶನ ಮಾಡುತ್ತಿರುವ ಹೊಸ ಸಿನಿಮಾದ ಪೋಸ್ಟರ್ ರಿಲೀಸ್ ಮಾಡಿದ್ದು, ಅದರಲ್ಲಿಯೇ ಸಾಕಷ್ಟು ಕುತೂಹಲ ಸೃಷ್ಟಿ ಮಾಡಿದ್ದಾರೆ. 'ಯಾವಾಗ ಬರ್ತಾನೆ ಗೊತ್ತಿಲ್ಲ, ಆದರೆ ಬಂದೇ ಬರುತ್ತಾನೆ' ಎಂಬುದನ್ನು ಪೋಸ್ಟರ್‌ನಲ್ಲಿ ಟ್ಯಾಗ್‌ಲೈನ್ ರೀತಿ ನೀಡಿದ್ದು, ಅದನ್ನು ಕೂಡ 7 ಭಾಷೆಯ 7 ಪದಗಳಲ್ಲಿ ಹೇಳಿರೋದು ಉಪ್ಪಿ ಬುದ್ಧಿವಂತಿಕೆಯಾಗಿದೆ. ಭಿನ್ನ-ವಿಭಿನ್ನವಾದ ಶೀರ್ಷಿಕೆಗಳನ್ನು ಇಡುವುದರಲ್ಲಿ ಈಗಾಗಲೇ ಉಪೇಂದ್ರ ಫೇಮಸ್. 

Upendra: ಏಪ್ರಿಲ್ 1ಕ್ಕೆ ಬೆಳ್ಳಿತೆರೆ ಮೇಲೆ ಬರಲಿದ್ದಾರೆ ಹೋಮ್‌ ಮಿನಿಸ್ಟರ್‌!

ಈ ಬಾರಿ ಕೂಡ ಅಂಥದ್ದೇ ಒಂದು ಹೊಸ ಟೈಟಲ್​ ಇಟ್ಟಿದ್ದಾರೆ. ಅದನ್ನು ಕುದುರೆ ಲಾಳ ಎನ್ನಬೇಕೋ, ಮೂರು ನಾಮ ಎನ್ನಬೇಕೋ, ಉಗುರಿನ ಮೇಲೆ ಮತದಾನದ ಇಂಕು ಹತ್ತಿರುವ ಗುರುತು ಎನ್ನಬೇಕೋ ಎಂಬುದು ಅವರೇ ಹೇಳಬೇಕು. ಸದ್ಯಕ್ಕೆ ಈ ಪೋಸ್ಟರ್ ಸಿನಿರಸಿಕರ ಗಮನ ಸೆಳೆಯುತ್ತಿದೆ. ಈ ಪೋಸ್ಟರ್‌ನಲ್ಲಿ ಉಪೇಂದ್ರ ವಿಭಿನ್ನವಾಗಿ ಕಾಣಿಸಿಕೊಂಡಿದ್ದು, ಕೊಂಬು ಇರುವ ಕುದುರೆ ಏರಿ ಕಂಬಳಿ ಹೊದ್ದಿರುವ ಲುಕ್​ನಲ್ಲಿದ್ದಾರೆ. 'ಲಹರಿ ಫಿಲ್ಮ್ಸ್' (Lahari Films) ಮತ್ತು 'ವೀನಸ್​ ಎಂಟರ್​ಟೇನರ್ಸ್' (Venus Entertainers) ಸಂಸ್ಥೆಗಳು ಚಿತ್ರಕ್ಕೆ ಬಂಡವಾಳ ಹೂಡುತ್ತಿದ್ದಾರೆ. 

ಸಿನಿಮಾ ಹಂಗಾಮಾ ವೀಡಿಯೋಗಳನ್ನು ವೀಕ್ಷಿಸಲು ಇಲ್ಲಿ ಕ್ಲಿಕ್ಕಿಸಿ: https://kannada.asianetnews.com/movies

02:06ಬಾಕ್ಸಾಫೀಸ್​​ನಲ್ಲಿ ದಾಖಲೆ ಬರೆದ ಧುರಂಧರ್: ವೆಬ್​ ಸರಣಿ ನಿರ್ದೇಶನಕ್ಕೆ ಕೈ ಹಾಕಿದ ಪಿ.ಸಿ.ಶೇಖರ್
05:38ಒಂದೇ ಒಂದು ಹಾಡಿನಿಂದ ಟ್ರೆಂಡಿಂಗ್ ಟಾಪ್​ಸಿಂಗರ್​ಆಗ್ಬಿಟ್ರಾ ಸಾನ್ವಿ? ಅಪ್ಪನಂತೇ ಮಗಳು, ಸಂಗೀತದ ಬೆರಗು..!
03:37ಇತ್ತ ಡೆವಿಲ್.. ಅತ್ತ ಟ್ರಯಲ್.. ದಾಸನಿಗೆ ಟ್ರಬಲ್: ಪವಿತ್ರಾ ಗೌಡಗೂ ಟಿವಿ ಕೊಡಿ, ವಕೀಲರ ಮನವಿ!
04:23'ತ್ರಿಮೂರ್ತಿ'ಗಳ ಹಾಲಿವುಡ್‌ ರೇಂಜ್ ಮೇಕಿಂಗ್ '45' ಸಿನಿಮಾ ಟ್ರೈಲರ್ ನೋಡಿದವ್ರು ಏನಂತಿದಾರೆ?!
05:37ಡೆವಿಲ್ ಸಿನಿಮಾದಲ್ಲಿ ದರ್ಶನ್ ಸಿಎಂ..! ಕಿಚ್ಚ ಸುದೀಪ್ ಹೇಳಿದ ಪಾಲಿಟಿಕ್ಸ್ ಸೀಕ್ರೆಟ್ ಏನು?
04:38Video: ನಟಿ ರಮ್ಯಾಗೆ ಸಂದರ್ಶನದಲ್ಲೇ ತಿರುಗೇಟು ಕೊಟ್ಟ Actor Darshan Wife Vijayalakshmi
04:51ಎಲ್ಲೆಲ್ಲೂ 'ಗಿಲ್ಲಿ ನಟ'ನದೇ ದರ್ಬಾರ್.. ಬಿಗ್ ಬಾಸ್‌ನಲ್ಲೂ ಬಿಗ್ ಸ್ಕ್ರೀನ್‌ನಲ್ಲೂ ಸಖತ್ ಸದ್ದು..!
05:21ರಾಜ್ಯಾದ್ಯಂತ Devil ಜಾತ್ರೆ.. ಮ್ಯಾಸಿವ್ ಓಪನಿಂಗ್: ದರ್ಶನ್ ನೋಡಿದ ಅಭಿಮಾನಿಗಳು ಹೇಳಿದ್ದೇನು?
04:44ನಾ ಬಂದೆ ಚಿನ್ನ: 'ದಿ ಡೆವಿಲ್' ಗ್ರ್ಯಾಂಡ್ ಎಂಟ್ರಿ.. ರಾಜ್ಯಾದ್ಯಂತ 400+ ಸ್ಕ್ರೀನ್‌ಗಳಲ್ಲಿ ದರ್ಶನ್ ಆಟ ಶುರು
05:38ದರ್ಶನ್ ಜೈಲಿನಲ್ಲಿ.. 'ದಿ ಡೆವಿಲ್‌' ಗೆಲ್ಲಿಸ್ತಾರಾ ಪ್ಯಾನ್ಸ್‌..? ಮತ್ತೊಂದು 'ಸಾರಥಿ' ಆಗುತ್ತಾ ಈ ಸಿನಿಮಾ?
Read more