Dec 10, 2022, 12:19 PM IST
ವಿಜಯಾನಂದ ಕನ್ನಡದ ಮೊದಲ ಬಯೋಪಿಕ್ ಸಿನಿಮಾ. ಕನ್ನಡ, ತಮಿಳು, ತೆಲುಗು, ಹಿಂದಿ ಮತ್ತು ಮಲಯಾಳಂ ಸೇರಿದಂತೆ ಐದು ಭಾಷೆಗಳಲ್ಲಿ ಪ್ಯಾನ್ ಇಂಡಿಯಾ ಚಿತ್ರವಾಗಿ ವಿಜಯಾನಂದ ಬಿಡುಗಡೆ ಆಗಿದೆ. ವಿಜಯ್ ಸಂಕೇಶ್ವರ್ ಪಾತ್ರದಲ್ಲಿ ನಟ ನಿಹಾಲ್ ರಜಪೂತ್ ಅಭಿನಯಿಸಿದ್ದು, ಅನಂತ್ ನಾಗ್, ರವಿಚಂದ್ರನ್, ವಿನಯಾ ಪ್ರಸಾದ್, ಸಿರಿ ಪ್ರಹ್ಲಾದ್, ಅರ್ಚನಾ ಕೊಟ್ಟಿಗೆ, ಪ್ರಕಾಶ್ ಬೆಳವಾಡಿ, ಶೈನ್ ಶೆಟ್ಟಿ, ದಯಾಳ್ ಪದ್ಮನಾಭನ್, ರಮೇಶ್ ಭಟ್ ಸೇರಿದಂತೆ ದೊಡ್ಡ ಸ್ಟಾರ್ ಕಾಸ್ಟ್ ಸಿನಿಮಾದಲ್ಲಿದೆ. ಈ ಸಿನಿಮಾ ಪ್ರೇಕ್ಷಕರ ಮನಸ್ಸು ಗೆಲ್ಲುವಲ್ಲೂ ಸಕ್ಸಸ್ ಆಗಿದೆ.