Yellow Board ಚಿತ್ರಕ್ಕೆ ಮಲ್ಟಿಪ್ಲೆಕ್ಸ್ ಚಿತ್ರಮಂದಿರಗಳಿಂದ ತೊಂದರೆ!

Yellow Board ಚಿತ್ರಕ್ಕೆ ಮಲ್ಟಿಪ್ಲೆಕ್ಸ್ ಚಿತ್ರಮಂದಿರಗಳಿಂದ ತೊಂದರೆ!

Suvarna News   | Asianet News
Published : Mar 10, 2022, 05:18 PM IST

ಜಾಲಿಡೇಸ್ ಸಿನಿಮಾ ಖ್ಯಾತಿಯ ಪ್ರದೀಪ್ ಅಭಿನಯದ 'ಯೆಲ್ಲೋ ಬೋರ್ಡ್' ಚಿತ್ರ ಈಗಾಗಲೇ ರಾಜ್ಯಾದ್ಯಂತ ಬಿಡುಗಡೆಯಾಗಿ ಉತ್ತಮ ಪ್ರದರ್ಶನ ಕಾಣುತ್ತಿದೆ. ಈ ಮಧ್ಯೆ 'ಯೆಲ್ಲೋ ಬೋರ್ಡ್' ಚಿತ್ರಕ್ಕೆ ಸಂಕಷ್ಟವೊಂದು ಎದುರಾಗಿದೆ. 

ಜಾಲಿಡೇಸ್ ಸಿನಿಮಾ ಖ್ಯಾತಿಯ ಪ್ರದೀಪ್ (Pradeep) ಅಭಿನಯದ 'ಯೆಲ್ಲೋ ಬೋರ್ಡ್' (Yellow Board) ಚಿತ್ರ ಈಗಾಗಲೇ ರಾಜ್ಯಾದ್ಯಂತ ಬಿಡುಗಡೆಯಾಗಿ ಉತ್ತಮ ಪ್ರದರ್ಶನ ಕಾಣುತ್ತಿದೆ. ಚಿತ್ರದಲ್ಲಿ ಸಾರ್ವಜನಿಕರನ್ನು ಸುರಕ್ಷಿತವಾಗಿ ಮನೆಗೆ ಕರೆದೊಯ್ಯುವ ಜವಾಬ್ದಾರಿ ಹೊತ್ತ ಕ್ಯಾಬ್ ಚಾಲಕನ ಕಥೆ ನೋಡಿದ ಸಿನಿಮಂದಿ ಎಲ್ಲರೂ ಭರ್ಜರಿ ಮೆಚ್ಚುಗೆಯನ್ನು ವ್ಯಕ್ತಪಡಿಸುತ್ತಿದ್ದಾರೆ. ಈ ಮಧ್ಯೆ 'ಯೆಲ್ಲೋ ಬೋರ್ಡ್' ಚಿತ್ರಕ್ಕೆ ಸಂಕಷ್ಟವೊಂದು ಎದುರಾಗಿದೆ. ದೇವರು ವರ ಕೊಟ್ಟರೂ, ಪೂಜಾರಿ ವರ ಕೊಡಲಿಲ್ಲ ಅನ್ನುವ ಹಾಗೆ ಸಿನಿಮಾ ಚೆನ್ನಾಗಿದ್ದರೂ, ಸಿನಿಮಾ ಪ್ರದರ್ಶನ ಮಾಡುವ ಮಲ್ಟಿಪ್ಲೆಕ್ಸ್ ಚಿತ್ರಮಂದಿರಗಳು ಸಿನಿಮಾದ ಶೋಗಳನ್ನೇ ಕೊಡುತ್ತಿಲ್ಲ.

Yellow Board: ಪ್ರದೀಪ್ ನಟನೆಯ 'ಯೆಲ್ಲೋ ಬೋರ್ಡ್' ಸಿನಿಮಾ ಹೇಗಿದೆ ಗೊತ್ತಾ?

ಈ ಬಗ್ಗೆ ಚಿತ್ರದ ನಾಯಕ ಪ್ರದೀಪ್ ಅಸಮಾಧಾನವನ್ನು ಹೊರಹಾಕಿದ್ದು, ವಿಡಿಯೋವೊಂದನ್ನು ಹಂಚಿಕೊಂಡಿದ್ದಾರೆ. ಇನ್ನು ಕ್ಯಾಬ್ ಚಾಲಕನ ಸುತ್ತ ಸುತ್ತುವ ಈ ಕಥೆ ಇದಾಗಿದೆ. ದಿನಗೂಲಿ ನೌಕರಿಯಲ್ಲಿ ತೊಡಗಿರುವ ಕ್ಯಾಬ್ ಡ್ರೈವರ್‌ಗಳ ಜೀವನ ಈ ಚಿತ್ರದಲ್ಲಿದೆ.  ಕ್ಯಾಬ್ ಚಾಲಕನ ಜವಾಬ್ದಾರಿ, ಸಮಾಜದಲ್ಲಿ ಮಹಿಳಾ ಸುರಕ್ಷತೆ ಕುರಿತ (Women Saftey) ಈ ಸಿನಿಮಾ ನೈಜ ಕಥೆಯನ್ನು ಆಧರಿಸಿದೆ. ಅಹಲ್ಯಾ ಸುರೇಶ್, ಸ್ನೇಹಾ ಖುಷಿ, ಸಾಧು ಕೋಕಿಲ ಮುಂತಾದವರು ಈ ಚಿತ್ರದಲ್ಲಿ ​ಅಭಿನಯಿಸಿದ್ದಾರೆ. ಅದ್ವಿಕ್ ಸಂಗೀತ ನಿರ್ದೇಶನ, ಪ್ರವೀಣ್ ಕ್ಯಾಮೆರಾ ಕೈಚಳಕ ಹಾಗೂ ತ್ರಿಲೋಕ್​ ರೆಡ್ಡಿ (Trilok Reddy) ನಿರ್ದೇಶನ ಚಿತ್ರಕ್ಕಿದೆ.

ಸಿನಿಮಾ ಹಂಗಾಮಾ ವೀಡಿಯೋಗಳನ್ನು ವೀಕ್ಷಿಸಲು ಇಲ್ಲಿ ಕ್ಲಿಕ್ಕಿಸಿ: https://kannada.asianetnews.com/movies

02:45ನಟ ದರ್ಶನ್ ಬೇಲ್‌ಗೆ ಮತ್ತೆ ಹಿನ್ನಡೆ: ಪತಿಯ ಬಿಡುಗಡೆಗಾಗಿ ವಿಜಯಲಕ್ಷ್ಮೀ ಪ್ರಯತ್ನ ಫಲ ಕೊಡುತ್ತಾ?
24:34ಸ್ಯಾಂಡಲ್​​ವುಡ್​​ನಲ್ಲಿ ಸಾಲು ಸಾಲು ಅಕಾಲಿಕ ಮರಣ..! ಮೃತ್ಯುಂಜಯ ಹೋಮ ಫಲಿಸಲಿಲ್ವಾ..?
03:06'ಸೆಪ್ಟೆಂಬರ್ 21' ಚಿತ್ರದ ಟ್ರೇಲರ್ ಬಿಡುಗಡೆ: ಪತ್ನಿ ಪ್ರಿಯಾಂಕ ಸಿನಿಮಾಗೆ ರಿಯಲ್ ಸ್ಟಾರ್ ಉಪೇಂದ್ರ ಸಾಥ್‌
05:27ಸಿಂಗರ್‌ನಿಂದ ಹೀರೋವರೆಗೆ: ‘ಲೋ ನವೀನ’ ಮೂಲಕ ನವೀನ್ ಸಜ್ಜು ಹೊಸ ಪ್ರಯಾಣ
03:45ಸಿದ್ದೇಗೌಡರ ಗದ್ಲಗೆ ಜಾಕ್​ಪಾಟ್: ಮತ್ತೆ ಮೋಡಿ ಮಾಡ್ತಾರಾ ಸತೀಶ್​ ನೀನಾಸಂ-ರಚಿತಾ ರಾಮ್?
06:20ದರ್ಶನ್‌ ದಾರಿಗೆ 'ಜೈ' ಎಂದ ಅಲ್ಲು ಅರ್ಜುನ್.. ಟಾಲಿವುಡ್‌ನಲ್ಲಿ ಹೊಸ ಕ್ರಾಂತಿ ಹುಟ್ಟಿಸಿದ ಐಕಾನ್ ಸ್ಟಾರ್!
05:36ಬ್ಯಾಂಕಾಕ್‌ಗೆ ಹಾರಿದ ರಶ್ಮಿಕಾ ಮಂದಣ್ಣ, 'ಆಕ್ಷನ್ ಕ್ವೀನ್' ಆಗೋದಕ್ಕೆ ಸಜ್ಜಾಗ್ತಿದ್ದಾರಾ ರಶ್ಮಿಕಾ?
05:06ಒಬ್ರು ಅಪರಾಧಿ, ಇನ್ನೊಬ್ರು ಆರೋಪಿ.. ಜೈಲಿನಲ್ಲಿ ಅಕ್ಕಪಕ್ಕದಲ್ಲೇ ವಾಸ; ದರ್ಶನ್‌ಗೆ ಢವಢವ!
04:43ನಟ ಯಶ್‌ಗೆ ಪಕ್ಕದ ರಾಜ್ಯಗಳಲ್ಲೇ ದುಶ್ಮನ್‌ಗಳು ಕಾಡ್ತಿದ್ದಾರಾ? ಸುಳ್ಳು ಸುದ್ದಿ ಹಬ್ಬಿಸಿ ಟಾರ್ಗೆಟ್‌ ಮಾಡ್ತಿದ್ದಾರಾ?
07:32ಮರ್ಯಾದಾ ಪುರುಷೋತ್ತಮನಾಗಿ ಮನಗೆದ್ದ ರಣಬೀರ್; ಒಂದೇ ಒಂದು ಬ್ಯಾಕ್ ಶಾಟ್ ಮೂಲಕ ಮಿಂಚು ಹರಿಸಿದ ಯಶ್!