Banaras song: ಟ್ರೋಲರ್ಸ್‌ಗೆ ಜಮೀರ್ ಪುತ್ರ ಝೈದ್ ಖಾನ್ ಮ್ಯೂಸಿಕ್ ಪಂಚ್

Banaras song: ಟ್ರೋಲರ್ಸ್‌ಗೆ ಜಮೀರ್ ಪುತ್ರ ಝೈದ್ ಖಾನ್ ಮ್ಯೂಸಿಕ್ ಪಂಚ್

Published : Sep 18, 2022, 03:22 PM IST

ಶಾಸಕ ಜಮೀರ್ ಪುತ್ರ ಝೈದ್ ಖಾನ್ ನಾಯಕನಾಗಿ ಸ್ಯಾಂಡಲ್ ವುಡ್ ಗೆ ಎಂಟ್ರಿ ಕೊಡುತ್ತಿದ್ದಾರೆ. ಬನಾರಸ್ ಸಿನಿಮಾ ಮೂಲಕ ಬರ್ತಿರುವ ಝೈದ್ ಖಾನ್ ಸಿನಿಮಾರಂಗಕ್ಕೆ ಪದಾರ್ಪಣೆ ಮಾಡಿದ್ದಾರೆ. ಈ ಸಿನಿಮಾದಲ್ಲಿ ಟ್ರೋಲ್ ಗಳ ಬಗ್ಗೆ ಹಾಡೊಂದನ್ನ ಮಾಡಿದ್ದು ಇದೀಗ ಈ ಸಾಂಗ್ ಬಿಡುಗಡೆ ಆಗಿದೆ

ಟ್ರೋಲರ್ಸ್ ಅಂದ್ರೆ ಸೆಲೆಬ್ರೆಟಿಗಳಿಗೆ ಸಿಕ್ಕಾಪಟ್ಟೆ ಟೆನ್ಷನ್.. ಯಾಕಂದ್ರೆ ಹೀರೋ ಹೀರೋಯಿನ್ಸ್ಅನ್ನ ಟ್ರೋಲ್ ಪೇಜ್ಗಳು ಸಿಕ್ಕಾಪಟ್ಟೆ ಟ್ರೋಲ್ ಮಾಡ್ತಾರೆ. ಹೀಗಾಗಿ ಈಗೀಗ ಸೆಲೆಬ್ರೆಟಿಗಳು ಮಾತನಾಡುವಾಗ ತುಂಬಾ ಯೋಚನೆ ಮಾಡಿ ಮಾತಾಡ್ಬೇಕಿದೆ. ಇದೀಗ ಶಾಸಕ ಜಮೀರ್ ಪುತ್ರ ಝೈದ್ ಖಾನ್ ನಾಯಕನಾಗಿ ಸ್ಯಾಂಡಲ್ವುಡ್ಗೆ ಎಂಟ್ರಿ ಕೊಡುತ್ತಿರೋ ಬನಾರಸ್ ಸಿನಿಮಾದಲ್ಲಿ ಟ್ರೋಲ್ಗಳ ಹಾಡೊಂದನ್ನ ಮಾಡಿದ್ದಾರೆ. ಇದೀಗ ಈ ಟ್ರೋಲ್ ಸಾಂಗ್ ಬಿಡುಗಡೆ ಆಗಿದೆ. ಈ ಟ್ರೋಲ್ ಸಾಂಗ್ನಲ್ಲಿ ವಿಶೇಷ ಅಂದ್ರೆ ಜಮೀರ್ ಅಹಮ್ಮದ್ ಹೇಳಿದ್ದ ಕಜಾಜ್ಯೂಲೇಷನ್ ಬ್ರದರ್ ಕಂಜಾಜುಲೇಷನ್ ಡೈಲಾಗ್ ಕೂಡ ಇದ್ದು, ಈ ಹಾಡು ಈಗ ಟ್ರೆಂಡ್ ಆಗುತ್ತಿದೆ. ಜಯತೀರ್ಥ ನಿರ್ದೇಶನದಲ್ಲಿ ಮೂಡಿ ಬರುತ್ತಿರುವ ಬನಾರಸ್ ಸಿನಿಮಾ ಎಲ್ಲ ಟ್ರೋಲು ಎಲ್ಲಾ ಟ್ರೋಲು, ಸಿಕ್ಕಾಪಟ್ಟೆ ಕೊಲೇಸ್ಟ್ರಾಲು’ ಅಂತ ಶುರುವಾಗೋ ಈ ಹಾಡಿಗೆ ಡಾ. ವಿ ನಾಗೇಂದ್ರ ಪ್ರಸಾದ್ ಸಾಹಿತ್ಯ ಬರೆದಿದ್ದಾರೆ. ಬನಾರಸ್ಗೆ ಸಂಗೀತ ಸಂಯೋಜನೆ ಮಾಡಿರುವ ಅಜನೀಶ್ ಲೋಕನಾಥ್ ಅವರೇ ಈ ಹಾಡನ್ನು ಹಾಡಿದ್ದಾರೆ. ಬನಾರಸ್ ಏಕಕಾಲದಲ್ಲಿಯೇ ಐದು ಭಾಷೆಗಳಲ್ಲಿ ಬಿಡುಗಡೆಗೆ ಸಿದ್ಧವಾಗಿದೆ. ತಿಲಕ್ ರಾಜ್ ಬಲ್ಲಾಳ್ ನಿರ್ಮಾಣ ಮಾಡಿರೋ ಸಿನಿಮಾದಲ್ಲಿ ಕರಾವಳಿಯ ಹುಡುಗಿ ಸೋನಲ್ ಮಂತೇರೋ ನಾಯಕಿಯಾಗಿ ನಟಿಸಿದ್ದಾರೆ. 

05:38ಒಂದೇ ಒಂದು ಹಾಡಿನಿಂದ ಟ್ರೆಂಡಿಂಗ್ ಟಾಪ್​ಸಿಂಗರ್​ಆಗ್ಬಿಟ್ರಾ ಸಾನ್ವಿ? ಅಪ್ಪನಂತೇ ಮಗಳು, ಸಂಗೀತದ ಬೆರಗು..!
03:37ಇತ್ತ ಡೆವಿಲ್.. ಅತ್ತ ಟ್ರಯಲ್.. ದಾಸನಿಗೆ ಟ್ರಬಲ್: ಪವಿತ್ರಾ ಗೌಡಗೂ ಟಿವಿ ಕೊಡಿ, ವಕೀಲರ ಮನವಿ!
04:23'ತ್ರಿಮೂರ್ತಿ'ಗಳ ಹಾಲಿವುಡ್‌ ರೇಂಜ್ ಮೇಕಿಂಗ್ '45' ಸಿನಿಮಾ ಟ್ರೈಲರ್ ನೋಡಿದವ್ರು ಏನಂತಿದಾರೆ?!
05:37ಡೆವಿಲ್ ಸಿನಿಮಾದಲ್ಲಿ ದರ್ಶನ್ ಸಿಎಂ..! ಕಿಚ್ಚ ಸುದೀಪ್ ಹೇಳಿದ ಪಾಲಿಟಿಕ್ಸ್ ಸೀಕ್ರೆಟ್ ಏನು?
04:38Video: ನಟಿ ರಮ್ಯಾಗೆ ಸಂದರ್ಶನದಲ್ಲೇ ತಿರುಗೇಟು ಕೊಟ್ಟ Actor Darshan Wife Vijayalakshmi
04:51ಎಲ್ಲೆಲ್ಲೂ 'ಗಿಲ್ಲಿ ನಟ'ನದೇ ದರ್ಬಾರ್.. ಬಿಗ್ ಬಾಸ್‌ನಲ್ಲೂ ಬಿಗ್ ಸ್ಕ್ರೀನ್‌ನಲ್ಲೂ ಸಖತ್ ಸದ್ದು..!
05:21ರಾಜ್ಯಾದ್ಯಂತ Devil ಜಾತ್ರೆ.. ಮ್ಯಾಸಿವ್ ಓಪನಿಂಗ್: ದರ್ಶನ್ ನೋಡಿದ ಅಭಿಮಾನಿಗಳು ಹೇಳಿದ್ದೇನು?
04:44ನಾ ಬಂದೆ ಚಿನ್ನ: 'ದಿ ಡೆವಿಲ್' ಗ್ರ್ಯಾಂಡ್ ಎಂಟ್ರಿ.. ರಾಜ್ಯಾದ್ಯಂತ 400+ ಸ್ಕ್ರೀನ್‌ಗಳಲ್ಲಿ ದರ್ಶನ್ ಆಟ ಶುರು
05:38ದರ್ಶನ್ ಜೈಲಿನಲ್ಲಿ.. 'ದಿ ಡೆವಿಲ್‌' ಗೆಲ್ಲಿಸ್ತಾರಾ ಪ್ಯಾನ್ಸ್‌..? ಮತ್ತೊಂದು 'ಸಾರಥಿ' ಆಗುತ್ತಾ ಈ ಸಿನಿಮಾ?
24:18ರಿಷಬ್​​ ಶೆಟ್ಟಿ ಮಡಿಲಲ್ಲಿ ಮಲಗಿದ ದೈವ ನರ್ತಕ: ದೈವಾರಾಧಕರ ಆಕ್ರೋಶ, ಏನಿದು ಪಂಜುರ್ಲಿ?
Read more