Aug 23, 2023, 11:29 PM IST
41 ದಿನಗಳ ಹಿಂದೆ ಉಡಾವಣೆಗೊಂಡಿದ್ದ ಚಂದ್ರಯಾನ 3 ಇಂದು ಯಶಸ್ವಿಯಾಗಿ ಚಂದ್ರನ ಮೇಲೆ ಲ್ಯಾಂಡ್ ಆಗಿದೆ. ಈ ಮೂಲಕ ಭಾರತ ಇತಿಹಾಸ ನಿರ್ಮಿಸಿದೆ. ಇಸ್ರೋ ವಿಜ್ಞಾನಿಗಳ ಸತತ ಪರಿಶ್ರಮ, ಕೋಟ್ಯಾಂತರ ಭಾರತೀಯರ ಪ್ರಾರ್ಥನೆ ಫಲಿಸಿದೆ. ಇಂದು ಸಂಜೆ 6.04ಕ್ಕೆ ವಿಕ್ರಮ್ ಲ್ಯಾಂಡರ್ ಚಂದ್ರನ ದಕ್ಷಿಣ ಧ್ರುವದಲ್ಲಿ ಲ್ಯಾಂಡ್ ಆಗಿದೆ. ಈ ಮೂಲಕ ಚಂದ್ರನ ಮೇಲೆ ಯಶಸ್ವಿಯಾಗಿ ಕಾಲಿಟ್ಟ ನಾಲ್ಕನೇ ದೇಶ ಭಾರತ ಅನ್ನೋ ಹೆಗ್ಗಳಿಕೆಗೆ ಪಾತ್ರವಾಗಿದೆ. ಇತ್ತ ಮೊದಲ ಬಾರಿಗೆ ದಕ್ಷಿಣ ಧ್ರುವಕ್ಕೆ ಕಾಲಿಟ್ಟ ದೇಶ ಭಾರತ ಅನ್ನೋ ಕೀರ್ತಿಗೆ ಪಾತ್ರವಾಗಿದೆ. ಇಸ್ರೋದ ಚಂದ್ರಯಾನ 3 ಯಶಸ್ವಿಯಾಗಿ ಚಂದ್ರನ ಮೇಲೆ ಲ್ಯಾಂಡ್ ಆಗಿದೆ. ಇದರ ಬೆನ್ನಲ್ಲೇ ಕಾರ್ಯ ಆರಂಭಿಸಿದೆ. ಚಂದ್ರನ ನಾಲ್ಕು ಫೋಟೋಗಳನ್ನು ವಿಕ್ರಮ್ ಲ್ಯಾಂಡರ್ ಬೆಂಗಳೂರಿನ ಇಸ್ರೋ ಕೇಂದ್ರಕ್ಕೆ ಕಳುಹಿಸಿದೆ.