ರಾಬಾದ್ನಲ್ಲಿ ಪ್ರದರ್ಶನ ಪಂದ್ಯವಾಡಿ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಸಾನಿಯಾ ಮಿರ್ಜಾ
ಲಾಲ್ ಬಹದೂರ್ ಕ್ರೀಡಾಂಗಣದಲ್ಲೇ ಸಾನಿಯಾ ತಮ್ಮ ಚೊಚ್ಚಲ ಡಬ್ಲ್ಯುಟಿಎ ಸಿಂಗಲ್ಸ್ ಪ್ರಶಸ್ತಿ ಗೆದ್ದಿದ್ದರು.
ಮಹಿಳಾ ಡಬಲ್ಸ್ ಹಾಗೂ ಮಿಶ್ರ ಡಬಲ್ಸ್‌ನಲ್ಲಿ ಸಾನಿಯಾ ತಲಾ 3 ಗ್ರ್ಯಾನ್ ಸ್ಲಾಂ ಪ್ರಶಸ್ತಿ ಜಯಿಸಿದ್ದಾರೆ
ಹೈದರಾಬಾದ್(ಮೇ.06): ಭಾರತದ ಟೆನಿಸ್ ತಾರೆ ಸಾನಿಯಾ ಮಿರ್ಜಾ ತಮ್ಮ ಎರಡು ದಶಕಗಳ ಟೆನಿಸ್ ಬದುಕಿಗೆ ವಿದಾಯ ಹೇಳಿದ್ದಾರೆ. 2 ದಶಕಗಳ ಹಿಂದೆ ಇಲ್ಲಿನ ಲಾಲ್ ಬಹದೂರ್ ಕ್ರೀಡಾಂಗಣದಲ್ಲೇ ಸಾನಿಯಾ ತಮ್ಮ ಚೊಚ್ಚಲ ಡಬ್ಲ್ಯುಟಿಎ ಸಿಂಗಲ್ಸ್ ಪ್ರಶಸ್ತಿ ಗೆದ್ದಿದ್ದ ಸಾನಿಯಾ ಮಿರ್ಜಾ, ಇದೀಗ ಅದೇ ಕ್ರೀಡಾಂಗಣದಲ್ಲಿ ಕೊನೆಯ ಟೆನಿಸ್ ಪಂದ್ಯವನ್ನಾಡಿದರು.
ತಮ್ಮ ವಿದಾಯದ ಪ್ರದರ್ಶನ ಪಂದ್ಯದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಈ ರೀತಿಯ ಬೀಳ್ಕೊಡುಗೆ ಏರ್ಪಡಿಸಿರುವ ನಿಮ್ಮೆಲ್ಲರಿಗೂ ನಾನು ಚಿರಋಣಿ. 20 ವರ್ಷಗಳ ಕಾಲ ದೇಶವನ್ನು ಪ್ರತಿನಿಧಿಸಲು ಅವಕಾಶ ಸಿಕ್ಕಿದ್ದು ನನ್ನ ಪಾಲಿನ ಸೌಭಾಗ್ಯ
ನಾನು ಈ ಟೆನಿಸ್ ಕ್ರೀಡೆಯನ್ನು ತುಂಬಾ ಮಿಸ್ ಮಾಡಿಕೊಳ್ಳಲಿದ್ದೇನೆ ಎಂದು ಸಾನಿಯಾ ಮಿರ್ಜಾ ಹೇಳಿದ್ದಾರೆ.