ಪುಣೆ ಟೆಸ್ಟ್: 3 ಅಪರೂಪದ ದಾಖಲೆ ಮೇಲೆ ಕಣ್ಣಿಟ್ಟ ರೋಹಿತ್ ಶರ್ಮಾ

Oct 9, 2019, 3:52 PM IST

ಬೆಂಗಳೂರು[ಅ.09]: ಟೀಂ ಇಂಡಿಯಾ ಬ್ಯಾಟ್ಸ್ ಮನ್ ರೋಹಿತ್ ಶರ್ಮಾ ಆರಂಭಿಕನಾಗಿ ಕಣಕ್ಕಿಳಿದ ಮೊದಲ ಟೆಸ್ಟ್ ಪಂದ್ಯದಲ್ಲೇ 2 ಶತಕ ಸಿಡಿಸುವ ಮೂಲಕ ಅಬ್ಬರಿಸಿದ್ದಾರೆ. ದಕ್ಷಿಣ ಆಫ್ರಿಕಾದ ವಿರುದ್ಧ ವೈಜಾಗ್ ಟೆಸ್ಟ್ ಪಂದ್ಯದಲ್ಲಿ ಹಲವು ದಾಖಲೆಗಳನ್ನು ತಮ್ಮ ಹೆಸರಿಗೆ ಬರೆಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದರು.

ರೋಹಿತ್ ಒಂದು ಶತಕ; ಹಲವಾರು ದಾಖಲೆ ನಿರ್ಮಾಣ..!

ಮೂರು ಟೆಸ್ಟ್ ಪಂದ್ಯಗಳ ಸರಣಿಯ ಎರಡನೇ ಪಂದ್ಯ[ಅ.10] ಗುರುವಾರ ಪುಣೆಯಲ್ಲಿ ನಡೆಯಲಿದೆ. ಈ ಪಂದ್ಯವನ್ನೂ ಗೆದ್ದು ಟೀಂ ಇಂಡಿಯಾ ಸರಣಿ ಕೈವಶ ಮಾಡಿಕೊಳ್ಳುವ ಲೆಕ್ಕಾಚಾರದಲ್ಲಿದೆ.

ಇನ್ನು ಇದೇ ಟೆಸ್ಟ್ ಪಂದ್ಯದಲ್ಲಿ ರೋಹಿತ್ ಶರ್ಮಾ ಮೂರು ಅಪರೂಪದ ದಾಖಲೆಗಳನ್ನು ಬರೆಯಲು ತುದಿಗಾಲಿ ನಿಂತಿದ್ದಾರೆ. ಅಷ್ಟಕ್ಕೂ ರೋಹಿತ್ ಬ್ರೇಕ್ ಮಾಡಲು ಹೊರಟಿರುವ ದಾಖಲೆಗಳಾವು ಎನ್ನುವ ನಿಮ್ಮ ಕುತೂಹಲಕ್ಕೆ ಇಲ್ಲಿದೆ ನೋಡಿ ಉತ್ತರ...