
ಪ್ರಧಾನಿ ನರೇಂದ್ರ ಮೋದಿ ಮತ್ತೊಮ್ಮೆ ಪ್ರಧಾನಿ ಆಗಬೇಕು. ದೇಶದಲ್ಲಿ ಮಳೆ-ಬೆಳೆ ಚೆನ್ನಾಗಿ ಆಗಬೇಕು ಎನ್ನುವ ಆಶಯದಲ್ಲಿ 102 ವರ್ಷದ ಅಜ್ಜಿ ಮಹದೇಶ್ವರ ಬೆಟ್ಟಕ್ಕೆ ಪಾದಯಾತ್ರೆ ಮಾಡಿರುವ ವಿಡಿಯೋ ವೈರಲ್ ಆಗಿದೆ.
ಬೆಂಗಳೂರು (ಮಾ.7): ಮುಂದಿನ ಲೋಕಸಭೆ ಚುನಾವಣೆಯಲ್ಲಿ ನರೇಂದ್ರ ಮೋದಿ ಮತ್ತೊಮ್ಮೆ ಪ್ರಧಾನಿ ಆಗಬೇಕು ಎನ್ನುವ ಆಶಯದೊಂದಿಗೆ ಚಾಮರಾಜನಗರದ ಹನೂರು ತಾಲೂಕಿನಲ್ಲಿರುವ ಸುಪ್ರಸಿದ್ಧ ಯಾತ್ರಾಸ್ಥಳ ಮಲೆ ಮಹದೇಶ್ವರ ಬೆಟ್ಟಕ್ಕೆ 102 ವರ್ಷದ ಅಜ್ಜಿಯೊಬ್ಬರು ಪಾದಯಾತ್ರೆ ಮಾಡಿರುವುದು ವೈರಲ್ ಆಗಿದೆ.
ಶತಾಯುಷಿ ಅಜ್ಜಿ ಕಾಲ್ನಡಿಗೆಯ ಮೂಲಕವೇ 18 ಕಿಲೋಮೀಟರ್ ಚಾರಣ ಮಾಡಿದ್ದಾರೆ. ತುಮಕೂರು ಜಿಲ್ಲೆಯ ತಿಪಟೂರು ಮೂಲದ ಪಾರ್ವತಮ್ಮ ಅವರಿಗೆ ಚಾರಣದ ವೇಳೆ ಮಾತನಾಡಿಸುವ ಇತರ ಪಾದಯಾತ್ರಿಗಳು, ಯಾಕಾಗಿ ಈ ಪಾದಯಾತ್ರೆ ಎಂದು ಪ್ರಶ್ನೆ ಮಾಡಿದ್ದಾರೆ. ಈ ವೇಳೆ ನಮ್ಮ ರೈತರಿಗೆ ಒಳ್ಳೆಯದಾಗಬೇಕು, ಮಳೆ ಬೆಳೆ ಚೆನ್ನಾಗಿ ಆಗಬೇಕು ಎನ್ನುವ ಕಾರಣಕ್ಕೆ ಪಾದಯಾತ್ರೆ ಮಾಡುತ್ತಿದ್ದೇನೆ ಎಂದಿದ್ದಾರೆ.
370ನೇ ವಿಧಿ ರದ್ದಾದ ಬಳಿಕ ಮೊದಲ ಬಾರಿಗೆ ಶ್ರೀನಗರಕ್ಕೆ ಭೇಟಿ ನೀಡಿದ ಪ್ರಧಾನಿ ಮೋದಿ!
ಕೊನೆಗೆ ದೇಶದ ಮುಂದಿನ ಪ್ರಧಾನಿ ಯಾರಾಗಬೇಕು ಎಂದು ಕೇಳಿದಾಗ, ನರೇಂದ್ರ ಮೋದಿಯೇ ಆಗಬೇಕು ಎಂದು ಹೇಳಿದ್ದಾರೆ. ಶತಾಯುಷಿಯ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ಭಾರೀ ವೈರಲ್ ಆಗಿದ್ದು, ಪ್ರಧಾನಿ ಮೋದಿ ಅವರ ಅಭಿಮಾನಿಗಳು ಇದನ್ನು ಮುಕ್ತವಾಗಿ ಹಂಚಿಕೊಂಡಿದ್ದಾರೆ.