* ಬಿಡಿಎ ಮಧ್ಯವರ್ತಿಗಳು ಹಾಗೂ ಏಜೆಂಟ್‌ಗಳ ಮನೆಗಳ ಮೇಲೆ ದಾಳಿ
* ನೂರಕ್ಕೂ ಹೆಚ್ಚು ಅಧಿಕಾರಿಗಳೂ ಹಾಗೂ ಸಿಬ್ಬಂದಿಯಿಂದ ದಾಳಿ
* ಬಿಡಿಎ ಅಧಿಕಾರಿಗಳ ಜೊತೆ ಸೇರಿ ಅವ್ಯವಹಾರದ ಆರೋಪ
ಬೆಂಗಳೂರು(ಮಾ.22): ಬೆಳ್ಳಂಬೆಳಿಗ್ಗೆ ಬೆಂಗಳೂರಿನಲ್ಲಿ ಎಸಿಬಿ ಅಧಿಕಾರಿಗಳು ಅಖಾಡಕ್ಕೆ ಇಳಿದಿದ್ದಾರೆ. ಹೌದು, ಬಿಡಿಎ ಮಧ್ಯವರ್ತಿಗಳು ಹಾಗೂ ಏಜೆಂಟ್‌ಗಳ ಮನೆಗಳ ಮೇಲೆ ದಾಳಿ ಮಾಡಲಾಗಿದೆ. ಬೆಂಗಳೂರಿನಲ್ಲಿ ಒಟ್ಟು 9 ಕಡೆಗಳಲ್ಲಿ ಎಸಿಬಿ ಅಧಿಕಾರಿಗಳು ದಾಳಿ ಮಾಡಿದ್ದಾರೆ. ನೂರಕ್ಕೂ ಹೆಚ್ಚು ಅಧಿಕಾರಿಗಳೂ ಹಾಗೂ ಸಿಬ್ಬಂದಿಯಿಂದ ದಾಳಿ ಮಾಡಲಾಗಿದೆ. ಬಿಡಿಎ ಅಧಿಕಾರಿಗಳ ಜೊತೆ ಸೇರಿ ಅವ್ಯವಹಾರದಲ್ಲಿ ತೊಡಗಿದ್ದಂತ ಆರೋಪದ ಮೇಲೆ ದಾಳಿ ಮಾಡಲಾಗಿದೆ ಅಂತ ತಿಳಿದು ಬಂದಿದೆ. ಎಸಿಬಿ ಎಸ್‌ಪಿ ಉಮಾಪ್ರಶಾಂತ್ ಅವರ ನೇತೃತ್ವದಲ್ಲಿ ರೇಡ್ ಮಾಡಲಾಗಿದೆ.
Hijab Verdict ಹೈಕೋರ್ಟ್ ತೀರ್ಪನ್ನು ಟೀಕಿಸುವುದು ದೊಡ್ಡ ಅಪರಾಧ, ಜೈಲಿಗಟ್ಟುವ ಅಧಿಕಾರ ನ್ಯಾಯಾಲಯಕ್ಕಿದೆ!